ಶೆಟ್ಟರ ನಿವಾಸದೆದುರು 2ನೇ ದಿನವೂ ರೈತರ ಸತ್ಯಾಗ್ರಹ
Team Udayavani, Nov 15, 2017, 12:17 PM IST
ಹುಬ್ಬಳ್ಳಿ: ಕಳಸಾ-ಬಂಡೂರಿ ಹಾಗೂ ಮಹದಾಯಿ ಜೋಡಣೆಗೆ ಆಗ್ರಹಿಸಿ ರೈತ ಸೇನಾ ವತಿಯಿಂದ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ ನಿವಾಸದೆದುರು ಮಂಗಳವಾರ 2ನೇ ದಿನವೂ ಸತ್ಯಾಗ್ರಹ ಮುಂದುವರಿದಿದೆ.
ನರಗುಂದ, ನವಲಗುಂದ, ರಾಮದುರ್ಗ, ಬದಾಮಿ, ಸವದತ್ತಿ ಹಾಗೂ ಹುಬ್ಬಳ್ಳಿ ತಾಲೂಕಿನ ರೈತರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬದಮಠ ಮಾಧ್ಯಮದವರೊಂದಿಗೆ ಮಾತನಾಡಿ, ನಮ್ಮ ಹೋರಾಟ ಮುಂದುವರಿದಿದ್ದು, ಈವರೆಗೆ ನಮಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ.
ಎಲ್ಲ ಶಾಸಕರು ಬೆಳಗಾವಿಯಲ್ಲಿ ಇರುವುದರಿಂದ ಅಲ್ಲಿ ಹೋರಾಟ ಮುಂದುವರಿಸಿದರೆ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ರೈತರಿಗೆ ಹೇಳಿದ್ದಾರೆ. ಆದರೆ ಇದಕ್ಕೊಪ್ಪದೇ ಇಲ್ಲಿಯೇ ಹೋರಾಟ ಮುಂದುವರಿಸಲಾಗುವುದು ಎಂದರು.
ಶೌಚಾಲಯಕ್ಕೆ ಬೀಗ: ಜಗದೀಶ ಶೆಟ್ಟರ ಮನೆಯ ಆವರಣದಲ್ಲಿದ್ದ ಶೌಚಾಲಯವನ್ನು ಹೋರಾಟ ನಿರತ ರೈತ ಮಹಿಳೆಯರು ಬಳಸುತ್ತಿದ್ದರು. ಆದರೆ ಮಂಗಳವಾರ ಬೆಳಗ್ಗೆ ಶೌಚಾಲಯಕ್ಕೆ ಬೀಗ ಹಾಕಿದ್ದರಿಂದ ಹೋರಾಟಗಾರ ಮಹಿಳೆಯರನ್ನು ಅವರ ಗ್ರಾಮಗಳಿಗೆ ಮರಳಿ ಕಳಿಸಲಾಯಿತು ಎಂದರು. ಶಂಕ್ರಪ್ಪ ಅಂಬಲಿ, ಗುರು ರಾಯನಗೌಡರ, ವೀರಬಸಪ್ಪ ಹೂಗಾರ, ಎ.ಪಿ. ಪಾಟೀಲ, ರಮೇಶ ನಾಯ್ಕರ, ಜಯಶಂಕರ ವಣ್ಣೂರ ಹೋರಾಟದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.