ಸೋಂಕಿತರಿಗೆ ಅಗ್ಗದ ದರದಲ್ಲಿ ಊಟೋಪಚಾರ

ವೈದ್ಯರ ಸಲಹೆಯಂತೆ ಆಹಾರ ಸಿದ್ಧತೆ­, ಗುಣಮಟ್ಟಕ್ಕೆ ಆದ್ಯತೆ-ಪೌಷ್ಟಿಕತೆಯ ಬಾಧ್ಯತೆ

Team Udayavani, May 29, 2021, 4:44 PM IST

28hub-12

ವರದಿ : ಬಸವರಾಜ ಹೂಗಾರ

ಹುಬ್ಬಳ್ಳಿ: ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಹೋಮ್‌ ಐಸೋಲೇಷನ್‌ ಹೊಂದಿದ ಸೋಂಕಿತರಿಗೆ ಇಲ್ಲಿನ ಶ್ರೀ ಕೃಷ್ಣ ಭವನದಿಂದ ಅತ್ಯಂತ ಕಡಿಮೆ ದರದಲ್ಲಿ ಊಟ ಹಾಗೂ ಉಪಹಾರ ವಿತರಣೆ ಕಾರ್ಯ ನಡೆಯುತ್ತಿದೆ.

ಕಳೆದ 23 ದಿನಗಳಿಂದ ನಗರದ ವಿವಿಧ ಭಾಗಗಳಿಗೆ ಊಟ-ಉಪಹಾರ ತಲುಪಿಸುವ ಕೆಲಸವನ್ನು ಶ್ರೀ ಕೃಷ್ಣ ಭವನದ ಸಿಬ್ಬಂದಿ ಮಾಡುತ್ತಿದ್ದಾರೆ. ಕೋವಿಡ್‌ ಕರ್ಫ್ಯೂದಿಂದ ನಗರದ ಎಲ್ಲ ಹೋಟೆಲ್‌ಗ‌ಳು ಬಾಗಿಲು ಹಾಕಿದ್ದು, ಇಂತಹ ಸಮಯದಲ್ಲಿ ಹೋಟೆಲ್‌ ಸಿಬ್ಬಂದಿ ತಮ್ಮ ತಮ್ಮ ಊರುಗಳಿಗೆ ಮರಳಲು ಸಿದ್ಧವಾಗುತ್ತಿದ್ದರು. ಸಿಬ್ಬಂದಿಗೆ ಉದ್ಯೋಗದ ಜೊತೆಗೆ ಅವರ ಯೋಗಕ್ಷೇಮವೂ ದೊಡ್ಡ ಜವಾಬ್ದಾರಿಯಾಗಿದ್ದು ಅದನ್ನು ಹೇಗೆ ನಿರ್ವಹಿಸಬಹುದು ಎಂದು ಶ್ರೀ ಕೃಷ್ಣ ಭವನದ ಮಾಲೀಕರಾದ ಕೃಷ್ಣಮೂರ್ತಿ ಉಚ್ಚಿಲ ಅವರು ಚಿಂತಿಸಿದಾಗ ಅವರಿಗೆ ನೆರವಾಗಿದ್ದು ಹೋಂ ಐಸೋಲೇಶನ್‌ ಇರುವವರು ಹಾಗೂ ಕೋವಿಡ್‌ ಕೇರ್‌ ಸೆಂಟರ್‌ಗಳು. ಅವರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಊಟ, ಉಪಹಾರ ಹಾಗೂ ಚಹಾ ಬಿಸ್ಕಿಟ್‌ ವಿತರಣೆ ಮಾಡುವ ಮೂಲಕ ಹೋಟೆಲ್‌ ಸಿಬ್ಬಂದಿಗೆ ಕೆಲಸದ ಜತೆಗೆ ಸೋಂಕಿತರಿಗೂ ಊಟ ನೀಡುವ ಕಾಯಕದಲ್ಲಿ ತೊಡಗಿಕೊಂಡರು. ಕೋವಿಡ್‌ ಕೇರ್‌ ಕೇಂದ್ರಗಳಲ್ಲಿರುವ ವೈದ್ಯರ ನಿಗದಿತ ಆಹಾರ ನಿರ್ಬಂಧಗಳ ಪ್ರಕಾರ, ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮತ್ತು ಆಹಾರವನ್ನು ತಯಾರಿಸಿ ವಿತರಿಸಲಾಗುತ್ತಿದೆ. ಜೊತೆಗೆ ಹೋಂ ಐಸೋಲೇಶನ್‌ ಇರುವವರಿಗೂ ಅವರ ಬೇಡಿಕೆಗೆ ಅನುಗುಣವಾಗಿ ಊಟ-ಉಪಹಾರ ವಿತರಣೆ ಮಾಡಲಾಗುತ್ತಿದೆ.

ರೋಗಿಗಳಿಗೆ ಕೈಗೆಟಕುವ ಬೆಲೆಯಲ್ಲಿ ನೀಡಲಾಗುವ ಊಟದಲ್ಲಿ ಹಣ್ಣುಗಳು, ಬೇಳೆಕಾಳುಗಳು ಮತ್ತು ತರಕಾರಿಗಳು ಸೇರಿವೆ. ಉಪಹಾರದಲ್ಲಿ ಇಡ್ಲಿ, ಉಪ್ಪಿಟ್ಟು ಸೇರಿದಂತೆ ಇನ್ನಿತರ ಖಾದ್ಯ ನೀಡಲಾಗುತ್ತಿದೆ. ಈಗಾಗಲೇ ಗೋಕುಲ ರಸ್ತೆ ಸಂಜೀವಿನಿ ಆಯರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಕೋವಿಡ್‌ ಕೇರ್‌ ಸೆಂಟರ್‌ಗೆ ಪ್ರತಿದಿನ 50 ಊಟ, ಉಪಹಾರ, ಚಹಾ ಬಿಸ್ಕಿಟ್‌, ಬಿವಿಬಿ ಕಾಲೇಜು ಆವರಣದಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ಸುಮಾರು 20ಕ್ಕೂ ಹೆಚ್ಚು ಊಟ ವಿತರಣೆ ಮಾಡಲಾಗುತ್ತಿದೆ. ಇನ್ನುಳಿದಂತೆ ಹೋಂ ಐಸೋಲೇಷನ್‌ ಇರುವವರ ಮನೆಗಳಿಗೆ ಊಟ ಸರಬರಾಜು ಮಾಡಲಾಗುತ್ತಿದೆ.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.