ಸಾಹಿತಿ-ಕಲಾವಿದರಿಗೆ ಆರ್ಥಿಕ ನೆರವು
Team Udayavani, Apr 23, 2020, 1:56 PM IST
ಧಾರವಾಡ: ಕೋವಿಡ್-19 ಕೋವಿಡ್ 19 ನಿಯಂತ್ರಣಕ್ಕೆ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಶಕ್ತ ಕಲಾವಿದರು, ಸಾಹಿತಿಗಳಿಗೆ ಆರ್ಥಿಕ ಸಹಾಯ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ.
ಎಲ್ಲಾ ಕಲಾ ಪ್ರಕಾರದ ಕಲಾವಿದರು, ಸಾಹಿತಿಗಳು 10 ವರ್ಷ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರಬೇಕು. ವೃತ್ತಿನಿರತರ ಕಲಾವಿದರಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವವರಾಗಿರಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವವರು ಇದಕ್ಕೆ ಅರ್ಹರಿರಲ್ಲ. ಸರ್ಕಾರಿ ನೌಕರರಾಗಿರಬಾರದು. ರಾಜ್ಯ, ಕೇಂದ್ರ, ನಿಗಮ ಮಂಡಳಿ, ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳ ನೌಕರರಾಗಿರಬಾರದು. ಅರ್ಹ ಕಲಾವಿದರು, ಸಾಹಿತಿಗಳು ತಮ್ಮ ಹೆಸರು, ವಿಳಾಸ, ಆಧಾರ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳೊಂದಿಗೆ ಮಾಹಿತಿಯನ್ನು ಧಾರವಾಡ ಸಹಾಯಕರ ನಿರ್ದೇಶಕರ ಕಚೇರಿಯ ವೆಬ್‌ಸೈಟ್ kannadaculturedwd@gmail. Com ಮತ್ತು ದೂ: 0836-2442909 ಮುಖಾಂತರ ಇಲ್ಲವೇ ಖುದ್ದಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಇಲಾಖೆಗೆ ಸ್ವವಿವರ ತಲುಪಿಸಬೇಕು. ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿ ಇದರ ಲಾಭ ಪಡೆಯಲು ಯತ್ನಿಸುವವರ ಮೇಲೆ ವಿಪತ್ತು ನಿರ್ವಹಣಾ ಅಧಿನಿಯಮದನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.