ಫಸಲ್ ಬಿಮಾ ಯೋಜನೆಗೆ ಸರ್ಕಾರದಿಂದ ಮಂಜೂರಾತಿ
Team Udayavani, Jun 17, 2020, 5:47 PM IST
ಧಾರವಾಡ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು 2020ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲು ಸರಕಾರ ಮಂಜೂರಾತಿ ನೀಡಿದೆ. ಕೃಷಿ ಇಲಾಖೆ ಅಧಿಕಾರಿಗಳು, ಲೀಡ್ ಬ್ಯಾಂಕ್ ಮತ್ತು ವಿಮಾ ಕಂಪನಿ ಪ್ರತಿನಿಧಿಗಳು ವಿಮೆಯ ಲಾಭ ಎಲ್ಲ ರೈತರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ದೀಪಾ ಚೋಳನ್ ಹೇಳಿದರು.
ಕೃಷಿ, ತೋಟಗಾರಿಕೆ, ಲೀಡ್ ಬ್ಯಾಂಕ್, ವಿಮಾ ಕಂಪನಿ ಮತ್ತು ಜಿಲ್ಲಾ ಅಂಕಿಸಂಖ್ಯೆ ಇಲಾಖೆಯ ಅಧಿಕಾರಿಗಳ ಸಭೆ ಕೈಗೊಂಡು ಅವರು ಮಾತನಾಡಿದರು. ಜಿಲ್ಲೆಯ ಮುಖ್ಯ ಹಾಗೂ ಇತರೆ ಬೆಳೆಗಳನ್ನು ತಾಲೂಕಾವಾರು ಪರಿಗಣಿಸಿ ಆಯಾ ತಾಲೂಕಿನ ಮುಖ್ಯ ಬೆಳೆಗಳಿಗೆ ಗ್ರಾಪಂ, ನಗರ ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಿ ವಿವಿಧ ಆಹಾರ, ಎಣ್ಣೆಕಾಳು, ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳನ್ನು ಪಟ್ಟಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಕೂಡಲೇ ಬ್ಯಾಂಕ್‌ಗಳು ರೈತರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಬೇಕು. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಬೆಳೆವಾರು ಬೆಳೆಸಾಲದ ಪ್ರಮಾಣದ ಆಧಾರದ ಮೇಲೆ ಸರ್ಕಾರದಿಂದ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಐ.ಬಿ. ಮಾತನಾಡಿ, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಬಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲು ವಿಮಾ ಕಂಪನಿ ಪ್ರತಿನಿಧಿಗಳ ಜೊತೆಗೂಡಿ ತಾಲೂಕಾ ಸಹಾಯಕ ಕೃಷಿ ನಿರ್ದೇಶಕರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳಿಗೆ ಸೂಚಿಸಲಾಗಿದೆ ಎಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಈಶ್ವರನಾಥ, ಕೃಷಿ ಇಲಾಖೆ ಉಪನಿರ್ದೇಶಕ ಮಂಜುನಾಥ ಅಂತರವಳ್ಳಿ, ಕೃಷಿ ಅಧಿಕಾರಿ ಮಂಜುನಾಥ ಹೂಗಾರ, ಭಾರತಿ ಎಕ್ಸಾ ಜನರಲ್ ಇನ್ಸೂರನ್ಸ್ ಕಂಪನಿ ಪ್ರತಿನಿಧಿ ವಿಜಯಾನಂದ ಬೆಲ್ಲದ, ಅಜಿತಕುಮಾರ, ಸಾಯಿಕುಮಾರ ಎಸ್. ಹಳ್ಳಿ, ಎಂ.ಕೆ. ತಳವಾರ, ಕೆಸಿಸಿ ಬ್ಯಾಂಕ್ ವ್ಯವಸ್ಥಾಪಕ ವಿ.ವಿ. ಪಡಸಲಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.