ಸ್ವಚ್ಛ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ

Team Udayavani, Jun 25, 2017, 2:25 PM IST

hub5.jpg

ಧಾರವಾಡ: ಆರೋಗ್ಯವಂತ, ಸ್ವಾಭಿಮಾನಿ ಬದುಕಿಗಾಗಿ ಪ್ರತಿಯೊಂದು ಕುಟುಂಬ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಜನಪ್ರತಿನಿ ಧಿಗಳು, ಅ ಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳು ಸಹಕಾರ ನೀಡಬೇಕು. ಇದರಿಂದ ಮಹಾತ್ಮಾ ಗಾಂಧೀಜಿ ಕಂಡ ಕನಸು ಸ್ವಚ್ಛ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ನವಲಗುಂದ ಶಾಸಕ ಎನ್‌.ಎಚ್‌. ಕೋನರಡ್ಡಿ ಹೇಳಿದರು. 

ಕೇಂದ್ರ ಸರ್ಕಾರದ ಕ್ಷೇತ್ರ ಪ್ರಚಾರ ನಿರ್ದೇಶನಾಲಯ ಧಾರವಾಡ ಮತ್ತು ವಿಜಯಪುರ ಘಟಕಗಳು ತಾಲೂಕಿನ ತಿರ್ಲಾಪುರ ಗ್ರಾಮದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನ, ಹೆಣ್ಣು ಮಗು ರಕ್ಷಿಸಿ ಶಿಕ್ಷಣ ಕೋಡಿಸಿ, ಜನಧನ ಯೋಜನೆ ಹಾಗೂ ಯೋಗ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶೌಚಾಲಯ ನಿರ್ಮಾಣ ವಿಷಯದಲ್ಲಿ ಸಾರ್ವಜನಿಕರಿಗೂ ಹೆಚ್ಚಿನ ಜವಾಬ್ದಾರಿಯಿದೆ. ಹಣಕಾಸಿನ ಸಮಸ್ಯೆ ಮುಂದಿಟ್ಟುಕೊಂಡು ಶೌಚಾಲಯ ನಿರ್ಮಾಣ ಮಾಡದಿರುವುದು ಸಮರ್ಥನೀಯವಲ್ಲ ಎಂದರು. ನವಲಗುಂದ ತಾಪಂ ಇಒ ಬಿ.ಎಸ್‌. ಮೂಗನೂರಮಠ ಮಾತನಾಡಿ, ಜನರ ಬೇಜವಾಬ್ದಾರಿಯಿಂದ ಬಯಲು ಮಲ ವಿಸರ್ಜನೆ ತಾಲೂಕಿನಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೂಢಿಯಲ್ಲಿದೆ.

ಇದನ್ನು ಹತೋಟಿಗೆ ತರಲು ಮತ್ತು ಶೌಚಾಲಯ ನಿರ್ಮಿಸಲು ಪ್ರೇರೇಪಿಸಿದವರಿಗೆ 150 ರೂ. ಪ್ರೇರಣಾ ಧನ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕ್ಷೇತ್ರ ಪ್ರಚಾರ ಅ ಧಿಕಾರಿ ಜಿ. ತುಕಾರಾಮ ಗೌಡ ಮಾತನಾಡಿ, ಶೌಚಾಲಯ ನಿರ್ಮಾಣಕ್ಕೆ ಬಿಪಿಎಲ್‌ ಕಾರ್ಡ್‌ ಹೊಂದಿರುವ ದಲಿತ ಕುಟುಂಬಕ್ಕೆ 15 ಸಾವಿರ ಹಾಗೂ ಎಪಿಎಲ್‌ ಕಾರ್ಡ್‌ ಹೊಂದಿರುವ ಮಹಿಳಾ ಪ್ರಧಾನ ಮತ್ತು ಮಹಿಳಾ ಅಂಗವಿಕಲ ಕುಟುಂಬಗಳಿಗೆ 12 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು ಎಂದರು. 

ನವಲಗುಂದ ತಾಪಂ ಅಧ್ಯಕ್ಷೆ ವೆಂಕಮ್ಮ ಚಾಕಲಬ್ಬಿ ಮಾತನಾಡಿದರು. ಆಯುಷ್‌ ವೈದ್ಯಾ ಧಿಕಾರಿ ಡಾ| ಹೇಮಂತ, ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ಮೇಲ್ವಿಚಾರಕರಾದ ಗಾಯತ್ರಿ ಉಪನ್ಯಾಸ ನೀಡಿದರು. ಗ್ರಾಮದ ಕೆವಿಜಿ ಬ್ಯಾಂಕ್‌ ಶಾಖಾ ವ್ಯವಸ್ಥಾಪಕ ಎಸ್‌.ಜಿ. ಕುಲಕರ್ಣಿ ಜನಧನ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ತಿರ್ಲಾಪುರ ಗ್ರಾಪಂ ಅಧ್ಯಕ್ಷ ಬಸಪ್ಪ ಅಣ್ಣಗೇರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ಶಾಲಾ ವಿದ್ಯಾರ್ಥಿಗಳು ನಡೆಸಿದ ಜಾಗೃತಿ ಜಾಥಾಕ್ಕೆ ಗ್ರಾಪಂ ಅಧ್ಯಕ್ಷ ಬಸಪ್ಪ ಅಣ್ಣಗೇರಿ ಚಾಲನೆ ನೀಡಿದರು. ಮುರಳೀಧರ ಕಾರಬಾರಿ ನಿರೂಪಿಸಿದರು. ನಾಗಲಿಂಗ ಗುಳೇದ ಸ್ವಾಗತಿಸಿದರು. ಪಿಡಿಒ ವಿಜಯಲಕ್ಷ್ಮೀ ಕೂರವರ ವಂದಿಸಿದರು.  

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.