ಚಿಟಗುಪ್ಪಿ ಪಾರ್ಕ್ ಮುಂಭಾಗದಿಂದಲೇ ಫ್ಲೈಓವರ್
ಅಂಬೇಡ್ಕರ್ ವೃತ್ತದಿಂದ ಇಲ್ಲ ರ್ಯಾಂಪ್ವಾಲ್ಪಾಲಿಕೆ ಕಚೇರಿ ಮುಂಭಾಗದ ನಿಲ್ದಾಣ ತೆರವು ಅನಿವಾರ್ಯ
Team Udayavani, Jun 27, 2021, 3:30 PM IST
ಹುಬ್ಬಳ್ಳಿ: ಫ್ಲೈಓವರ್ ನಿರ್ಮಾಣಕ್ಕಾಗಿ ಇಲ್ಲಿನ ಪಾಲಿಕೆ ಕಚೇರಿ ಮುಂಭಾಗದಲ್ಲಿರುವ ಬಿಆರ್‌ಟಿಎಸ್ ಬಸ್ ನಿಲ್ದಾಣ ಸ್ಥಳಾಂತರ ಮಾಡಬೇಕಾದ ಹಿನ್ನೆಲೆಯಲ್ಲಿ ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳ ಪರಿಶೀಲಿಸಿದರು.
ಫ್ಲೈಓವರ್ ನಿರ್ಮಾಣಕ್ಕೆ ಪಾಲಿಕೆ ಮುಂಭಾಗದ ಬಿಆರ್‌ಟಿಎಸ್ ಬಸ್ ನಿಲ್ದಾಣ ತೊಡಕಾಗಿದ್ದು, ಇದನ್ನು ತೆರವುಗೊಳಿಸುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ ಹಿನ್ನೆಲೆಯಲ್ಲಿ ಬಿಆರ್ ಟಿಎಸ್ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳ ಪರಿಶೀಲಿಸಿದರು. ಅಲ್ಲಿರುವ ಬಸ್ ನಿಲ್ದಾಣವನ್ನು ಚಿಟಗುಪ್ಪಿ ಆಸ್ಪತ್ರೆ ಎದುರಿನ ಪಾಲಿಕೆ ವಾಣಿಜ್ಯ ಕಟ್ಟಡ ಮುಂಭಾಗಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದು, ಈ ಸ್ಥಳ ಎಷ್ಟು ಸೂಕ್ತ ಎನ್ನುವ ಕುರಿತು ಪರಿಶೀಲನೆ ನಡೆಸಿದರು.
ಈ ಮೊದಲು ಗದಗ ರಸ್ತೆಯ ಫ್ಲೈಓವರ್ ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಎಲ್‌ಐಸಿ ಕಚೇರಿ ಮುಂಭಾಗದಿಂದ ಆರಂಭವಾಗಲಿದ್ದು, ಸುಮಾರು 150 ಮೀಟರ್ ರ್‍ಯಾಂಪ್ ವಾಲ್ ಬರಲಿದೆ ಎಂದು ನಿರ್ಧರಿಸಲಾಗಿತ್ತು. ಆದರೆ ಇದೀಗ ಈ ಯೋಜನೆಯನ್ನು ಒಂದಿಷ್ಟು ಮಾರ್ಪಾಡು ಮಾಡಿದ್ದು, ಚಿಟಗುಪ್ಪಿ ಪಾರ್ಕ್ ಮುಂಭಾಗದಿಂದ ನಿರ್ಮಿಸಲು ತಯಾರಿ ನಡೆದಿದೆ. ಪಾರ್ಕ್ ಮುಂಭಾಗದಿಂದಲೇ ರ್‍ಯಾಂಪ್ ವಾಲ್ ನಿರ್ಮಾಣವಾಗುವ ಹಿನ್ನೆಲೆಯಲ್ಲಿ ಪಾಲಿಕೆ ಕಚೇರಿ ಮುಂಭಾಗದ ಬಸ್ ನಿಲ್ದಾಣ ತೆರವುಗೊಳಿಸುವ ಅನಿವಾರ್ಯತೆ ಎದುರಾಗಿದೆ. ಪರಿಶೀಲನೆ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಎಇಇ ವಿಜಯಕುಮಾರ ಹಾಗೂ ಬಿಆರ್‌ಟಿಎಸ್ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.