ಅಕ್ಟೋಬರ್‌ ಅಂತ್ಯಕ್ಕೆ ಸೇವೆಗೆ ಸಜ್ಜಾಗುವ ನಿರೀಕ್ಷೆ


Team Udayavani, Aug 10, 2018, 4:11 PM IST

10-agust-18.jpg

ಹುಬ್ಬಳ್ಳಿ: ಇಲ್ಲಿನ ಕಿಮ್ಸ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ ಬಹುತೇಕ ಮುಗಿದಿದ್ದು, ವಿವಿಧ ವೈದ್ಯಕೀಯ ಹಾಗೂ ಇನ್ನಿತರ ಸೌಲಭ್ಯಗಳ ಅಳವಡಿಕೆಯೊಂದಿಗೆ ಅಕ್ಟೋಬರ್‌ ವೇಳೆಗೆ ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳ್ಳುವ ನಿರೀಕ್ಷೆ ಇದೆ.

ಅಂದಾಜು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಗೆ ಸೆಪ್ಟೆಂಬರ್‌ ಮೊದಲ ವಾರದಿಂದ ಶಸ್ತ್ರಚಿಕಿತ್ಸಾ ಘಟಕ ಸೇರಿದಂತೆ ವೈದ್ಯಕೀಯ ಗ್ಯಾಸ್‌ ಪೈಪಿಂಗ್‌ ಸಿಸ್ಟಮ್‌ (ಎಂಜಿಪಿಎಸ್‌) ಅಳವಡಿಸುವ ಕಾಮಗಾರಿ ಆರಂಭವಾಗಲಿದೆ. ಅಕ್ಟೋಬರ್‌ದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.

ಕೇಂದ್ರ ಸರಕಾರದ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ 3ರ ಅಡಿ 120 ಕೋಟಿ ರೂ. ಹಾಗೂ ರಾಜ್ಯ ಸರಕಾರದ 30 ಕೋಟಿ ರೂ. ಅನುದಾನ ಸೇರಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯು ನಿರ್ಮಾಣವಾಗುತ್ತಿದೆ. ಈ ಹಣವನ್ನು ಸಿವಿಲ್‌ ಕಾಮಗಾರಿಯ ಮೆಕ್ಯಾನಿಕಲ್‌, ಇಲೆಕ್ಟ್ರಿಕಲ್‌, ಪ್ಲಂಬಿಂಗ್‌ (ಎಂಇಪಿ)ಗೆ 75 ಕೋಟಿ ರೂ. ಹಾಗೂ 65 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಗ್ಯಾಸ್‌ ಪೈಪಿಂಗ್‌ ಸಿಸ್ಟಮ್‌ (ಎಂಜಿಪಿಎಸ್‌)ಗೆ, ಮಾಡ್ಯುಲರ್‌ ಆಪರೇಶನ್‌ ಥೇಟರ್‌ (ಎಂಒಟಿ)ಗೆ ಮತ್ತು ವೈದ್ಯಕೀಯ ಉಪಕರಣ (ಎಂಇ) ಹಾಗೂ 10 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಪೀಠೊಪಕರಣ, ಆಡಳಿತಾತ್ಮಕ ಪೀಠೊಪಕರಣಕ್ಕೆ ಖರ್ಚು ಮಾಡಲಾಗುತ್ತಿದೆ. ಕೇಂದ್ರ ಸರಕಾರ ಸ್ವಾಮ್ಯದ ಹೈದರಾಬಾದ್‌ ಮೂಲದ ಎಚ್‌ಎಲ್‌ಎಲ್‌-ಹೈಟ್ಸ್‌ ಕಂಪನಿ ಈ ಕಾಮಗಾರಿಯ ನಿರ್ವಹಣೆ ಮಾಡುತ್ತಿದೆ. ನಾಸಿಕ್‌ ಮೂಲದ ಹರ್ಷ ಕನ್‌ಸ್ಟ್ರಕ್ಷನ್‌ ಕಂಪನಿಯು ಅಂದಾಜು 1.70 ಲಕ್ಷ ಚದರಡಿ ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಿಸುತ್ತಿದೆ.

