21ರಂದು ರಾಜ್ಯಮಟ್ಟದ ಸಮಾವೇಶ: ಚಂದ್ರಶೇಖರ

Team Udayavani, Jul 18, 2018, 5:20 PM IST

18-july-18.jpg

ಹಾವೇರಿ: ರೈತ ಹುತಾತ್ಮರ ದಿನಾಚರಣೆ (38ನೇ ವರ್ಷದ)ನಿಮಿತ್ತ ರೈತರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜು. 21ರಂದು ನಗರದಲ್ಲಿ ರಾಜ್ಯ ಮಟ್ಟದ ರೈತ ಸಮಾವೇಶ ಹಾಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದರು.

ಮಂಗಳವಾರ ನಗರದ ಪ್ರವಾಸಿಗೃಹದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಕುರಿತು ಮಾಹಿತಿ ನೀಡಿದರು. ಅಂದು ಬೆಳಗ್ಗೆ 11ಗಂಟೆಗೆ ಹುಕ್ಕೇರಿಮಠದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಳ್ಳಲಿದ್ದು ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಇರುವ ಹುತಾತ್ಮ ರೈತಗಲ್ಲುಗಳಿಗೆ ನಮಸ್ಕರಿಸಿ, ಸಮಾವೇಶ ನಡೆಯುವ ಮುನ್ಸಿಪಲ್‌ ಮೈದಾನಕ್ಕೆ ಬರಲಿದೆ ಎಂದು ತಿಳಿಸಿದರು.

ರೈತರ ಸಾಲ ಸಂಪೂರ್ಣ ಮನ್ನಾ ಮಾಡಿ ಅನ್ನದಾತರನ್ನು ಋಣಮುಕ್ತರನ್ನಾಗಿ ಮಾಡಬೇಕು. ರೈತರ ಸಾಲ ಎಂದರೆ ಅದು ಸಮಾಜದ, ದೇಶದ ಸಾಲವಾಗಿದೆಯೇ ಹೊರತು ರೈತರ ವೈಯಕ್ತಿಕ ಸಾಲವಲ್ಲ. ಒಂದು ಬಾರಿ ಸರ್ಕಾರ ರೈತರ ಎಲ್ಲ ಸಾಲ ಮನ್ನಾ ಮಾಡಿ, ರೈತರ ಬೆಳೆಗಳಿಗೆ ಯೋಗ್ಯ ಬೆಲೆ ಕೊಟ್ಟರೆ ಸಾಲ ಮನ್ನಾ ಎಂಬ ಬೇಡಿಕೆಯನ್ನು ಸಂಘದ ಬೇಡಿಕೆ ಪಟ್ಟಿಯಿಂದ ಶಾಶ್ವತವಾಗಿ ತೆಗೆದುಹಾಕಲಾಗುವುದು ಎಂದರು.

ಡಾ| ಸ್ವಾಮಿನಾಥನ್‌ ಸೂತ್ರದಂತೆ ಕನಿಷ್ಠ ಬೆಂಬಲಬೆಲೆ ಘೋಷಿಸಬೇಕು. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳನ್ನು ಕೈಗೊಳ್ಳಬೇಕು. ನೀರಿನ ಉಳಿತಾಯ ಮಾಡಲು ಶೇ. 100ರಷ್ಟು ಹನಿನೀರಾವರಿ ಯೋಜನೆ ಜಾರಿಗೆ ತರಬೇಕು. ಬರಗಾಲ ಪ್ರದೇಶದ ರೈತರಿಗೆ ಒಂದು ಎಕರೆಗೆ ಕನಿಷ್ಠ 25 ಸಾವಿರ ರೂ. ಬೆಳೆನಷ್ಟ ಪರಿಹಾರ ನೀಡಬೇಕು ಎಂದು ಸಮಾವೇಶದ ಮೂಲಕ ಸರ್ಕಾರಕ್ಕೆ ಆಗ್ರಹಿಸಲಾಗುವುದು ಎಂದರು.

ರಾಜ್ಯದ ಕೈಮಗ್ಗ ಮತ್ತು ಯಾಂತ್ರೀಕೃತ ಮಗ್ಗಗಳಿಗೆ ಮಾಡಿರುವ ಸಾಲ ಸಂಪೂರ್ಣ ಮನ್ನಾ, ಮಹಿಳಾ ಸ್ತ್ರೀಶಕ್ತಿ ಸಂಘಗಳಿಗೆ ನೀಡಿರುವ ಎಲ್ಲ ಸಾಲಮನ್ನಾ ಮಾಡಬೇಕು. ಬಡ್ಡಿರಹಿತ ಸಾಲ ನೀಡಬೇಕು. ರಾಜ್ಯದ ನೀರಾವರಿ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ರಾಜ್ಯದಲ್ಲಿ ವಿದ್ಯುತ್‌ ಕಣ್ಣುಮುಚ್ಚಾಲೆ ನಿಲ್ಲಿಸಿ, ರೈತರ ಪಂಪ್‌ಸೆಟ್‌ ಗಳಿಗೆ ಪ್ರತಿದಿನ 15 ಗಂಟೆ ನಿರಂತರ ವಿದ್ಯುತ್‌ ಸರಬರಾಜು ಮಾಡಬೇಕು ಎಂದು ಸಮಾವೇಶದ ಮೂಲಕ ಹಕ್ಕೊತ್ತಾಯ ಮಾಡಲಾಗುವುದು ಎಂದರು.

ನಮ್ಮ ರೈತರ ಸಂಘ ಹೋರಾಟ, ಸಮಾವೇಶ ಮಾಡಲು ರೈತರಿಂದ 50, 100ರೂ. ಪಡೆದಿದ್ದೇವೆ. ಆದರೆ, ಅದನ್ನು ದುರುಪಯೋಗ ಮಾಡಿಕೊಂಡಿಲ್ಲ. ಲೆಕ್ಕಪತ್ರ ಇಟ್ಟು ಅದನ್ನು ಪಡೆದುಕೊಂಡಿದ್ದೇವೆ ಎಂದರು. ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡ ಮಾಲತೇಶ ಪೂಜಾರ, ಕೆ. ಮುನಿಯಪ್ಪ, ಕುರುವ ಗಣೇಶ, ಚನ್ನಬಸಪ್ಪ ಪೂಜಾರ, ರವೀಂದ್ರಗೌಡ ಪಾಟೀಲ, ಜಯಶ್ರೀ ಗುರಣ್ಣನವರ, ಮಲ್ಲಿಕಾರ್ಜುನ ದಾವಣಗೆರೆ, ಹನುಮಂತಪ್ಪ ಹುಚ್ಚಣ್ಣನವರ ಇತರರಿದ್ದರು.

ಟಾಪ್ ನ್ಯೂಸ್

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.