ಸಾಲಮನ್ನಾಕ್ಕೆ ಆಗ್ರಹಿಸಿ ರೈತರ ಮನವಿ
Team Udayavani, Feb 5, 2020, 10:56 AM IST
ಕುಂದಗೋಳ: ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಮುತ್ತಣ್ಣ ಶಿವಳ್ಳಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಲಮನ್ನಾ ಯೋಜನೆಯಡಿ ಋಣ ಮುಕ್ತಪತ್ರ ನೀಡಿ ಕುಮಾರಸ್ವಾಮಿ ಸರ್ಕಾರ ರೈತರ ಮೂಗಿಗೆ ತುಪ್ಪ ಸವರಿದೆ. ಈ ಯೋಜನೆಯಿಂದ ತಾಲೂಕಿನಲ್ಲಿ ಶೇ. 40 ರೈತರ ಸಾಲ ಮನ್ನಾ ಆಗಿಯೇ ಇಲ್ಲ. ಈಗ ಬ್ಯಾಂಕ್‌ನ ಅಧಿಕಾರಿಗಳು ರೈತರಿಗೆ ದಂಡದ ಬಡ್ಡಿ ಹಾಕಿ ಸಾಲ ಮರುಪಾವತಿಗೊಳಿಸುವಂತೆ ನೋಟಿಸ್ ಜಾರಿ ಮಾಡುತ್ತಿದ್ದಾರೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಕೂಡಲೇ ಋಣಮುಕ್ತ ಪ್ರಮಾಣಪತ್ರ ನೀಡಿದ ಎಲ್ಲ ರೈತರ ಬೆಳೆ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಅನೇಕ ಗ್ರಾಮಗಳಲ್ಲಿ ಗ್ರಾಮಲೆಕ್ಕಾಧಿಕಾರಿಗಳು, ಪಿಡಿಒಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸ್ಥಾನಿಕವಾಗಿ ಇರುತ್ತಿಲ್ಲ. ಅಕಾಲಿಕ ಮಳೆ ಸಂತ್ರಸ್ತರಿಗೆ ಇದುವರೆಗೂ ಸೂಕ್ತ ಪರಿಹಾರ ಕೊಟ್ಟಿಲ್ಲ. ತಾಲೂಕಿನಲ್ಲಿ ಇಂತಹ ಅನೇಕ ಸಮಸ್ಯೆಗಳು ಇವೆ. ಕೂಡಲೇ ಇವುಗಳನ್ನುಪರಿಹರಿಸದಿದ್ದರೆ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಮುತ್ತಣ್ಣ ಹೇಳಿದರು.
ಶಂಕರಗೌಡ ದೊಡಮನಿ, ಬಾಬಾಜಾನ್ ಮುಲ್ಲಾ, ಮುತ್ತಣ್ಣ ಹಿರೇಮಠ, ಎಂ.ಎಚ್. ಕಮಡೊಳ್ಳಿ, ಜಿ.ಬಿ. ಉಳ್ಳಬ್ಬಿ, ಬೀರಪ್ಪ, ಹನುಮಂತಪ್ಪ ಕಡೇಸೂರ, ಕಲಂದರ ಹೊರಕೇರಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.