ರೈತರಿಗೆ ಸೌಲಭ್ಯ ತಲುಪಿಸಲು ಸೂಚನೆ
Team Udayavani, Mar 8, 2017, 1:41 PM IST
ಧಾರವಾಡ: ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗಬೇಕಿರುವ ಸೌಲಭ್ಯಗಳನ್ನು ತಲುಪಿಸುವಲ್ಲಿ ಬ್ಯಾಂಕ್ ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಮತ್ತು ಸಂಸದ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತ ಪಡಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ನಡೆದ 2016-17ನೇ ಸಾಲಿನ ಮೂರನೇ ತ್ತೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಚಿವ ವಿನಯ್ ಕುಲಕರ್ಣಿ ಮಾತನಾಡಿ, ದೇಶದ ಬೆನ್ನೆಲುಬಾಗಿರುವ ರೈತನ ಹಿತ ಕಾಯುವ ಹೊಣೆ ಬ್ಯಾಂಕುಗಳ ಮೇಲಿದೆ ಎಂದರು. ಇದಕ್ಕೆ ಧ್ವನಿಗೂಡಿಸಿದ ಸಂಸದ ಪ್ರಹ್ಲಾದ ಜೋಶಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದಲ್ಲಿ ಬ್ಯಾಂಕುಗಳ ವರ್ತನೆ ಬಗ್ಗೆ ತಮಗೂ ಸಹಮತವಿಲ್ಲ.
ಆರ್‌ಬಿಐ ನಿಯಮಗಳು ಯೋಜನೆಗಳ ಅನುಷ್ಠಾನಕ್ಕೆ ವ್ಯತ್ಯಯ ಉಂಟು ಮಾಡುತ್ತಿದ್ದರೆ ಅದನ್ನು ಸರಿಪಡಿಸಲು ರಾಜ್ಯಮಟ್ಟದ ಬ್ಯಾಂಕರುಗಳ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಂಡು, ಅದರ ಪ್ರತಿಯನ್ನು ಕಳುಹಿಸಿಕೊಟ್ಟರೆ ಕೇಂದ್ರ ಸರಕಾರದ ಮಟ್ಟದಲ್ಲಿ ಚರ್ಚಿಸಿ ಆ ನಿಯಮಗಳ ಬದಲಾವಣೆಗೆ ಆರ್‌ಬಿಐಗೆ ಮನವಿ ಸಲ್ಲಿಸಲು ಪ್ರಯತ್ನಿಸಲಾಗುವುದು ಎಂದರು.
ಈ ಬಾರಿಯ ಎಸ್‌ಎಲ್‌ಬಿಸಿ ಸಭೆಗೆ ಆಹ್ವಾನ ನೀಡಿದರೆ ಖುದ್ದಾಗಿ ಭಾಗವಹಿಸುವುದಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರಿಗೆ ಸಂಸದ ಜೋಶಿ ಹೇಳಿದರು. ರೈತರ ಬೆಳೆವಿಮೆ ಹಣ, ವೃದ್ಧಾಪ್ಯ, ವಿಧವಾ, ವಿಕಲಚೇತನರ ವೇತನಗಳು ಹಾಗೂ ನರೇಗಾ ಕೂಲಿ ಹಣವನ್ನು ಅವರ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳುತ್ತಿರುವುದನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಸಿ.ಎಸ್.ಶಿವಳ್ಳಿ, ಶಾಸಕ ಎನ್. ಎಚ್.ಕೋನರಡ್ಡಿ ಅವರು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಈ ಬೇಸಿಗೆಯ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ನೀಗಿಸಲು ಸರಕಾರದ ಬಳಿ ಸಾಕಷ್ಟು ಹಣದ ಲಭ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಇದೇ ವೇಳೆ ಸ್ಪಷ್ಟಪಡಿಸಿದರು. ನೀರು ಪೂರೈಕೆಗೆ ಹಣದ ಕೊರತೆಯಿಲ್ಲ. ಕೊಳವೆ ಬಾವಿಗಳು ವಿಫಲವಾದರೆ ಹತ್ತಿರದ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದು ನೀರೊದಗಿಸಲಾಗುತ್ತಿದೆ.
