ಮನುಷ್ಯನ ಸ್ವಾರ್ಥಕ್ಕೆ ನಾಶವಾಗುತ್ತಿದೆ ಪರಿಸರ
Team Udayavani, Apr 23, 2018, 5:22 PM IST
ರಾಣಿಬೆನ್ನೂರ: ಆಧುನಿಕ ಬದುಕಿನ ವ್ಯವಸ್ಥೆಯಲ್ಲಿ ನಮ್ಮ ನೆಲ-ಜಲ ಮತ್ತು ಪರಿಸರವನ್ನು ಹಾಳು ಮಾಡುತ್ತಿದ್ದೇವೆ.
ಇದರ ಪರಿಣಾಮ ಭವಿಷ್ಯದ ಬದುಕಿಗೆ ಮಾರಕವಾಗಲಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ, ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಬಿ.ಜಿ. ಪ್ರಮೋದ್ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಕಮದೋಡ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲೂಕು ಪಂಚಾಯತ್ ಆಯೋಜಿಸಿದ್ದ ಭೂ ಸಂರಕ್ಷಣಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಗಿಡ-ಮರಗಳು ಪ್ರತಿಯೊಬ್ಬ ಮನುಷ್ಯನ ಆರೋಗ್ಯಯುತ ಬದುಕಿಗೆ ಸಹಕಾರಿಯಾಗಿವೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ
ಅವುಗಳನ್ನು ಉಳಿಸದೆ ಕಡಿದು ನಾಶ ಮಾಡುತ್ತಿದ್ದಾನೆ. ಇದರಿಂದ ಬಿಸಿಲಿನ ತಾಪಮಾನ ಹೆಚ್ಚಾಗಿ ಕಾಲ ಕಾಲಕ್ಕೆ ಸಮರ್ಪಕವಾಗಿ ಮಳೆ ಬಾರದೆ ಕ್ಷಾಮ ದುರಿಸುವಂತಾಗಿದೆ. ಆದ ಕಾರಣ ಎಲ್ಲರೂ ತಮ್ಮ ಮನೆ ಸುತ್ತಲೂ ಮರ-ಗಿಡಗಳನ್ನು ಬೆಳೆಸುವ ಮೂಲಕ ಪ್ರಕೃತಿಗೆ ಕೊಡುಗೆ ನೀಡಿದಾಗ ಮಾತ್ರ ನಮ್ಮ ಉಳಿವಿದೆ ಎಂದರು.
ನ್ಯಾಯಾಧಿಧೀಶರಾದ ಪಿ. ಶಿವರಾಜ್ ಮಾತನಾಡಿ, ಸುಂದರ ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ನಾಗರಿಕರೂ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸಲು ಮುಂದಾಗಬೇಕು. ಇದರಿಂದ ಮಣ್ಣಿನ ಸವಕಳಿಯನ್ನು ತಡೆಯಬಹುದಾಗಿದೆ. ಈ ನಿಟ್ಟಿನತ್ತ ಎಲ್ಲರೂ ಪರಿಸರ ರಕ್ಷಣೆಯಲ್ಲಿ ತೊಡಗಬೇಕು ಎಂದರು. ವಕೀಲರ ಸಂಘದ ಅಧ್ಯಕ್ಷ ಪ್ರಶಾಂತ ಸೂರಣಗಿ, ಉಪಾಧ್ಯಕ್ಷ ಆರ್.ಡಿ. ಗೋರವರ್ ಇದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಸವನಗೌಡ ಪಾಟೀಲ ಸ್ವಾಗತಿಸಿ, ನಿರೂಪಿಸಿದರು. ದ್ವಿತೀಯ ದರ್ಜೆ ಸಹಾಯಕ ಎಸ್.ಬಿ. ಬಸಪ್ಪಳವರ್
ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.