ಕುಮಟಾದಲ್ಲಿ ಪ್ರಾಯೋಗಿಕ ಯೋಜನೆ: ಎಂ.ಸುಂದರೇಶ
Team Udayavani, Feb 11, 2020, 10:15 AM IST
ಹುಬ್ಬಳ್ಳಿ: ವಿದ್ಯುತ್ ಮೀಟರ್‌ಗಳಿಗೆ ಸೀಲ್ ಅಳವಡಿಸುವ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಕುಮಟಾದಲ್ಲಿ ಪ್ರಾಯೋಗಿಕ ಯೋಜನೆ ಕೈಗೊಳ್ಳುವಂತೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎಂ. ಸುಂದರೇಶ ಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನವನಗರದ ಹೆಸ್ಕಾಂ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಗ್ರಾಹಕರ ಸಭೆಯಲ್ಲಿ ಕುಮಟಾದ ಗ್ರಾಹಕ ಅರವಿಂದ ಪೈ ಅವರ ಪ್ರಶ್ನೆಗೆ ಉತ್ತರಿಸಿ, ವಿದ್ಯುತ್ ಮೀಟರ್‌ಗಳಿಗೆ ಸೀಲ್ ಅಳವಡಿಸುವುದು ಅವಶ್ಯಕವಾಗಿದೆ. ಕುಮಟಾದಲ್ಲಿ ಪೈಲೆಟ್ ಪ್ರಾಜೆಕ್ಟ್ ಕೈಗೊಂಡು ಮುಂದೆ ಇದನ್ನು ಇತರ ಕಡೆಗಳಲ್ಲಿ ವಿಸ್ತರಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಸಿಬ್ಬಂದಿ ಕೊರತೆಯಿದ್ದರೂ ಸಮರ್ಪಕ ಸೇವೆ ಒದಗಿಸಲು ಪ್ರಯತ್ನಿಸಲಾಗುತ್ತಿದೆ. 425 ಜೆಎಲ್ ಎಂಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.ನೇಮಕದ ನಂತರ ಗ್ರಾಹಕರ ದೂರುಗಳಿಗೆ ತ್ವರಿತ ಗತಿಯಲ್ಲಿ ಪರಿಹಾರ ಒದಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಹೆಸ್ಕಾಂ ಕಚೇರಿಗಳಲ್ಲಿಯೇ ವಿದ್ಯುತ್ ಬಿಲ್ ಪಾವತಿಸುವ ಎಟಿಪಿಗಳನ್ನು ಅಳವಡಿಸುವ ಬದಲು ಜನಸಂದಣಿ ಹೆಚ್ಚಾಗಿರುವ ಬೇರೆ ಪ್ರದೇಶದಲ್ಲಿ ಎಟಿಪಿ ಅಳವಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಅಧಿಕಾರಿಗಳು ಪ್ರಸ್ತಾವನೆ ಕಳಿಸಿದರೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಹೆಸ್ಕಾಂ ಕೆಇಆರ್‌ಸಿಗೆ ಯುನಿಟ್‌ಗೆ ಕೇವಲ 45 ಪೈಸೆ ದರ ಹೆಚ್ಚಳ ಮಾಡಲು ತಿಳಿಸಲಾಗಿದೆ. ಇದು ಇತರ ವಿದ್ಯುತ್ ಸಂಸ್ಥೆಗಳಿಗೆ ಹೋಲಿಕೆಮಾಡಿದರೆ ಕಡಿಮೆಯದ್ದಾಗಿದೆ. ವಿಚಕ್ಷಣ ದಳದವರು ಅನಗತ್ಯವಾಗಿ ಗ್ರಾಹಕರಿಗೆ ತೊಂದರೆ ನೀಡುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಧಾರವಾಡ ತಾಲೂಕಿನ ಕ್ಯಾರಕೊಪ್ಪದ ಮಲ್ಲಪ್ಪ ಲಕಮಾಪುರ, ಪಂಪ್‌ಸೆಟ್‌ಗೆ ಕಳೆದ ಒಂದೂವರೆ ವರ್ಷದಿಂದ ವಿದ್ಯುತ್ ಸಂಪರ್ಕ ನೀಡಿಲ್ಲ. ಅದನ್ನು ಕೂಡಲೇ ನೀಡಬೇಕು ಎಂದು ಮನವಿ ಮಾಡಿದರು. ಕಲಘಟಗಿ ತಾಲೂಕು ಹುಲಕೊಪ್ಪದ ಬಸವರಾಜ ಹೂಗಾರ, ಪಂಪ್ ಸೆಟ್‌ಗೆ ವಿದ್ಯುತ್ ಸಂಪರ್ಕ ನೀಡುವಂತೆ ಕಳೆದ 3 ವರ್ಷಗಳಿಂದ ಪ್ರಯತ್ನಿಸುತ್ತಿದ್ದೇನೆ. ಆದರೆ ಸಂಪರ್ಕ ನೀಡುತ್ತಿಲ್ಲ ಎಂದು ಹೇಳಿಕೊಂಡರು.
ಆಗ ವ್ಯವಸ್ಥಾಪಕ ನಿರ್ದೇಶಕರು, ಈ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಹಳೇ ಗಬ್ಬೂರಿನ ಶಿವಾನಂದ ಹೊಸೂರ, ಸದ್ಯಕ್ಕಿರುವ ವಿದ್ಯುತ್ ಲೈನ್ ತುಂಬಾ ಹಳೆಯದಾಗಿದ್ದು, ಹೊಸ ಲೈನ್ ಹಾಕಬೇಕು. ಯಾವುದೇ ಅನಾಹುತವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು. ಉದ್ಯಮಿ ವಿಜಯ ಚಂದರಗಿ, ವಿದ್ಯುತ್ ಬಿಲ್‌ನಲ್ಲಿ ಹೆಸ್ಕಾಂ ಜಿಎಸ್‌ಟಿ ಮುದ್ರಿತವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು. ಎಂ. ಸುಂದರೇಶ ಬಾಬು, ಸಾಫ್ಟವೇರ್‌ನಲ್ಲಿ ಜಿಎಸ್‌ಟಿ ಸಂಖ್ಯೆ ಬರುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.