ಉದ್ಯೋಗ ಖಾತ್ರಿ ನೀರಾವರಿಗೂ ವಿಸ್ತರಣೆ

ವಾಲ್ಮೀಯಲ್ಲಿ ಸಭೆ |ಇಲಾಖೆಗಳ ಮಧ್ಯೆ ಸಮನ್ವಯತೆಗೆ ಸಲಹೆ |ಪ್ರತಿ ರೈತನಿಗೂ ನೀರು ತಲುಪಿಸುವ ಹೊಣೆ

Team Udayavani, Jul 9, 2021, 6:53 PM IST

8hub-dwd13

ಧಾರವಾಡ: ಜಿಲ್ಲೆಯ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ನೀರಾವರಿ ನಿರ್ವಹಣೆ ಕಾಮಗಾರಿಗಳನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳುವ ಸಂಬಂಧ ವಾಲ್ಮೀ ಸಂಸ್ಥೆಯ ನೇತೃತ್ವದಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ (ನರೇಗಾ) ಅಧಿಕಾರಿಗಳು ಹಾಗೂ ನೀರು ಬಳಕೆದಾರರ ಸಹಕಾರ ಸಂಘಗಳ ಪದಾಧಿಕಾರಿಗಳ ಸಮನ್ವಯ ಸಭೆ ಜರುಗಿತು.

ವಾಲ್ಮೀ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನೀರಾವರಿ ಇಲಾಖೆಯ ಉದ್ದೇಶಗಳನ್ನು ಸಾಧಿ ಸಲು ಮಲಪ್ರಭಾ ಅಚ್ಚುಕಟ್ಟು ಪ್ರದೇಶದಡಿ ಬರುವ ಪ್ರತಿಯೊಬ್ಬ ರೈತನಿಗೂ ನೀರು ತಲುಪಿಸುವುದು ಮಹತ್ವದ ಜವಾಬ್ದಾರಿಯಾಗಿದೆ. ಜಲ ಸಂಪನ್ಮೂಲ ನಿರ್ವಹಣೆಗೆ ನರೇಗಾ ಯೋಜನೆ ಮಹತ್ವದ್ದಾಗಿದೆ. ಇದರ ಸಂಪೂರ್ಣ ಲಾಭ ಪಡೆಯಲು ಸಂಬಂಧಪಟ್ಟ ನೀರಾವರಿ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನೀರು ಬಳಕೆದಾರರ ಸಮನ್ವಯತೆ ಅತ್ಯಂತ ಅವಶ್ಯಕವಾಗಿದೆ ಎಂದರು.

ಪಿಆರ್‌ಇಡಿ ಸಹಾಯಕ ನಿರ್ದೇಶಕ ಜಗದೀಶ ಹಡಪದ ಮಾತನಾಡಿ, ನರೇಗಾ ಬೇಡಿಕೆ ಆಧಾರಿತ ಕಾರ್ಯಕ್ರಮವಾಗಿರುವುದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು. ನರೇಗಾ ಯೋಜನೆಯ ಲಾಭಗಳನ್ನು ರೈತರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ಷೇತ್ರಮಟ್ಟದಲ್ಲಿ ವಿವಿಧ ಇಲಾಖೆಗಳ ಸಮನ್ವಯತೆ ಮತ್ತು ತಿಳಿವಳಿಕೆ ಬಹು ಮುಖ್ಯವಾಗಿದೆ ಎಂದರು. ನೀರಾವರಿ ಇಲಾಖೆ ಅಭಿಯಂತರಾದ ರಾಘವೇಂದ್ರ ಜಾಲಗಾರ ಹಾಗೂ ಆರ್‌.ಪಿ. ಅರವಿಂದ ಅವರು, ರೈತರ ಹೊಲಗಳಿಗೆ ಸಮರ್ಪಕವಾಗಿ ನೀರನ್ನು ತಲುಪಿಸುವ ಕಾಮಗಾರಿಗಳನ್ನು ನೀರಾವರಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಗಳು ಯಾವ ರೀತಿ ಒಮ್ಮುಖ ಸಾ ಧಿಸಬಹುದು ಎಂದು ವಿವರಿಸಿದರು.

ನೀರು ಬಳಕೆದಾರರ ಸಹಕಾರಿ ಸಂಘಗಳ ಪರವಾಗಿ ಮಲಪ್ರಭಾ ನೀರಾವರಿ ಬಳಕೆದಾರರ ಸಂಘಗಳ ಮಹಾಮಂಡಳಗಳ ಅಧ್ಯಕ್ಷ ಡಿ.ವೈ. ಕಾಡಪ್ಪನವರ ಹಾಗೂ ಮಹಾಮಂಡಳದ ಮುಖ್ಯ ಕಾರ್ಯನಿರ್ವಾಹಕ ಅಧಿ  ಕಾರಿ ಜಿ.ಎಸ್‌. ದುಮ್ಮಳ್ಳಿ ಅವರು ನೀರಾವರಿ ಜಾಲದ ದುರಸ್ತಿ ಕುರಿತು ಮಾಹಿತಿ ನೀಡಿದರು. ವಾಲ್ಮೀ ಪ್ರಾಧ್ಯಾಪಕ ಬಿ.ವೈ. ಬಂಡಿವಡ್ಡರ ಪ್ರಾಸ್ತಾವಿಕ ಮಾತನಾಡಿ, ವ್ಯವಸ್ಥಿತ ಕಾಮಗಾರಿ ನಿರ್ವಹಿಸಲು ಹೆಚ್ಚಿನ ಅನುದಾನ ಪಡೆಯಲು ಉದ್ಯೋಗ ಖಾತ್ರಿ ಯೋಜನೆ ಯಾವ ರೀತಿ ಉಪಯೋಗವಾಗುತ್ತದೆ ಎಂದರು.

ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅ ಧಿಕಾರಿಗಳು ಹಾಗೂ ನೀರು ಬಳಕೆದಾರರ ಸಹಕಾರಿ ಸಂಘಗಳ ಪದಾಧಿ  ಕಾರಿಗಳು, ಮಲಪ್ರಭಾ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾ ಮಂಡಳದ ನಿರ್ದೇಶಕ ಸದಾಶಿವಗೌಡ ಪಾಟೀಲ ಭಾಗವಹಿಸಿದ್ದರು. ವಾಲ್ಮೀ ಸಹಾಯಕ ನಿರ್ದೇಶಕ ಪ್ರಭಾಕರ ಹಾದಿಮನಿ ಸ್ವಾಗತಿಸಿದರು. ವಾಲ್ಮೀ ಸಹಾಯಕ ಎಂಜಿನಿಯರ್‌ ಮಹದೇವಗೌಡ ಹುತ್ತನಗೌಡರ ನಿರೂಪಿಸಿದರು. ವಾಲ್ಮೀ ಸಮಾಲೋಚಕ ಸುರೇಶ ಕುಲಕರ್ಣಿ ವಂದಿಸಿದರು.

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.