Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Team Udayavani, Apr 20, 2024, 10:40 AM IST
ಹುಬ್ಬಳ್ಳಿ: ನೇಹಾ ಹಿರೇಮಠ ಸಾವು ಖಂಡನೀಯ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ಈ ತರಹದ ಕೃತ್ಯಗಳು ಮರುಕಳಿಸದಂತೆ ಕಾಲಕ್ಕೆ ತಕ್ಕಂತೆ ಕಾನೂನು ಬದಲಾವಣೆ ಆದರೆ ಒಳ್ಳೆಯದು ಎಂದು ಶಿರಹಟ್ಟಿಯ ಫಕೀರ ಸಿದ್ಧರಾಮೇಶ್ವರ ಶಿವಯೋಗಿಗಳು ಹೇಳಿದರು.
ಮೃತ ನೇಹಾಳ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ತಕ್ಕಶಿಕ್ಷೆ ಆಗದೇ ಹೋದಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.
ಇದೀಗ ಸಮಾಜದಲ್ಲಿ ಇಂತಹ ಕೃತ್ಯಗಳು ಆಗಾಗ ಹೆಚ್ಚಾಗುತ್ತಿವೆ. ಯುವ ಸಮುದಾಯವನ್ನು ಸರಿಯಾದ ದಾರಿಯಲ್ಲಿ ತರುವ ಕೆಲಸವನ್ನು ಸಮಾಜದ ಧುರೀಣರು, ಮಠಾಧೀಶರು ಮಾಡಬೇಕಿದೆ ಎಂದರು.
ಬೇರೆ ಬೇರೆ ರೋಗ ಬಂದರೆ ಹೇಗೆ ಔಷಧಿ ಬದಲಾವಣೆ ಆಗುವಂತೆ ಬೇರೆ ಬೇರೆ ಸಮಸ್ಯೆಗಳ ಪರಿಹಾರಕ್ಕೆ ಕಾನೂನು ಬದಲಾವಣೆ ಅವಶ್ಯ ಎಂದರು.
ಸಮಾಜದಲ್ಲಿ ದುರಾಸೆ ಹೆಚ್ಚಾಗಿದೆ. ಆಸ್ತಿ, ವೈಯಕ್ತಿಕ ಆಚಾರ, ವಿಚಾರದಿಂದ ಮಕ್ಕಳು ಹಿರಿಯರ ಮಾತು ಕೇಳದ ಕಾರಣಕ್ಕೆ ಈ ತರಹದ ದುರ್ಘಟನೆಗಳು ನಡೆಯುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.