ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ
Team Udayavani, Jan 20, 2022, 11:35 PM IST
ಹುಬ್ಬಳ್ಳಿ: ಪೊಲೀಸರು ಬೇಗನೆ ಹೊಟೇಲುಗಳನ್ನು ಬಂದ್ ಮಾಡಿಸಿದ್ದರಿಂದ ಊಟ ಸಿಕ್ಕಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ ನೂರಾರು ರೈತರು ಇಲ್ಲಿನ ಎಪಿಎಂಸಿ ಎದುರು ಹು-ಧಾ ಮುಖ್ಯ ರಸ್ತೆ ಹಾಗೂ ಬಿಆರ್ ಟಿಎಸ್ ರಸ್ತೆ ಬಂದ್ ಮಾಡಿ ಗುರುವಾರ ರಾತ್ರಿ ಪ್ರತಿಭಟಿಸಿದರು.
ಮೆಣಸಿನಕಾಯಿ ಮಾರಾಟಕ್ಕೆ ಧಾರವಾಡ ಸೇರಿದಂತೆ ಗದಗ, ಬಾಗಲಕೋಟೆ ಜಿಲ್ಲೆ ಹಾಗೂ ಬೇರೆ ಬೇರೆ ಊರುಗಳಿಂದ ರೈತರು ಬಂದಿದ್ದರು. ಮೆಣಸಿನಕಾಯಿ ತೂಕ ಆಗಿಲ್ಲ. ಪೊಲೀಸರು ಬೇಗನೇ ಎಲ್ಲ ಹೋಟೆಲ್ ಗಳನ್ನು ಬಂದ್ ಮಾಡಿಸಿದ್ದಾರೆ. ಹೀಗಾಗಿ ಇಲ್ಲಿಯೇ ವಾಸ್ತವ್ಯ ಮಾಡಿರುವ ನಮಗೆ ರಾತ್ರಿ ಊಟ ಸಿಗುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆನಡೆಸಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಎಸಿಪಿ ವಿನೋದ ಮುಕ್ತೇದಾರ ಹಾಗೂ ಎಪಿಎಂಸಿ-ನವನಗರ ಠಾಣೆ ಇನ್ಸಪೆಕ್ಟರ್ ಮತ್ತು ಸಿಬ್ಬಂದಿ ತೆರಳಿ, ಪತ್ರಿಭಟನಾನಿರತ ರೈತರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡಿದರು. ಅವರಿಗೆ ಎಪಿಎಂಸಿ ಯಲ್ಲಿಯೇ ಊಟದ ವ್ಯವಸ್ಥೆ ಮಾಡಿಸಿದರು.
ಗುರುವಾರ ಒಂದೇದಿನ ಇಲ್ಲಿನ ಎಪಿಎಂಸಿಗೆ 42ಸಾವಿರ ಚೀಲ ಮೆಣಸಿನಕಾಯಿ ಆವಕವಾಗಿದೆ. ಬೆಳಗ್ಗೆ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ರೈತರು ಮೆಣಸಿನಕಾಯಿ ತಂದಿದ್ದರಿಂದ ವ್ಯಾಪಾರಸ್ಥರು ಇಳಿಸಿಕೊಳ್ಳಲು ಸ್ಥಳವಿಲ್ಲವೆಂದು ನಿರಾಕರಿಸಿದ್ದರು. ಆಗಲೂ ರೈತರು ಎಪಿಎಂಸಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಾಪಾರಸ್ಥರ ಮನವೊಲಿಸಿ ರೈತರು ತಂದಿದ್ದ ಮೆಣಸಿನಕಾಯಿ ಇಳಿಸಿಕೊಳ್ಳುವ ವ್ಯವಸ್ಥೆ ಮಾಡಿಸಿದ್ದರು. ಆದರೆ ರಾತ್ರಿ ನಮಗೆ ಊಟ ಸಿಕ್ಕಿಲ್ಲವೆಂದು ರೈತರು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಿಂದಾಗಿ ಎರಡು ಬದಿಯ ಮಾರ್ಗದಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.