ಕಡಿಮೆ ಓಟು ಬಂದತ್ತ ಗಮನ ನೀಡಿ
Team Udayavani, May 12, 2019, 11:07 AM IST
ಹುಬ್ಬಳ್ಳಿ: ಕಳೆದ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಕಡಿಮೆ ಮತ ಬಂದಿರುವುದಕ್ಕೆ ಸೂಕ್ತ ಕಾರಣ ಗುರುತಿಸಿ ಆ ಭಾಗದಲ್ಲಿ ನಮ್ಮ ಅಭ್ಯರ್ಥಿಗೆ ಹೆಚ್ಚು ಮತ ಬರುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿನ ಕಮಡೊಳ್ಳಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ಬಂದಿರುವ ಕುರಿತು ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರಿಂದ ಕಾರಣ ತಿಳಿಯುವ ಪ್ರಯತ್ನ ಮಾಡಿದರು. ಸ್ಥಳೀಯವಾಗಿ ಪಕ್ಷದ ಸಂಘಟನೆ, ಚುನಾವಣೆಯಲ್ಲಿ ಕಾರ್ಯಕರ್ತರ ಚಟುವಟಿಕೆ ಕುರಿತು ಮಾಹಿತಿ ಪಡೆದ ಅವರು, ಪಕ್ಷ ಬಿಟ್ಟು ಹೋಗಿರುವ ಕಾರ್ಯಕರ್ತರೊಂದಿಗೆ ನಾನು ಮಾತನಾಡಿ ಪಕ್ಷಕ್ಕೆ ಕರೆ ತರುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಮತದಾನ ಕಡಿಮೆಯಾಗಿರುವುದಕ್ಕೆ ಕಾರಣ ಗುರುತಿಸಿ ಈ ಚುನಾವಣೆಯಲ್ಲಿ ಮರುಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ. ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳಿಗೆ ಬಿದ್ದ ಮತಗಳು ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಬರುವಂತೆ ನೋಡಿಕೊಳ್ಳಬೇಕು. ವೇದಿಕೆ ಸಭೆಗಳಿಗೆ ಹೆಚ್ಚು ಒತ್ತು ಕೊಡದೆ ಮನೆ ಮನೆ ಪ್ರಚಾರ ನಡೆಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.
ಕಳೆದ ಐದು ವರ್ಷಗಳಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಮಾಡಿರುವ ಸಾಧನೆ ಹಾಗೂ ಸಿ.ಎಸ್.ಶಿವಳ್ಳಿ ಅವರು ಕ್ಷೇತ್ರದ ಬಗ್ಗೆ ಹೊಂದಿರುವ ಕಾಳಜಿ ನಮ್ಮ ಚುನಾವಣೆಗೆ ಶ್ರೀರಕ್ಷೆಯಾಗಿದೆ. ಈ ಎರಡೂ ಅಂಶಗಳನ್ನು ಕ್ಷೇತ್ರದ ಜನರಿಗೆ ಮುಟ್ಟಿಸಬೇಕು. ನಾಯಕರ ಹಿಂದೆ ಸುತ್ತುವುದನ್ನು ಬಿಟ್ಟು ಕ್ಷೇತ್ರದಲ್ಲಿ ಕೆಲಸ ಮಾಡುವುದಕ್ಕೆ ಮುಂದಾಗಬೇಕು ಎಂದರು.
ಲಿಡ್ಕರ್ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಪಕ್ಷಕ್ಕಾಗಿ ದುಡಿದ ಶಿವಳ್ಳಿ ಕುಟುಂಬಕ್ಕೆ ಗೌರವ ನೀಡುವ ಕಾರಣಕ್ಕೆ ಕುಸುಮಾವತಿ ಅವರಿಗೆ ಅವಕಾಶ ಕಲ್ಪಿಸಿದ್ದು, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು. ಸಂವಿಧಾನ ಬದಲಿಸುವ, ಡಾ| ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗಳನ್ನು ಕಿತ್ತೂಗೆಯಬೇಕು ಎನ್ನುವ ಕೋಮುವಾದಿ ಪಕ್ಷಕ್ಕೆ ಬೆಂಬಲಿಸಬಾರದು. ಆ ಪಕ್ಷದಲ್ಲಿರುವ ದಲಿತ ನಾಯಕರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಅವರಿಗೆ ರಾಜಕೀಯ ಅಧಿಕಾರ ಅನಿವಾರ್ಯತೆಗೆ ತಲೆ ತಗ್ಗಿಸಿಕೊಂಡಿದ್ದಾರೆ ಎಂದರು.ವೀರಕುಮಾರ ಪಾಟೀಲ, ಟಿ.ಈಶ್ವರ, ಸುರೇಶ ಸವಣೂರ, ಶಂಕರಗೌಡ ಪಾಟೀಲ, ಬಸವರಾಜ ನಾಯಕ ಇನ್ನಿತರರಿದ್ದರು.
