ವಿಸ್ತಾರಕರ ಪಾತ್ರ ಮಹತ್ವದ್ದು
Team Udayavani, Jul 4, 2017, 1:04 PM IST
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಿಶನ್-150 ಯಶಸ್ಸಿಗೆ ವಿಸ್ತಾರಕರ ಪಾತ್ರ ಮಹತ್ವದ್ದು ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಮೂರುಸಾವಿರಮಠದ ಸಭಾಂಗಣದಲ್ಲಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕ ಆಯೋಜಿಸಿದ್ದ ಪಂಡಿತ್ ದೀನದಯಾಳ ಉಪಾಧ್ಯಾಯ ವಿಸ್ತಾರಕರ ಕಾರ್ಯಾಗಾರಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ 150ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಎಂದರು.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ಸಂಪೂರ್ಣ ವಿಫಲಗೊಂಡಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ ತುಘಲಕ್ ಸರ್ಕಾರವನ್ನುಕಿತ್ತೂಗೆಯುವುದು ಅವಶ್ಯವಾಗಿದೆ ಎಂದರು. ಬಿಜೆಪಿ ವಿಭಿನ್ನ ಪಕ್ಷವಾಗಿದ್ದು, ತತ್ವ ಸಿದ್ಧಾಂತಕ್ಕೆ ಆದ್ಯತೆ ನೀಡುವ ಪಕ್ಷವಾಗಿದೆ.
ಸಾಮಾನ್ಯರು ಅಧಿಕಾರಕ್ಕೇರುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯವಿದೆ ಎಂದರು. ವಂಶಪಾರಂಪರ್ಯ ಆಡಳಿತವನ್ನು ಪ್ರೋತ್ಸಾಹಿಸುವ ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ತುರ್ತು ಪರಿಸ್ಥಿತಿ ಜನರ ಮೇಲೆ ಹೇರಿ ಪ್ರಜಾಪ್ರಭುತ್ವ ಕೊಲೆಗೈದ ಪಕ್ಷ ಅದಾಗಿದೆ ಎಂದರು.
ವಿಸ್ತಾರಕರು ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸಿಕೊಡಬೇಕು. ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡ ಕಾರ್ಯಕ್ರಮಗಳನ್ನು ತಿಳಿಸಿಕೊಟ್ಟು ಮತದಾರರು ಬಿಜೆಪಿಯನ್ನು ಸಹಜವಾಗಿ ಒಪ್ಪಿಕೊಳ್ಳುವಂತೆ ಮಾಡಬೇಕು ಎಂದರು.
ಕಾಂಗ್ರೆಸ್‌ಗೆ ಶೆಟ್ಟರ ಸವಾಲು: ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ ಮಾತನಾಡಿ, ಬಿಜೆಪಿ ರಾಜ್ಯದಲ್ಲಿ 84ಲಕ್ಷ ಜನರ ಸದಸ್ಯತ್ವ ಮಾಡಿದೆ. ಕಾಂಗ್ರೆಸ್ ಕೂಡ ಸದಸ್ಯತ್ವ ಅಭಿಯಾನ ಮಾಡಿದ್ದು, ಎಷ್ಟು ಜನರ ಸದಸ್ಯತ್ವ ಮಾಡಿದೆ ಎಂಬುದನ್ನು ಬಹಿರಂಗಪಡಿಸುವಂತೆ ಪಕ್ಷದ ಮುಖಂಡರಿಗೆ ಸವಾಲು ಹಾಕುತ್ತೇನೆ.
ಕಾಂಗ್ರೆಸ್- ಜೆಡಿಎಸ್ ಪಕ್ಷಗಳ ಸದಸ್ಯತ್ವ 1-2 ಲಕ್ಷ ಕೂಡ ದಾಟಿರಲಿಕ್ಕಿಲ್ಲ ಎಂದು ಅಭಿಪ್ರಾಯಪಟ್ಟರು. ಸಿಎಂ ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಅಥಣಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಬಿಜೆಪಿ ಶಾಸಕ ಲಕ್ಷ್ಮಣ ಸವದಿ ಬಗ್ಗೆ ವೈಯಕ್ತಿಕವಾಗಿ ಕೆಳಮಟ್ಟಕ್ಕಿಳಿದು ಮಾತನಾಡಿದ್ದಾರೆ. ಇದು ಸಿದ್ದರಾಮಯ್ಯ ಹತಾಶರಾಗಿರುವುದಕ್ಕೆ ಸಾಕ್ಷಿ.
ಲಕ್ಷ್ಮಣ ಸವದಿ ಕೂಡ ಸಿದ್ದರಾಮಯ್ಯಗೆ ತಕ್ಕ ಉತ್ತರ ನೀಡಿದ್ದಾರೆ ಎಂದರು. ಬಿಜೆಪಿ ದೇಶದಲ್ಲಿ 11 ಕೋಟಿಗೂ ಹೆಚ್ಚು ಸದಸ್ಯತ್ವ ಹೊಂದಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷವಾಗಿ ದಾಖಲೆ ನಿರ್ಮಿಸಿದೆ. ಬಿಜೆಪಿ ವ್ಯಕ್ತಿಗಳನ್ನು ಅವಲಂಬಿಸಿಲ್ಲ ಕಾರ್ಯಕರ್ತರನ್ನು ಅವಲಂಬಿಸುತ್ತ ಬೆಳೆದ ಪಕ್ಷವಾಗಿದೆ ಎಂದರು. ವಿಸ್ತಾರಕರು ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು.
ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ವಿಳಾಸ ಬದಲಾವಣೆಯಿದ್ದರೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು. ನಾಗೇಶ ಕಲುºರ್ಗಿ ಪ್ರಾಸ್ತಾವಿಕ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಮಾಜಿ ಶಾಸಕರಾದ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ಮುಖಂಡರಾದ ಮಾ. ನಾಗರಾಜ, ಮಹೇಶ ಟೆಂಗಿನಕಾಯಿ, ಶಂಕ್ರಪ್ಪ ಬಿಜವಾಡ, ಲಿಂಗರಾಜ ಪಾಟೀಲ, ರಾಜು ಜರತಾರಘರ, ಮಹೇಂದ್ರ ಕೌತಾಳ, ರಂಗಾ ಬದ್ದಿ, ಲಕ್ಷ್ಮಣ ಬೀಳಗಿ, ತಿಪ್ಪಣ್ಣ ಮಜ್ಜಗಿ ವೇದಿಕೆ ಮೇಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.