ಸ್ಥಳೀಯ ಮಟ್ಟದಲ್ಲಿನ ಚುನಾಯಿತ ಪ್ರತಿನಿಧಿಗಳು ಕುಡಿಯುವ ನೀರು ಪೂರೈಕೆಯಲ್ಲಿ ಕಂಡು ಬರುವ ಸಮಸ್ಯೆಗಳನ್ನು ತಕ್ಷಣವೇ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು. ಸಾರ್ವಜನಿಕರು ನೀರನ್ನು ಅಗತ್ಯಕ್ಕೆ ಅನುಸಾರವಾಗಿ ನೀರನ್ನು ಮಿತವಾಗಿ ಬಳಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಪಂ ಮಟ್ಟದಲ್ಲಿ ಜಾಗೃತಿ ಹಮ್ಮಿಕೊಳ್ಳಬೇಕು.
ನೀರಿನ ಸದುಪಯೋಗ ಮತ್ತು ಪೋಲು ತಡೆಯುವ ನಿಟ್ಟಿನಲ್ಲಿ ಗ್ರಾಮೀಣ ಭಾಗಗಳಲ್ಲಿ ನಿರಂತರ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕಾಂಕ್ರೀಟ್ ರಸ್ತೆಗಳಲ್ಲಿಯೇ ಬಟ್ಟೆ ತೊಳೆದು ಸಾಕಷ್ಟು ನೀರು ವ್ಯರ್ಥವಾಗಿ ಹರಿದು ಹೋಗುವ ದೃಶ್ಯಗಳು ಅಲ್ಲಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿವೆ. ಈ ಬಗ್ಗೆ ವಿಶೇಷ ಜಾಗೃತಿ ಮೂಡಿಸಬೇಕು ಎಂದರು.
ಮಹಾತ್ಮಾಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳ ಪ್ರಮಾಣದಲ್ಲಿ ಸಾಕಷ್ಟು ಹೆಚ್ಚಳವಾಗಬೇಕು. ಬರದ ಹಿನ್ನೆಲೆಯಲ್ಲಿ ಜನರಿಗೆ ಬೇರೆ ಯಾವುದೇ ರೀತಿಯ ಉದ್ಯೋಗಗಳಿಲ್ಲ. ಅವರು ನರೇಗಾ ಯೋಜನೆಯನ್ನೇ ಅವಲಂಬಿಸಿದ್ದಾರೆ. ಬದುವು ನಿರ್ಮಾಣ, ಸೇತುವೆ, ಹೊಲಗಳಿಗೆ ರಸ್ತೆ ನಿರ್ಮಾಣದಂತಹ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಿ ಯೋಜನೆಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಸಚಿವ ವಿನಯ್ ಸೂಚಿಸಿದರು.
ರೇಷ್ಮೆ ಇಲಾಖೆ ಜಿಲ್ಲೆಯಲ್ಲಿ ಸಾಧಿಸಿರುವ ಪ್ರಗತಿಯನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸುವ ಅಗತ್ಯವಿದೆ. ಈ ಸಂದರ್ಭದಲ್ಲಿ ನಾನು ಕೂಡ ಹಾಜರಾಗಿ ಜಿಲ್ಲೆಯಲ್ಲಿನ ರೇಷ್ಮೆ ಅಭಿವೃದ್ಧಿಯನ್ನು ವೀಕ್ಷಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ವಿಧಾನ ಪರಿಷತ್ ಸದಸ್ಯರಾದ ಶ್ರೀನಿವಾಸ ಮಾನೆ, ಪ್ರದೀಪ ಶೆಟ್ಟರ, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್‌ಕುಮಾರ ಮೀನಾ, ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆರ್.ಸ್ನೇಹಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.