ಖಾಸಗಿ ಆಸ್ಪತ್ರೆಗಳಿಗೆ ಅಗತ್ಯ ನೆರವು: ಜಿಲ್ಲಾಧಿಕಾರಿ
Team Udayavani, Jul 20, 2020, 10:57 AM IST
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಿಮ್ಸ್ ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರದ ನಿರ್ದೇಶನದಂತೆ ಶೇ.50 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಟ್ಟು ಚಿಕಿತ್ಸೆ ನೀಡಲು ಮುಂದೆ ಬರುವ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಾಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.
ಬೈಲಪ್ಪನವರನಗರದ ಐಎಂಎ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ರವಿವಾರ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಲಕ್ಷಣಗಳು ಇಲ್ಲದ ಎಲ್ಲಾ ರೋಗಿಗಳಿಗೆ ಜಿಲ್ಲಾಡಳಿತದಿಂದಲೇ ಕೋವಿಡ್-19 ಕೇರ್ ಕೇಂದ್ರಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಗಂಭೀರ ಲಕ್ಷಣವುಳ್ಳವರನ್ನು ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಿಸಲಾಗುವುದು. ಕಿಮ್ಸ್, ಡಿಮಾನ್ಸ್ ಹಾಗೂ ಎನ್‌ಎಂಆರ್ ಲ್ಯಾಬ್‌ಗಳಲ್ಲಿ ಆರ್‌ಟಿಪಿಸಿಆರ್ ತಂತ್ರಜ್ಞಾನ ಬಳಸಿ ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ ಎಂದು ಹೇಳಿದರು.
ಈಗಾಗಲೇ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಕೊವೀಡ್-19 ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಆ್ಯಂಟಿಜನ್ ಟೆಸ್ಟ್ ಕಿಟ್‌ಗಳನ್ನು ನೀಡಲಾಗಿದೆ. ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಮುಂದೆ ಬರುವ ಖಾಸಗಿ ಆಸ್ಪತ್ರೆಗಳಿಗೆ ಗುಣಮುಖರಾಗಿರುವ ಕೋವಿಡ್ ರೋಗಿಗಳ ಮಾಹಿತಿ ನೀಡಲಾಗುವುದು. ಯಾವುದೇ ಖಾಸಗಿ ಆಸ್ಪತ್ರೆಗಳು ಗರ್ಭಿಣಿಯರ ಕೋವಿಡ್ ತಪಾಸಣೆ ನಡೆಸಲು ಹಣ ತೆಗೆದುಕೊಳ್ಳಬಾರದು. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಿಗೆ ಜಿಲ್ಲಾಡಳಿತದಿಂದ ಊಟ ಸರಬರಾಜು ಮಾಡಲಾಗುವುದು. ಸ್ವತ್ಛತಾ ಸಿಬ್ಬಂದಿ ಸೇರಿದಂತೆ ನಿರ್ವಹಣೆಗಾಗಿ ಇತರೆ ಅಗತ್ಯ ಸಿಬ್ಬಂದಿ ಜಿಲ್ಲಾಡಳಿತದ ವತಿಯಿಂದ ನೇಮಿಸಲಾಗುವುದು ಎಂದು ಹೇಳಿದರು.
ಖಾಸಗಿ ಕ್ಯಾನ್ಸರ್ ಹಾಗೂ ಹೆರಿಗೆ ಆಸ್ಪತ್ರೆಗಳಿಗೆ ಕೋವಿಡ್-19 ಚಿಕಿತ್ಸೆ ನೀಡುವುದರಿಂದ ವಿನಾಯಿತಿ ನೀಡಬೇಕು ಎಂದು ಖಾಸಗಿ ವೈದ್ಯರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.