ಹರ್ಷ ಕಂಪನಿಗೆ 69.70 ಕೋಟಿ ರೂ. ವೆಚ್ಚದಲ್ಲಿ 18 ತಿಂಗಳ ಅವಧಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿಕೊಡಲು 2016ರ ಆ. 12ರಂದು ಟೆಂಡರ್‌ ನೀಡಲಾಗಿತ್ತು. ಅದರಂತೆ ಕಂಪನಿ ಕಾಮಗಾರಿ ಆರಂಭಿಸಿ, ಮಾರ್ಚ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಯೋಜಿಸಿತ್ತು. ಆದರೆ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟಡದ ಮುಂಭಾಗದಲ್ಲಿದ್ದ ಶವಾಗಾರ ಸ್ಥಳಾಂತರ, ತ್ಯಾಜ್ಯ ಶುದ್ಧೀಕರಣ ಘಟಕಕ್ಕೆ ರಾಜ್ಯ ಸರಕಾರದ ಅನುದಾನ ನೀಡುವಲ್ಲಿ ಹಾಗೂ ಅಗ್ನಿಶಾಮಕ ದಳ ಇಲಾಖೆಯಿಂದ ಅನುಮತಿ ದೊರೆಯದ್ದರಿಂದ ಕಟ್ಟಡ ಕಾಮಗಾರಿ ವಿಳಂಬವಾಗಿತ್ತು. ಏಪ್ರಿಲ್‌ ಮೊದಲ ವಾರದಲ್ಲಿ ಶವಾಗಾರ ಸ್ಥಳಾಂತರ ಮಾಡಲಾಗಿದ್ದು, ಅದರ ಕಟ್ಟಡ ತೆರವುಗೊಳಿಸಲಾಗಿದೆ. ಕಂಪನಿಯು ಈಗ ಕಟ್ಟಡ ಮುಂಭಾಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಇಲ್ಲಿ ದೂರಸಂಪರ್ಕ ಇಲಾಖೆಯ ಕೇಬಲ್‌, ವಿದ್ಯುತ್‌ ಸಂಪರ್ಕ ಕೇಬಲ್‌, ನೀರು ಸರಬರಾಜು ಪೈಪ್‌ಲೈನ್‌ ಗಳು ಅಡಚಣೆ ಆಗುತ್ತಿವೆ. ಇವುಗಳಿಗೆ ಧಕ್ಕೆಯಾಗದ ರೀತಿ ಕಾಮಗಾರಿ ನಡೆಸುತ್ತಿದ್ದಾರೆ.

ಈಗಾಗಲೇ ಕಟ್ಟಡದಲ್ಲಿ ಪ್ಲೋರಿಂಗ್‌, ಬಾಗಿಲು ಅಳವಡಿಕೆ, ಸೀಲಿಂಗ್‌ ಕಾಮಗಾರಿಯು ಬಹುತೇಕ ಮುಗಿದಿದ್ದು, ಕಟ್ಟಡದ ವರಾಂಡ್‌ದಲ್ಲಿ ಗ್ರೀಲ್‌ ಅಳವಡಿಕೆ ಇನ್ನಿತರೆ ಸಣ್ಣ-ಪುಟ್ಟ ಕಾಮಗಾರಿಗಳು ಬಾಕಿ ಉಳಿದಿದ್ದು, ಸಿವಿಲ್‌ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಸೆಪ್ಟೆಂಬರ್‌ ಮೊದಲ ವಾರದಿಂದ ಶಸ್ತ್ರಚಿಕಿತ್ಸಾ ಘಟಕ ಹಾಗೂ ಎಂಜಿಪಿಎಸ್‌, ಎಂಓಟಿ, ಎಂಇಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಕಟ್ಟಡ ಕಾಮಗಾರಿ ಕೈಗೆತ್ತಿಕೊಂಡಿರುವ ಹರ್ಷ ಕಂಪನಿಯು ಅಕ್ಟೋಬರ್‌ ಅಂತ್ಯದೊಳಗೆ ಪೂರ್ಣಗೊಸುವ ನಿಟ್ಟಿನಲ್ಲಿ ಭರದಿಂದ ಸಿದ್ಧತೆಗಳನ್ನು ನಡೆಸಿದೆ.

ಕಿಮ್ಸ್‌ನಲ್ಲಿ ನಿರ್ಮಾಣವಾಗುತ್ತಿರುವ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟಡವು ಕಾರಣಾಂತರಗಳಿಂದ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಈಗ ಎಲ್ಲ ಸಮಸ್ಯೆಗಳು ಬಗೆಹರಿದಿವೆ. ಎಂಜಿಪಿಎಸ್‌, ಎಂಒಟಿ ಸೇರಿದಂತೆ ಇನ್ನಿತರೆ ಕಾಮಗಾರಿ ಬಾಕಿ ಇದ್ದು, ಅಕ್ಟೋಬರ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು.
ರತ್ನಾಚಲಂ, ಎಂಜಿನಿಯರಿಂಗ್‌ ಇನ್‌ಚಾರ್ಜ್‌, ಹೈಟ್‌

ಕಿಮ್ಸ್‌ ಆವರಣದಲ್ಲಿದ್ದ ಶವಾಗಾರ ಸ್ಥಳಾಂತರ ಸೇರಿದಂತೆ ಇನ್ನಿತರೆ ಕೆಲ ಸಮಸ್ಯೆಗಳಿಂದಾಗಿ ನಿಗದಿತ ಸಮಯದಲ್ಲಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿ ವಿಳಂಬವಾಗಿತ್ತು. ಏಪ್ರಿಲ್‌ನಲ್ಲಿ ಶವಾಗಾರ ಸ್ಥಳಾಂತರವಾಗಿದೆ. ಅಕ್ಟೋಬರ್‌ ಅಂತ್ಯದೊಳಗೆ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲಾಗುವುದು.
ಅನಿಲ ಸಂಪಗಾಂವ, ಪ್ರೊಜೆಕ್ಟ್
ಮ್ಯಾನೇಜರ್‌, ಹರ್ಷ ಕನ್‌ಸ್ಟ್ರಕ್ಷನ್‌ ಪ್ರೈ.ಲಿ.,

ಟಾಪ್ ನ್ಯೂಸ್

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.