![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 9, 2020, 8:35 AM IST
ಧಾರವಾಡ: ದ್ವಿತೀಯ ಪಿಯುಸಿ ವಿಜ್ಞಾನ ವಿಷಯದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ಎಲ್ಲ ಸಹಾಯಕ ಮೌಲ್ಯಮಾಪಕರು ಹಾಗೂ ಉಪ ಮುಖ್ಯ ಮೌಲ್ಯಮಾಪಕರುಗಳನ್ನು ಆಯಾ ಕಾಲೇಜುಗಳಿಂದ ಕಡ್ಡಾಯವಾಗಿ ಬಿಡುಗಡೆ ಮಾಡಿ ತಕ್ಷಣ ಮೌಲ್ಯಮಾಪನಕ್ಕೆ ಹಾಜರಾಗುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿ ಒತ್ತಡ ಹೇರಿದ್ದು, ಸಮಂಜಸವಾದ ಕ್ರಮವಲ್ಲ ಮತ್ತು ಅದನ್ನು ಕೂಡಲೇ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಜೂ.5ರಿಂದ ಎಲ್ಲ ವಿಜ್ಞಾನ ವಿಷಯದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ಆರಂಭಿಸಿದ್ದು ವಿಷಾದಕರ ಸಂಗತಿ. ರಾಜ್ಯದ 30 ಜಿಲ್ಲೆಗಳಿಂದ ಉಪನ್ಯಾಸಕರು ಈ ಮೌಲ್ಯಮಾಪನ ಕಾರ್ಯಕ್ಕೆ ಹೋಗಬೇಕಿದೆ. ಕೋವಿಡ್-19ದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇನ್ನೂ ಸರಿಯಾದ ರೀತಿಯ ಸಾರಿಗೆ ವ್ಯವಸ್ಥೆ ಇಲ್ಲ, ಬೆಂಗಳೂರಿನಲ್ಲಿ ಉಳಿದುಕೊಳ್ಳಲು ಲಾಡ್ಜಿಂಗ್ ಮತ್ತು ಹೋಟೆಲ್ ವ್ಯವಸ್ಥೆಯೂ ಸರಿಯಾಗಿಲ್ಲ. ಕಾರಣ ಬೆಂಗಳೂರು ಕೇಂದ್ರ ಪ್ರದೇಶದಿಂದ ಸಾಕಷ್ಟು ದೂರವಿರುವ ಜಿಲ್ಲೆಗಳಾದ ಬೀದರ, ಗುಲಬರ್ಗಾ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಕಾರವಾರ, ಹಾವೇರಿ ಈ ಜಿಲ್ಲೆಗಳ ಮೌಲ್ಯಮಾಪಕರಿಗೆ ಈ ಮೌಲ್ಯಮಾಪನ ಕಾರ್ಯದಿಂದ ವಿನಾಯತಿ ನೀಡಬೇಕು. ಮೌಲ್ಯಮಾಪನ ಕಾರ್ಯಕ್ಕೆ ಉಪನ್ಯಾಸಕರನ್ನು ಕಡ್ಡಾಯವಾಗಿ ಬಿಡುಗಡೆ ಮಾಡುವಂತೆ ಹೊರಡಿಸಿದ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಸಂಕನೂರ ಆಗ್ರಹಿಸಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.