ಮಾಜಿ ಸಚಿವ ಜಬ್ಬಾರಖಾನ್ ಹೊನ್ನಳ್ಳಿ ನಿಧನ
Team Udayavani, Oct 7, 2022, 9:37 AM IST
ಹುಬ್ಬಳ್ಳಿ: ಮಾಜಿ ಸಚಿವ, ಅಂಜುಮನ್ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷ ಜಬ್ಬಾರಖಾನ ಹೊನ್ನಳ್ಳಿ (75) ಶುಕ್ರವಾರ ಬೆಳಗ್ಗೆ ನಿಧನರಾದರು.
ಕೇಶ್ವಾಪುರ ನಿವಾಸಿಯಾದ ಹೊನ್ನಳ್ಳಿಯವರು ರಾಜಕೀಯಕ್ಕೆ ಬರುವ ಮುಂಚೆ ಶಿಕ್ಷಕರಾಗಿದ್ದರು. ಜನತಾ ದಳದಲ್ಲಿ ಗುರುತಿಸಿಕೊಂಡಿದ್ದ ಇವರು ಎಸ್.ಆರ್. ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಆನಂತರ 1999, 2007ರಲ್ಲಿ ಶಾಸಕರಾಗಿ ಆಯ್ಕೆಯಾದರು. ಧರ್ಮಸಿಂಗ್ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. 1996ರಿಂದ 2019ರ ವರೆಗೆ ಸುದೀರ್ಘ ಕಾಲ ಅಂಜುಮನ್ ಸಂಸ್ಥೆಯ ಅಧ್ಯಕ್ಷರಾಗಿದ್ದರು.
2018ರಲ್ಲಿ ಅವರ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು. ಇದೇ ಸಂದರ್ಭದಲ್ಲಿ ಪಾರ್ಶ್ವವಾಯು ಪೀಡಿತರಾಗಿದ್ದರು. ಅಂದಿನಿಂದ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಗ್ಗೆ 6:45 ಗಂಟೆ ಸುಮಾರಿಗೆ ಇಲ್ಲಿನ ಗೋಕುಲ ರಸ್ತೆಯ ಕೆಎಲ್ ಇ ಶುಚಿರಾಯು ಆಸ್ಪತ್ರೆಯಲ್ಲಿ ವಿಧಿವಶರಾದರು.
ಇವರ ಅಂತ್ಯಕ್ರಿಯೆಯು ಇಂದು ಸಂಜೆ 7:00 ಗಂಟೆಗೆ ಗವಿ ಗಲ್ಲಿಯ ಬಡೇ ಖಬರಸ್ತಾನದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್-9
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.