ಭಿನ್ನಾಭಿಪ್ರಾಯ ಮರೆತು ಹೋರಾಡಿ

Team Udayavani, Jul 30, 2017, 12:01 PM IST

hub1.jpg

ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ವೇದಿಕೆಯ ಮುಖಾಂತರ ಪಕ್ಷಾತೀತವಾಗಿ ಹೋರಾಟ ಮಾಡಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಹೇಳಿದರು. ನಗರದ ಖಾಸಗಿ ಹೊಟೇಲ್‌ನಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ವೇದಿಕೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. 

ಇಲ್ಲಿಯವರೆಗೆ ವೀರಶೈವ ಪದವನ್ನಿಟ್ಟುಕೊಂಡು ಸ್ವತಂತ್ರ ಧರ್ಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ವಿಫಲರಾಗಿದ್ದೇವೆ. ಈಗ ನಾವು ಇನ್ನೊಂದು ಪ್ರಯತ್ನ ಮಾಡಲೇಬೇಕಿದೆ. ಮಠಾಧೀಶರೆಲ್ಲ ತಮ್ಮ ಪ್ರತಿಷ್ಠೆ ಬಿಟ್ಟು ಲಿಂಗಾಯತ ಎಂಬ ಹೆಸರಿನ ಮೇಲೆ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಹೋರಾಟ ಮಾಡಲು ಸಿದ್ಧರಾಗಬೇಕು. 

ತಾರ್ಕಿಕ ಅಂತ್ಯ ಕಾಣುವವರೆಗೂ ಹೋರಾಟ ಮಾಡಲು ಎಲ್ಲರೂ ಬದ್ಧರಾಗಬೇಕೆಂದರು. ತತ್ವಶಾಸ್ತ್ರ ಪ್ರಾಧ್ಯಾಪಕ ಡಾ|ಎನ್‌.ಜಿ. ಮಹಾದೇವಪ್ಪ ಮಾತನಾಡಿ, ವೀರಶೈವರು ವೈದಿಕ ಸಂಪ್ರದಾಯದ  ಹೋಮ, ಹವನ, ಯಜ್ಞ, ಪಂಚಾಂಗಗಳನ್ನು ನಂಬಿ ಆಚರಿಸುವರು. ಕೇವಲ ಇಷ್ಟಲಿಂಗ ಉಪಾಸನೆ ಅವರ ಪೂಜ್ಯ ವಸ್ತುವಾಗಿದೆ.

ಯಾವುದೇ ಯಜ್ಞ-ಯಾಗಾದಿಗಳನ್ನು ಆಚರಣೆಗೆ ವೀರಶೈವರು ತರುವವರಲ್ಲ. ವೀರಶೈವ ಮತ್ತು ಲಿಂಗಾಯತರಲ್ಲಿ ಅನೇಕ ವ್ಯತ್ಯಾಸಗಳಿವೆ. ಆದ್ದರಿಂದ ಸ್ವತಂತ್ರ ಧರ್ಮಕ್ಕೆ ಲಿಂಗಾಯತ ಧರ್ಮ ಎಂಬ ಹೆಸರಿನಲ್ಲಿ ಪ್ರಸ್ತಾವನೆ ಸಲ್ಲಿಸುವುದು ಅನಿವಾರ್ಯ ಎಂದರು. ವಚನ ಸಾಹಿತಿ ರಂಜಾನ ದರ್ಗಾ ಮಾತನಾಡಿ, ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಿದೆ.

ಇದಕ್ಕೆ ಬಸವಣ್ಣನವರೇ ಧರ್ಮಗುರು. ಇದು ವಚನ ಸಾಹಿತ್ಯ ಇತಿಹಾಸದಿಂದ ತಿಳಿದು ಬರುವ ಸಂಗತಿ. ಇದರಲ್ಲಿ ಯಾವುದೇ ಬಗೆಯ ಗೊಂದಲವಿಲ್ಲ. 12ನೇ ಶತಮಾನದಿಂದ ಇಲ್ಲಿಯವರೆಗೂ ಲಿಂಗಾಯತ ಧರ್ಮ ತೀವ್ರ ಅನ್ಯಾಯಕ್ಕೊಳಗಾಗಿದ್ದು, ಈಗ ಕಾಲ ಪಕ್ವವಾಗಿದೆ. ಇಂದಿನ ಸಭೆಯು ಐತಿಹಾಸಿಕವೆಂದು ಅಭಿಪ್ರಾಯಪಟ್ಟರು. 

ಬಸವಣ್ಣನವರು ನವ ಸಮಾಜದ ನಿರ್ಮಾಪಕರು. ಲಿಂಗಾಯತ ಧರ್ಮಕ್ಕೆ ಹೊಸ ಸಿದ್ಧಾಂತ, ಹೊಸ ದರ್ಶನಕೊಟ್ಟರು. ಒಂದು ಸ್ವತಂತ್ರ ಧರ್ಮಕ್ಕಿರಬೇಕಾದ ಎಲ್ಲ ಅಂಶಗಳು ಲಿಂಗಾಯತ ಧರ್ಮಕ್ಕಿವೆ. ಆದ್ದರಿಂದ ಸ್ವತಂತ್ರ ಧರ್ಮದ ಘೋಷಣೆಗಾಗಿ ರಾಜ್ಯ ಸರಕಾರಕ್ಕೆ ಲಿಂಗಾಯತ ಧರ್ಮ ಎಂಬ ಪ್ರಸ್ತಾವನೆ ಸಲ್ಲಿಸಬೇಕು. 

ಈಗಾಗಲೇ ವೀರಶೈವ ಎಂಬ ಪದ ಬಳಕೆ ಮಾಡಿ ಎರಡು ಬಾರಿ ಪ್ರಸ್ತಾವನೆ ಸಲ್ಲಿಸಿ ವಿಫಲವಾದ ಹಿನ್ನೆಲೆಯಲ್ಲಿ ಲಿಂಗಾಯತ ಧರ್ಮ ಎಂಬ ಹೆಸರಿನಲ್ಲಿ ಪ್ರಸ್ತಾವನೆ ಸಲ್ಲಿಸುವುದು ಸೂಕ್ತವೆಂದರು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಮಾಜದ ಮುಖಂಡರು ಅಭಿಪ್ರಾಯ ಹಂಚಿಕೊಂಡರು. 

ಮಾಜಿ ಶಾಸಕ ಎಂ.ಎಸ್‌. ಅಕ್ಕಿ, ಶಂಕರಣ್ಣ ಮುನವಳ್ಳಿ, ನೀಲಕಂಠ ಅಸೂಟಿ, ಗುರುರಾಜ ಹುಣಸಿಮರದ, ವಿ.ಎಸ್‌. ಪಾಟೀಲ, ಅಶೋಕ ಬೇವಿನಮರದ ಇತರರಿದ್ದರು. ಹೋರಾಟ ವೇದಿಕೆ ಸಂಚಾಲಕ ವಿಕಾಸ ಸೊಪ್ಪಿನ ಸ್ವಾಗತಿಸಿದರು. ಪಾಲಿಕೆ ಸದಸ್ಯ ರಾಜಣ್ಣ ಕೊರವಿ ವಂದಿಸಿದರು.  

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.