ವಂಚನೆ ಪ್ರಕರಣ ಸಿಐಡಿಗೆ: ಲಾಡ್
Team Udayavani, Apr 21, 2017, 3:14 PM IST
ಕಲಘಟಗಿ: ಪಟ್ಟಣದಲ್ಲಿ ಖಾಸಗಿ ವ್ಯಕ್ತಿಗಳು ನಡೆಸಿದ ಕೋಟ್ಯಂತರ ರೂ.ಗಳ ವಂಚನೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಭರವಸೆ ನೀಡಿದರು. ಇಲ್ಲಿನ ಸಚಿವರ ನಿವಾಸದಲ್ಲಿ ಗುರುವಾರ ಚನ್ನಮ್ಮನ ಕಿತ್ತೂರಿನ ಸಾರ್ವಜನಿಕರು ತಮಗಾದ ಸುಮಾರು 21 ಕೋಟಿ ರೂ.ಗಳ ವಂಚನೆ ಕುರಿತು ಗಮನ ಸೆಳೆದಾಗ ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಸಿಪಿಐ ಶ್ರೀನಿವಾಸ ಹಾಂಡ್ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಿನದಿಂದ ದಿನಕ್ಕೆ ನೂರಾರು ಜನ ಅಮಾಯಕರ ಅಳಲನ್ನು ಕೇಳಿ ಬೇಸರವಾಗಿದ್ದು, ತನಿಖೆಯನ್ನು ಚುರುಕುಗೊಳಿಸುವುದಕ್ಕಾಗಿ ಸಿಐಡಿಗೆ ವಹಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ.
2-3 ದಿನಗಳಲ್ಲಿ ಸಿಐಡಿಗೆ ಒಪ್ಪಿಸಲಾಗುವುದು ಎಂದರು. ತನಿಖಾ ತಂಡವು ನಾಲ್ವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಅವರಿಗೆ ಜಾಮೀನು ದೊರಕಿಲ್ಲ. ತನಿಖೆ ಇನ್ನೂ ಚುರುಕುಗೊಳಿಸಿ, ಆರೋಪಿಗಳು ಎಲ್ಲೇ ಇದ್ದರೂ ಅವರನ್ನು ಶೀಘ್ರದಲ್ಲಿ ಕರೆ ತಂದು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
ಆದರೆ ಹಣ ವಂಚಿತರು ಆತ್ಮಬಲ ತುಂಬಿಕೊಳ್ಳಬೇಕು ಎಂದು ಮನವಿ ಮಾಡಿದರು. ಅಖೀಲ ಕರ್ನಾಟಕ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಹನಮಂತ ಕೊಟಬಾಗಿ, ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಇದ್ದರು. ಕಿತ್ತೂರಿನಿಂದ ಆಗಮಿಸಿದ್ದ 200ಕ್ಕೂ ಹೆಚ್ಚು ಜನರು ಅಂದಾಜು 21 ಕೋಟಿ ರೂ. ಗಳ ವಂಚನೆಯಾಗಿರುವುದರ ಚೆಕ್‌ಗಳನ್ನು ತೋರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಔಡಲಹಣ್ಣು ತಿಂದು ಏಳು ಮಕ್ಕಳು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ದಾಖಲು
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
Hubli: ಅಮಿತ್ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.