ಗ್ರಾಪಂಗಳ ಅವಧಿ ಪೂರ್ಣ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ


Team Udayavani, May 27, 2020, 11:14 AM IST

ಗ್ರಾಪಂಗಳ ಅವಧಿ ಪೂರ್ಣ; ಸಚಿವ ಸಂಪುಟ ಸಭೆಯಲ್ಲಿ  ಚರ್ಚಿಸಿ ತೀರ್ಮಾನ

ಹುಬ್ಬಳ್ಳಿ: ಅವಧಿ ಪೂರ್ಣಗೊಳ್ಳುವ ಗ್ರಾಪಂಗಳಿಗೆ ಆಡಳಿತಾಧಿಕಾರಿ ಸಮಿತಿ ನಿಯೋಜಿಸಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಇನ್ನೂ ಯಾವುದೂ ನಿರ್ಧಾರವಾಗಿಲ್ಲ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ಮಂಗಳವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್‌ ಅಂತ್ಯದೊಳಗೆ ರಾಜ್ಯದ ಸುಮಾರು 2600 ಗ್ರಾಪಂಗಳ ಅವಧಿ ಪೂರ್ಣಗೊಳ್ಳಲಿದೆ. ಡಿಸೆಂಬರ್‌ ಅಂತ್ಯದೊಳಗೆ ಬಹುತೇಕ ಗ್ರಾಪಂಗಳ ಅವಧಿ ಪೂರ್ಣಗೊಳ್ಳಲಿದೆ. ಚುನಾವಣೆ ನಡೆಸುವ ಬಗ್ಗೆ ಚುನಾವಣಾ ಆಯೋಗ ಅಯಾಜಿಲ್ಲಾಧಿಕಾರಿಗಳ ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳಲಿದೆ. ಚುನಾವಣೆ ಯಾವಾಗ ಘೋಷಣೆಯಾದರೂ ನಾವು ಸಿದ್ಧರಿರುವುದಾಗಿ ತಿಳಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಸಾಧ್ಯವಾಗದಿದ್ದರೆ ಅಲ್ಲಿಯವರೆಗೆ ಏನು ವ್ಯವಸ್ಥೆ ಎನ್ನುವ ಬಗ್ಗೆ ಚರ್ಚೆ ನಡೆದಿದ್ದು, ಇರುವವರನ್ನೇ ಮುಂದುವರಿಸಬೇಕೋ, ಆಡಳಿತಾಧಿಕಾರಿ ಸಮಿತಿ, ನಾಮ ನಿರ್ದೇಶನ ಈ ಆಯಾಮಗಳಲ್ಲಿ ಅಭಿಪ್ರಾಯ ವ್ಯಕ್ತವಾಗಿದ್ದು, ಆಡಳಿತಾಧಿಕಾರಿ ಸಮಿತಿ ಸೂಕ್ತ ಎನ್ನುವ ಅಭಿಮತ ವ್ಯಕ್ತವಾಗಿದೆ. ಆದರೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ ಎಂದರು.

