ಕೊಳಚೆ ಪ್ರದೇಶದಲ್ಲಿ ಫಾಗಿಂಗ್‌ಗೆ ಆಗ್ರಹ
Team Udayavani, Jul 3, 2019, 11:51 AM IST
ಧಾರವಾಡ: ಮಹಾನಗರ ಪಾಲಿಕೆ ಕಚೇರಿ ಎದುರು ಎಸ್‌ಯುಸಿಐ(ಕ)ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಧಾರವಾಡ: ಅವಳಿ ನಗರದ ಕೆಲ ಬಡಾವಣೆ ಹಾಗೂ ಸ್ಲಂಗಳಲ್ಲಿ ಚರಂಡಿ ನೀರು ತುಂಬಿ ಹರಿಯುತ್ತಿದ್ದು, ಚರಂಡಿಗಳನ್ನು ಸ್ವಚ್ಛಗೊಳಿಸಲು ಹಾಗೂ ಸೊಳ್ಳೆ ನಿಯಂತ್ರಿಸಲು ಫಾಗಿಂಗ್ ಮಾಡುವಂತೆ ಆಗ್ರಹಿಸಿ ಎಸ್‌ಯುಸಿಐ(ಕಮ್ಯುನಿಸ್ಟ್)ಪಕ್ಷದಿಂದ ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಜನ್ನತ ನಗರ, ಲಕ್ಷ್ಮೀಸಿಂಗನಕೆರೆ, ಚಪ್ಪರಬಂದ್ ಕಾಲೋನಿ, ಲೈನ್ ಬಜಾರ್, ಗೌಡರ ಕಾಲೋನಿ, ಸರಸ್ವತಪುರ ಸ್ಲಂ, ಜಯನಗರ ಪ್ಲಾಟ್, ನೆಹರುನಗರ, ಮದಾರಮಡ್ಡಿ, ಗೌಳಿಗಲ್ಲಿಯಲ್ಲಿ ಸೊಳ್ಳೆ ನಿಯಂತ್ರಿಸಲು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಫಾಗಿಂಗ್ ಮಾಡಬೇಕು. ನಿಯಮಿತವಾಗಿ ಕಸ ವಿಲೇವಾರಿ ಮಾಡಬೇಕು. ಹಲವು ಸ್ಲಂಗಳಲ್ಲಿ ಚರಂಡಿಗಳು ದುರಸ್ತಿಯಲ್ಲಿದ್ದು, ರಿಪೇರಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಮನವಿ ಸ್ವೀಕರಿಸಿದ ಕಾರ್ಯನಿರ್ವಾಹಕ ಅಭಿಯಂತ ಸಾಲಿಮಠ ಮಾತನಾಡಿ, ಕಸ ವಿಲೇವಾರಿ, ಚರಂಡಿ ಸ್ವಚ್ಛತೆ ಹಾಗೂ ಫಾಗಿಂಗ್ ಕಾರ್ಯವನ್ನು ನಾಳೆಯಿಂದಲೇ ಮಾಡಲಾಗುವುದು. ದುರಸ್ತಿಯಲ್ಲಿರುವ ಚರಂಡಿಗಳ ಸ್ಥಳ ಪರಿಶೀಲಿಸಿ ರಿಪೇರಿಗೆ ಹಂತ-ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆಯಿತ್ತರು.
ದೀಪಾ ವಿ., ಭುವನಾ ಎ., ರಮೇಶ ಹೊಸಮನಿ, ಮಧುಲತಾ ಗೌಡರ, ಭವಾನಿಶಂಕರ, ವಿಜಯಲಕ್ಷ್ಮೀ ದೇವತ್ಕಲ್, ಗಂಗಾ ಕೋಕರೆ, ದೇವಮ್ಮ, ಸಿಂಧು ಕೌದಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.