ಮಹದಾಯಿ ಇತ್ಯರ್ಥ ನಿರೀಕ್ಷೆ ಹುಸಿ
Team Udayavani, Mar 7, 2017, 1:11 PM IST
ಹುಬ್ಬಳ್ಳಿ: ಗೋವಾ ವಿಧಾನಸಭೆ ಚುನಾವಣೆ ನಂತರ ಮಹದಾಯಿ ವಿವಾದ ಇತ್ಯರ್ಥ ಕಾಣಲಿದೆ ಎಂಬ ನಿರೀಕ್ಷೆ ಹುಸಿಯಾಗುತ್ತಿದ್ದು, ಗೋವಾ ಮತ್ತದೇ ಹೊಸ ಕ್ಯಾತೆಗೆ ಮುಂದಾಗಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮನವೊಲಿಸುವಿಕೆಯಲ್ಲಿ ರಾಜ್ಯ ಬಿಜೆಪಿ ನಾಯಕರು ವಿಫಲರಾಗಿದ್ದಾರೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಆರೋಪಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವಾ ಚುನಾವಣೆ ಅನಂತರದಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥಗೊಳ್ಳಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿದ್ದರು, ಖಾಸಗಿಯಾಗಿಯೂ ಭರವಸೆ ನೀಡಿದ್ದರು. ಆದರೆ, ಅಂತಹ ಯಾವುದೇ ಯತ್ನ ನಡೆಯುತ್ತಿಲ್ಲ. ಬದಲಾಗಿ ರಾಜ್ಯಕ್ಕೆ ಮಾರಕವಾಗುವ ನಿಟ್ಟಿನಲ್ಲಿ ಗೋವಾ ಕೇಂದ್ರದ ಮೇಲೆ ಒತ್ತಡ ತರುವ ಯತ್ನಕ್ಕೆ ಮುಂದಾಗಿದೆ ಎಂದರು.
ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪಾರ್ಸೆಕರ್ ಮಹದಾಯಿ ವಿಷಯವಾಗಿ ಪ್ರಧಾನಿಯವರ ಸಮಯ ಕೇಳಿದ್ದಾರೆನ್ನಲಾಗಿದೆ. ಒಂದು ವೇಳೆ ಗೋವಾ ಮುಖ್ಯಮಂತ್ರಿಗೆ ಪ್ರಧಾನಿ ಸಮಯ ನೀಡುವುದಾದರೆ ಅದೇ ವೇಳೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಕರೆದು ಸೌಹಾರ್ದ ಮಾತುಕತೆಗೆ ಮುಂದಾಗಲಿ ಎಂದು ಒತ್ತಾಯಿಸಿದರು. ಮಹದಾಯಿ ಹೋರಾಟಕ್ಕೆ 600 ದಿನಗಳು ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದರು.
ಅಧಿವೇಶನದಲ್ಲಿ ಹೋರಾಟ: ಮಲಪ್ರಭಾ ಬಲದಂಡೆ ಕಾಲುವೆ ರೋಣ ತಾಲೂಕಿನ ಬೆಳವಣಕಿ ಬಳಿ ಒಡೆದು ನೀರು ಪೋಲಾಗಿದೆ. ನಾಲೆ ಆಧುನೀಕರಣಕ್ಕೆ 962ಕೋಟಿ ರೂ.ವೆಚ್ಚದ ಯೋಜನೆಯನ್ನು ಜಾರಿಗೊಳಿಸಲು ಸರಕಾರ ಮುಂದಾಗದಿದ್ದರೆ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಹೋರಾಟ ಮಾಡುವುದಾಗಿ ಶಾಸಕ ಕೋನರಡ್ಡಿತಿಳಿಸಿದರು.
ಬರಗಾಲ ಹಿನ್ನೆಲೆಯಲ್ಲಿ ಅಗತ್ಯ ಪರಿಹಾರ ಕಾಮಗಾರಿ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನರೊಂದಿಗೆ ಕಣ್ಣಾಮುಚ್ಚಾಲೆ ಆಟಕ್ಕೆ ಮುಂದಾದಂತೆ ತೋರುತ್ತಿದೆ. ಕುಡಿಯುವ ನೀರು, ಮೇವಿನ ಕೊರತೆಯಿಂದ ಜನ-ಜಾನುವಾರು ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯ ಸರಕಾರ ತಕ್ಷಣವೇ ಬರ ಪರಿಹಾರ ಕಾಮಗಾರಿ ಆರಂಭಿಸಬೇಕು.
ಕೆರೆ ಸಂಜೀವಿನಿ ಯೋಜನೆಗೆ ಒತ್ತು ನೀಡಬೇಕು. ಮೊದಲು ಕುಡಿಯುವ ನೀರಿನ ವ್ಯವಸ್ಥೆಗೆ ತುರ್ತಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ನವಲಗುಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅಭಿವೃದ್ಧಿ ಸಹಿಸಿಕೊಳ್ಳಲಾಗದೆ ಬಿಜೆಪಿವರು ಇಲ್ಲಸಲ್ಲದ ಆರೋಪಕ್ಕೆ ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.