ನರೇಗಾಕ್ಕೆ ಉತ್ತಮ ಸ್ಪಂದನೆ: ಧಾರವಾಡ ಜಿಲ್ಲೆಯ 144 ಗ್ರಾಪಂ ಸೇರಿದಂತೆ, ರಾಜ್ಯದ 6021 ಗ್ರಾಪಂ ಗಳಲ್ಲಿ ನರೇಗಾ ಯಶಸ್ವಿಯಾಗಿ ನಡೆಯುತ್ತಿದೆ. ಮೇ 25ರಂದು ಒಂದೇ ದಿನ ರಾಜ್ಯದಲ್ಲಿ 9,19,639 ಜನರಿಗೆ ಉದ್ಯೋಗ ನೀಡಲಾಗಿದೆ. ಅತೀ ಹೆಚ್ಚು ಜನರಿಗೆ ಉದ್ಯೋಗ ನೀಡಿದ ಪೈಕಿ ದೇಶದಲ್ಲಿ ಛತ್ತಿಸಗಡ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಈ ಹಿಂದೆ 245 ರೂ. ಕೂಲಿ ನೀಡಲಾಗುತ್ತಿತ್ತು. ಈಗ 275 ರೂ. ದೊರೆಯುತ್ತಿದೆ. ರಾಜ್ಯಕ್ಕೆ ಮಾತ್ರ ಹೆಚ್ಚಿನ ಕೂಲಿ ದೊರೆಯುವಂತೆ ಪ್ರಧಾನಿಗಳು ಕಾಳಜಿ ತೋರಿದ್ದಾರೆ. ಹಿಂದೆ ಬಾಕಿಯಿದ್ದ 1861 ಕೋಟಿ ರೂ. ಕೂಲಿ ಹಾಗೂ ಇತರೆ ಸಲಕರಣೆಗೆ ನೀಡಬೇಕಿದ್ದ ಬಾಕಿ ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ಬಂದವರಿಗೆ ಜಾಬ್‌ಕಾರ್ಡ್‌: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮರಳಿ ಬಂದ ಪ್ರತಿಯೊಬ್ಬರಿಗೆ ಜಾಬ್‌ ಕಾರ್ಡ್‌ ನೀಡಿ ಉದ್ಯೋಗ ನೀಡಲಾಗುವುದು. ಚುನಾಯಿತಿ ಪ್ರತಿನಿಧಿ, ಸರಕಾರಿ ನೌಕರ ಹಾಗೂ ಆದಾಯ ತೆರಿಗೆ ಪಾವತಿಸುವವರನ್ನು ಬಿಟ್ಟು ಉಳಿದವರೆಲ್ಲರಿಗೂ ಜಾಬ್‌ ಕಾರ್ಡ್‌ ನೀಡಲಾಗುವುದು. ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ ಸೋಂಕಿನ ಭಯದಿಂದ ಜನರು ನಿರೀಕ್ಷಿತ ಪ್ರಮಾಣದಲ್ಲಿ ಆಗಮಿಸುತ್ತಿಲ್ಲ. ಅದರೂ ದಿನದಿಂದ ದಿನಕ್ಕೆ ಉದ್ಯೋಗಕ್ಕೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ಅಂತರ್ಜಲ ಪುನಶ್ಚೇತನಕ್ಕೆ ಒತ್ತು: ಹಿಂದೆ ಆರ್ಟ್‌ ಆಫ್‌ ಲಿವಿಂಗ್‌ ಸಂಶೋಧನೆ ಪ್ರಕಾರ ಶೇ.40 ಮಳೆ ನೀರು ಇಂಗುತ್ತಿತ್ತು. ಈಗಿನ ಸಂಶೋಧನೆ ಪ್ರಕಾರ ಶೇ.5ಮಾತ್ರ ನೀರು ಇಂಗುತ್ತಿರುವುದು ದೊಡ್ಡ ದುರಂತ. ಹೀಗಾಗಿ ನರೇಗಾ ಯೋಜನೆಯಲ್ಲಿ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಬದು, ಕೃಷಿ ಹೊಂಡ, ಚೆಕ್‌ ಡ್ಯಾಮ್‌, ಕಲ್ಯಾಣಿ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಎರಡು ಮೂರು ವರ್ಷದಲ್ಲಿ ಆರ್ಟ್‌ ಆಫ್‌ ಲಿವಿಂಗ್‌ನೊಂದಿಗೆ ಮೂರು ವರ್ಷದ ಒಪ್ಪಂದ ಮಾಡಿಕೊಂಡಿದ್ದು, ಇದಕ್ಕೆ ಸರಕಾರದಿಂದ ಯಾವುದೇ ಹಣ ಪಾವತಿ ಮಾಡಲ್ಲ. ಮೂರು ವರ್ಷದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಕಾರ್ಯ ಯಶಸ್ವಿಯಾಗಲಿದೆ. ಆರಂಭದ ಹಂತದಲ್ಲಿ ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ 9 ಜಿಲ್ಲೆಗಳಲ್ಲಿ ಆರಂಭವಾಗಿ ಉಳಿದ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದರು.

ಸರಕಾರದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಗೆ ನೀಡಿದ ಅನುದಾನ ಖರ್ಚು ಮಾಡದೆ ವಾಪಸ್‌ ಹೋಗದಂತೆ ಯೋಜನೆ ರೂಪಿಸಲಾಗಿದೆ. ಒಂದು ರೂಪಾಯಿ ಸರಕಾರಕ್ಕೆ ವಾಪಸ್‌ ಹೋಗದಂತೆ ಎಲ್ಲಾ ಯೋಜನೆಗಳನ್ನು ಸಕಾರಗೊಳಿಸಿ ಸಂಪೂರ್ಣ ಅನುದಾನ ಸದ್ಬಳಕೆ ಮಾಡಿಕೊಳ್ಳಲಾಗುವುದು. – ಕೆ.ಎಸ್‌.ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಸಚಿವ

ಟಾಪ್ ನ್ಯೂಸ್

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.