ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ; ಪ್ರೌಢಶಿಕ್ಷಣ ಸಚಿವರಿಗೆ ಸಂಕನೂರ ಆಗ್ರಹ
Team Udayavani, May 23, 2020, 7:45 AM IST
ಧಾರವಾಡ: ಕೋವಿಡ್ ದಿಂದ ಲಾಕ್‌ಡೌನ್ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಿಗೆ ಆಗ್ರಹಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಯಾವುದೇ ನಗರ ಪ್ರದೇಶದಲ್ಲಿ ವಸತಿಗಾಗಿ ಲಾಡ್ಜಿಂಗ್ ಮತ್ತು ಹೋಟೆಲ್‌ಗಳು ಲಾಕಡೌನ್ ದಿಂದ ಪ್ರಾರಂಭವಾಗಿಲ್ಲ. ಹೀಗಾಗಿ ಬೇರೆ ಜಿಲ್ಲೆಯ ಉಪನ್ಯಾಸಕರು ನಿಗದಿತ ಮೌಲ್ಯಮಾಪನ ಕೇಂದ್ರಕ್ಕೆ ಬಂದು ಮೌಲ್ಯಮಾಪನ ಮಾಡಲು ಆಗಲ್ಲ. ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಮೌಲ್ಯಮಾಪನ ಕೇಂದ್ರ ಮಾಡುವುದರಿಂದ ಎಲ್ಲಾ ಜಿಲ್ಲೆಯಲ್ಲಿ ಇರತಕ್ಕಂತಹ ಉಪನ್ಯಾಸಕರು ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಕೂಲವಾಗಲಿದೆ ಎಂದಿದ್ದಾರೆ. 55ವರ್ಷ ಮೇಲ್ಪಟ್ಟ ಉಪನ್ಯಾಸಕರಿಗೆ ಮೌಲ್ಯಮಾಪನ ಕಾರ್ಯದಿಂದ ವಿನಾಯಿತಿ ನೀಡುವುದು, ಗರ್ಭಿಣಿ ಮಹಿಳೆಯರಿಗೆ ಹಾಗೂ 2-3 ವರ್ಷದ ಮಗು ಇರುವ ತಾಯಂದಿರಿಗೆ, ಉಸಿರಾಟದ ತೊಂದರೆ, ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿರುವವರಿಗೆ ವಿನಾಯತಿ ನೀಡಬೇಕು. ಮೌಲ್ಯಮಾಪನ ಕಾರ್ಯದಲ್ಲಿ ನಿರತರಾಗಿರುವವರಿಗೆ ಇಲಾಖೆಯಿಂದಲೇ ಮಾಸ್ಕ್- ಸ್ಯಾನಿಟೈಸರ್ ಪೂರೈಸುವುದರ ಜತೆಗೆ ಸ್ಕ್ರೀನಿಂಗ್ ನಡೆಸುವಂತೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.