ನಿಷ್ಠೆ-ಪ್ರಾಮಾಣಿಕತೆ ಗೌರವದ ಸಂಕೇತ: ಡಾ| ವೀರೇಂದ್ರ ಹೆಗ್ಗಡೆ
Team Udayavani, Jun 9, 2017, 3:52 PM IST
ಧಾರವಾಡ: ಚಾರಿತ್ರವಂತರಿಗೆ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುವವರಿಗೆ ಸಮಾಜದಲ್ಲಿ ಸಹಜವಾಗಿ ಗೌರವ, ಸನ್ಮಾನಗಳು ಸಿಗುತ್ತವೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಹೇಳಿದರು.
ಇಲ್ಲಿಯ ಜನತಾ ಶಿಕ್ಷಣ ಸಮಿತಿಯಲ್ಲಿ ಸೇವೆ ಸಲ್ಲಿಸಿ 90ನೇ ಸಂವತ್ಸರ ಪೂರೈಸುತ್ತಿರುವ ಎ.ಪಿ ಕಟ್ಟಿ ಅವರಿಗೆ ಸನ್ಮಾನ ಮಾಡಿ ಮಾತನಾಡಿದ ಅವರು, ಸಂಸ್ಥೆಯ ಯಶಸ್ವಿಗೆ ಬದ್ಧರಾಗಿ ದುಡಿದ ಕೆಲವೇ ವ್ಯಕ್ತಿಗಳಲ್ಲಿ ಕಟ್ಟಿ ಅವರು ಕೂಡಾ ಒಬ್ಬರಾಗಿದ್ದಾರೆ ಎಂದರು.
ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ| ನ. ವಜ್ರಕುಮಾರ ಅವರು, ಎ.ಪಿ ಕಟ್ಟಿಯವರ ಒಡನಾಟ, ಅನುಭವ ಹಾಗೂ ಅವರು ನೀಡಿದ ಸಹಕಾರ ಸ್ಮರಿಸಿಕೊಂಡರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎ.ಪಿ ಕಟ್ಟಿ, ಸಂಸ್ಥೆಯ ಪ್ರಾರಂಭದಲ್ಲಿ ತುಂಬಾ ಕಷ್ಟದ ದಿನಗಳನ್ನು ಕಳೆದಿದ್ದು, ಡಾ| ವೀರೇಂದ್ರ ಹೆಗ್ಗಡೆಯವರು ತಮ್ಮ ಸುಪರ್ದಿಗೆ ತೆಗೆದುಕೊಂಡ ನಂತರ ಶುಭ ದಿನಗಳು ಪ್ರಾರಂಭವಾದವು.
ಅವತ್ತಿಂದ ಇವತ್ತಿನ ವರೆಗೆ ಸಂಸ್ಥೆ ಉನ್ನತ ಸ್ಥಾನಕ್ಕೆ ಏರುತ್ತಾ ಹೊರಟಿದೆ ಎಂದರು. ಶ್ರೀಕಾಂತ ಕೆಮೂ¤ರ, ಹಾಸಲಕರ್, ಸೂರಜ್ ಜೈನ್, ಮಹಾವೀರ ಉಪಾದ್ಯೆ ಹಾಗೂ ಜೆ.ಎಸ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಎಲ್ಲ ಮುಖ್ಯಸ್ಥರು ಇದ್ದರು. ಜ್ಯೋತಿ ಹಳ್ಳದ ಸ್ವಾಗತಿಸಿದರು. ಡಾ| ಜಿನದತ್ತ ಹಡಗಲಿ ನಿರೂಪಿಸಿದರು. ಡಾ| ಅಜಿತ ಪ್ರಸಾದ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
B.Z. Zameer Ahmed Khan;ನಾನು ಶುದ್ದ ಹಿಂದೂಸ್ಥಾನಿ ಭಾರತೀಯ, 24 ಕ್ಯಾರೆಟ್ ಗೋಲ್ಡ್..
MUST WATCH
ಹೊಸ ಸೇರ್ಪಡೆ
Tamil Nadu; ನ.1ಕ್ಕೆ ಗಡಿ ಹುತಾತ್ಮರ ದಿನಾಚರಣೆ: ಸಿಎಂ ಸ್ಟಾಲಿನ್ ಘೋಷಣೆ
Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Lawyer Jagadish: ಬಿಗ್ ಬಾಸ್ ಆಯಿತು ಈಗ ಡ್ಯಾನ್ಸ್ ಶೋಗೆ ಬಂದ ಜಗದೀಶ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.