ಚಿಣ್ಣರೊಂದಿಗೆ ಮುಸ್ಸಂಜೆ ಕಾರ್ಯಕ್ರಮ
Team Udayavani, Dec 19, 2018, 5:31 PM IST
ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಧಾರವಾಡದ ಬಾಲಮಂದಿರಗಳು, ತೆರೆದ ತಂಗುದಾಣಗಳು ಹಾಗೂ ಹು-ಧಾ ವೀಕ್ಷಣಾಲಯಗಳ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಆಲೂರು ಭವನದಲ್ಲಿ ಚಿಣ್ಣರೊಂದಿಗೆ ಮುಸ್ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ಈಶಪ್ಪ ಭೂತೆ ಮಾತನಾಡಿ, ಬಾಲಮಂದಿರದಲ್ಲಿರುವ ಮಕ್ಕಳು ಭಗವಂತನ ಮಕ್ಕಳಾಗಿದ್ದು, ಅನಾಥರೆಂದು ಭಾವಿಸಬಾರದು. ಸರ್ಕಾರ ಹಾಗೂ ಇಲಾಖೆಗಳು ಅನೇಕ ಯೋಜನೆ ಮೂಲಕ ಪ್ರತಿ ಹೆಜ್ಜೆಗೂ ಮಕ್ಕಳ ಏಳ್ಗೆಗಾಗಿ ಕಾರ್ಯನಿರ್ವಹಿಸುತ್ತಿವೆ. ಬಾಲಮಂದಿರದ ಪ್ರತಿಯೊಂದು ಮಗುವಿಗೂ ಗಮನ ನೀಡುವುದು ಮುಖ್ಯ ಎಂದರು.
ಹಿರಿಯ ಸಿವಿಲ್ ನ್ಯಾಯಾ ಧೀಶ ಆರ್.ಎಸ್. ಚಿಣ್ಣನ್ನವರ, ಬಸವಾನಂದ ಸ್ವಾಮೀಜಿ, ಮಕ್ಕಳ ಸಾಹಿತಿ ಶಂಕರ ಹಲಗತ್ತಿ, ಹಿರಿಯ ಜಾನಪದ ತಜ್ಞ ಡಾ| ಶ್ರೀಶೈಲ ಹುದ್ದಾರ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ ಅಧ್ಯಕತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣಾ ಸಂಗಳದ ಸ್ವಾಗತಿಸಿದರು. ನಿಂಗಪ್ಪ ಮಡಿವಾಳರ ನಿರೂಪಿಸಿದರು. ದೀಪಾ ಜಾವೂರ ವಂದಿಸಿದರು. ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.