ಬಿಜೆಪಿ ನಾಯಕರಿಂದ ದಿಕ್ಕು ತಪ್ಪಿಸುವ ಕೆಲಸ
ಹುಬ್ಬಳ್ಳಿ: 2018 ರಲ್ಲಿ ಬಹುಮತ ಸಾಬೀತು ಪಡಿಸಲು ಸಾಧ್ಯವಾಗದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ. ಹೆಚ್ಚು ಶಾಸಕರು ಇರುವ ನಮಗೆ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಜನರ ದಾರಿ ತಪ್ಪಿಸುವ ಬಿಜೆಪಿ ನಾಯಕರ ಮಾತಿಗೆ ಕಿಮ್ಮತ್ತಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ ತಿಳಿಸಿದರು.
ಶನಿವಾರ ಕುಂದಗೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬಿಜೆಪಿ ನಾಯಕರು ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಹೇಳುತ್ತಿದ್ದಾರೆ. ಬಿಜೆಪಿ ಸರಕಾರ ರಚಿಸಲು ಬೇಡ ಅಂದವರು ಯಾರು? 2018ರ ವಿಧಾನಸಭೆ ಚುನಾವಣೆ ಫಲಿತಾಂಶ ಬಳಿಕ ಬಿಜೆಪಿ ಸರ್ಕಾರ ರಚಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ. ಇಷ್ಟಾದರೂ ಅಧಿಕಾರಕ್ಕೆ ಬರುವ ಕನಸು ಇಟ್ಟುಕೊಂಡಿದ್ದು, ಇದು ಈಡೇರಲ್ಲ ಎಂದು ಲೇವಡಿ ಮಾಡಿದರು.
ಕ್ಷೇತ್ರದಲ್ಲಿ ಒಬ್ಬರೇ ಶಾಸಕಿ: ಕುಸುಮಾವತಿ ಶಿವಳ್ಳಿ ಅವರು ಎಲ್ಲಾ ಸಮುದಾಯಗಳನ್ನು ಒಗ್ಗಟ್ಟಿನಿಂದ ತೆಗೆದುಕೊಂಡೇ ಹೋಗುತ್ತಾರೆ. ಇವರೊಬ್ಬರೇ ಕ್ಷೇತ್ರದಲ್ಲಿ ಶಾಸಕರಾಗಿರುತ್ತಾರೆ ವಿನಃ ಮತ್ತಾರು ಆಡಳಿತ ಮಾಡಲ್ಲ. ಬಿಜೆಪಿ ನಾಯಕರಿಗೆ ಅರೋಪ ಮಾಡಲು ಬೇರಾವ ವಿಚಾರ ಇಲ್ಲದ ಕಾರಣಕ್ಕೆ ಇಂತಹ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕುಂದಗೋಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಮ್ರತೆಯಿಂದ ಮನೆ-ಮನೆಗೆ ತೆರಳಿ ಮನವಿ ಮಾಡುವ ಮೂಲಕ ಮತಯಾಚಿಸುತ್ತದೆ. ಭರಾಟೆಯ ಪ್ರಚಾರ ನಡೆಸಲ್ಲ ಎಂದು ತಿಳಿಸಿದರು.
ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಇದೆ. ಹೀಗಾಗಿ ಈ ಸಮಸ್ಯೆ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಸಮಸ್ಯೆ ಕುರಿತು ಚರ್ಚಿಸಲು ಇಲ್ಲಿಗೆ ಬಂದಿದ್ದರು. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಸುವ ಕುರಿತಾಗಿ ಜಲಸಂಪನ್ಮೂಲ ಸಚಿವನಾಗಿ ಪರಸ್ಪರ ಒಡಂಬಡಿಕೆಗೆ ಸಹಿ ಹಾಕುವೆ. ನೀರಿನ ವಿಚಾರ ಹೊರತಾಗಿ ಶ್ರೀಮಂತ ಪಾಟೀಲ ಬೇರೆ ಯಾವ ಬೇಡಿಕೆ ಇಟ್ಟಿಲ್ಲ. ಶ್ರೀಮಂತ ಪಾಟೀಲ ಅವರು ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರು. ಯಾವ ಪಕ್ಷಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.