ಸಕಲ ಜೀವರಾಶಿಗೂ ಪರಿಸರವೇ ಮೂಲಾಧಾರ
ಬೈಸಿಕಲ್-ಪರಿಸರ ದಿನ ಪ್ರಯುಕ್ತ ಜನಜಾಗೃತಿ ಜಾಥಾ
Team Udayavani, Jun 7, 2022, 2:24 PM IST
ಧಾರವಾಡ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಸಂಘ ಮತ್ತು ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಡಿಎಚ್‌ಒ ಕಾರ್ಯಾಲಯದ ಆವರಣದಲ್ಲಿ “ಇರುವುದೊಂದೆ ಭೂಮಿ, ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಸುಸ್ಥಿರವಾಗಿ ಬದುಕೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ಬೈಸಿಕಲ್ ದಿನ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜನಜಾಗೃತಿ ಜಾಥಾ ನಡೆಸಲಾಯಿತು.
ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಬಿ. ಸಿಕರಿಗೌಡರ ಮಾತನಾಡಿ, ಎಲ್ಲ ಜೀವರಾಶಿಗಳಿಗೂ ಪರಿಸರವೇ ಮೂಲಾಧಾರ ವಾಗಿದೆ. ಪರಿಸರ ಮತ್ತು ಮಾನವ ನಾಣ್ಯದ ಎರಡು ಮುಖಗಳಿದ್ದಂತೆ. ಪರಿಸರವನ್ನು ಎಷ್ಟು ಸ್ವಚ್ಛವಾಗಿಟ್ಟುಕೊಳ್ಳುತ್ತೇವೋ ಅಷ್ಟು ಸುರಕ್ಷಿತವಾಗಿರಬಹುದು. ಪರಿಸರ ರಕ್ಷಣೆ, ಗಿಡಮರಗಳನ್ನು ನೆಡುವುದು, ಪರಿಸರಕ್ಕೆ ಹಾನಿ ಆಗದ ಹಾಗೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಮಾತನಾಡಿ, ಪರಿಸರ ರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ. ಮುಂದಿನ ಜನಾಂಗಕ್ಕೆ ಪರಿಸರವನ್ನು ಉಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಪ್ರತಿಯೊಬ್ಬರೂ ಈ ಕೆಲಸ ಮಾಡಬೇಕು. ಕಾಡು ಉಳಿಸಿದರೆ ನಮ್ಮ ನಾಡನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಗೌತಮ್ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ| ಶಶಿ ಪಾಟೀಲ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ| ಸುಜಾತಾ ಹಸವಿಮಠ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪ್ರಜೆಂಟೇಷನ್ ಶಾಲೆಯ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಜನಜಾಗೃತಿ ಜಾಥಾ ಅಭಿಯಾನವು ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಿಂದ ಪ್ರಾರಂಭವಾಗಿ ಹಳೆಯ ಎಸ್‌ಪಿ ಸರ್ಕಲ್, ಎಲ್‌ಇಎ ಕ್ಯಾಂಟೀನ್ ರಸ್ತೆ, ಎಚ್ ಡಿಎಂಸಿ ಆಸ್ಪತ್ರೆ, ಶಿವಾಜಿ ಸರ್ಕಲ್, ಬಿಆರ್‌ಟಿಎಸ್ ಬಸ್ ಸ್ಟ್ಯಾಂಡ್ ಮತ್ತು ಜ್ಯುಬಿಲಿ ವೃತ್ತ ಮತ್ತಿತರ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.