ಸ್ಮಾರ್ಟ್‌ಸಿಟಿ ಕಾಮಗಾರಿ ತ್ವರಿತಕ್ಕೆ ಸೂಚನೆ
ನ್ಯೂನತೆ ಸರಿಪಡಿಸಲು ಅಧಿಕಾರಿಗಳಿಗೆ ತಾಕೀತು | ವಿವೇಕಾನಂದರ ಬದಲಿ ಪ್ರತಿಮೆ ಸ್ಥಾಪನೆಗೆ ಚಿಂತನೆ
Team Udayavani, Sep 29, 2021, 3:25 PM IST
ಹುಬ್ಬಳಿ: ಸ್ಮಾರ್ಟ್‌ಸಿಟಿ ಯೋಜನೆಯಡಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಂಗಳವಾರ ವೀಕ್ಷಣೆ ಮಾಡಿದರು.
ವಿಳಂಬದಿಂದಾಗಿ ಜನರು ಅಭಿವೃದ್ಧಿ ಕಾರ್ಯಗಳ ಬಗ್ಗೆ ಬೇಸರ ವ್ಯಕ್ತಪಡಿಸುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಆದಷ್ಟು ಬೇಗೆ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಉಣಕಲ್ಲ ಕೆರೆ ಅಭಿವೃದ್ಧಿ, ಉಣಕಲ್ಲ ಸಂತೆ ಮಾರುಕಟ್ಟೆ ಕಾಮಗಾರಿ ವೀಕ್ಷಿಸಿದ ಶೆಟ್ಟರ, ಮಾರುಕಟ್ಟೆ ಸೌಂದರ್ಯ ಹೆಚ್ಚಾಗಿದೆ. ಆದರೆ ಮಳೆ, ಗಾಳಿಯಂತಹ ಸಂದರ್ಭದಲ್ಲಿ ಸಂತೆ ಮಾರುಕಟ್ಟೆ ಕಷ್ಟವಾಗುತ್ತಿದೆ. ಮೇಲೆ ಗಾಜು ಅಳವಡಿಸುವ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.
ವಾರಕ್ಕೊಮ್ಮೆ ಸಂತೆ ನಡೆಯುತ್ತಿದ್ದು, ಉಳಿದ ಸಂದರ್ಭದಲ್ಲಿ ಈ ಸ್ಥಳವನ್ನು ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಚಟುವಟಿಕೆಗಳಿಗೆ ಪೂರಕವಾಗಿ ನಿರ್ಮಿಸಲಾಗಿದೆ ಎಂದು ಎಂಡಿ ಶಕೀಲ್ ಅಹ್ಮದ್ ಉತ್ತರಿಸಿದರು.
ಅಕ್ಕಪಕ್ಕದಲ್ಲಿ ಚರಂಡಿಯನ್ನು ಮುಂದಿನ ನಾಲಾಗೆ ಜೋಡಿಸುವ ಕುರಿತು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ತೋಳನಕೆರೆ ಅಭಿವೃದ್ಧಿ ಕಾಮಗಾರಿ ಸಾಕಷ್ಟು ವಿಳಂಬವಾಗಿದ್ದು, ನಿಧಾನಗತಿಯಿಂದಾಗಿ ಜನರು ಬೇಸರ ವ್ಯಕ್ತಪಡಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ತಿಂಗಳಲ್ಲಿ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡು ಉದ್ಘಾಟನೆಯಾಗಬೇಕು. ರಾಮಲಿಂಗೇಶ್ವರ ನಗರದಿಂದ ಬರುವ ಒಳಚರಂಡಿ ನೀರು ಕೆರೆಗೆ ಸೇರದಂತೆ ಕ್ರಮ ವಹಿಸಬೇಕು ಎಂದರು. ನಂತರ ಇಂದಿರಾ ಗಾಜಿನಮನೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ವೀಕ್ಷಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಆರಂಭದಲ್ಲಿ ಕಾಮಗಾರಿಗಳು ವಿಳಂಬವಾದ ಪರಿಣಾಮ ಇನ್ನೂ ಪೂರ್ಣಗೊಂಡಿಲ್ಲ. ಬಹುತೇಕ ಕೆಲಗಳು ಮುಗಿಯುವ ಹಂತಕ್ಕೆ ಬಂದಿವೆ. ಕೆಲ ಕಾಮಗಾರಿಗಳು ಖುಷಿ ನೀಡಿವೆ. ಆಗಿರುವ ನ್ಯೂನತೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಎರಡನೇ ಹಂತದಲ್ಲಿ ಉಣಕಲ್ಲ ಕೆರೆ ಸುತ್ತಲೂ ವಾಕಿಂಗ್ ಪಾಥ್ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಆಗಲಿವೆ. ನಡುವಿನ ವಿವೇಕಾನಂದ ಪ್ರತಿಮೆ ಬದಲಿಸಿ ಇನ್ನೂ ಎತ್ತರದ ಪ್ರತಿಮೆ ಸ್ಥಾಪನೆಗೆ ಚಿಂತನೆ ಮಾಡಲಾಗಿದೆ. ಪ್ರಸಿಡೆಂಟ್ ಹೋಟೆಲ್ ಮುಂಭಾಗದಲ್ಲಿ ಮಳೆ ನೀರು ಸಂಗ್ರಹಕ್ಕೆ ಪರಿಹಾರ ನೀಡಲಾಗಿದೆ. ಸಿಆರ್‌ಎಫ್ ಬಿಲ್ ಬಾಕಿ ಉಳಿದಿದ್ದ ಕಾರಣ ಸಚಿವ ಸಿ.ಸಿ.ಪಾಟೀಲರೊಂದಿಗೆ ಮಾತನಾಡಿ ಶೇ.50 ಬಿಲ್ ಪಾವತಿ ಮಾಡಲಾಗಿದೆ. ಹೀಗಾಗಿ ಕಾಮಗಾರಿ ಆರಂಭವಾಗಿವೆ ಎಂದರು.
ಸ್ಮಾರ್ಟ್‌ಸಿಟಿ ಎಂಡಿ ಶಕೀಲ್ ಅಹ್ಮದ್, ಡಿಜಿಎಂ ಬಸವರಾಜ, ಪಾಲಿಕೆ ನೂತನ ಸದಸ್ಯರಾದ ರಾಜಣ್ಣ ಕೊರವಿ, ಉಮೇಶ ಕೌಜಗೇರಿ, ತಿಪ್ಪಣ್ಣ ಮಜ್ಜಗಿ, ರಾಮಣ್ಣ ಬಡಿಗೇರ, ಪಾಲಿಕೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.