“ಸುಷ್ಮಾ ಹೆಸರಲ್ಲಿ ಮೋಸ ಮಾಡಿದ ಹಾಸನದ “ವ್ಯಕ್ತಿ’ ವರ್ಷದ ಬಳಿಕ ಸೆರೆ
Team Udayavani, Feb 5, 2021, 4:06 PM IST
ಧಾರವಾಡ: ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಮೋಸ ಮಾಡಿ ಹುಬ್ಬಳ್ಳಿ ತಾಲೂಕಿನ ಗುತ್ತಿಗೆದಾರನಿಂದ 15 ಲಕ್ಷಕ್ಕೂ ಹೆಚ್ಚು ಹಣ ಪಡೆದಿದ್ದ ಹಾಸನ ಮೂಲದ ವ್ಯಕ್ತಿಯನ್ನು 1 ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಎಸ್‌ಪಿ ಪಿ.ಕೃಷ್ಣಕಾಂತ ಮಾರ್ಗದರ್ಶನದಲ್ಲಿ ಧಾರವಾಡ ಸೈಬರ್, ಆರ್ಥಿಕ ಮತ್ತು ಮಾದಕ ವಸ್ತು ಅಪರಾಧ ಠಾಣೆ ಸಿಬ್ಬಂದಿ ಬಂ ಧಿಸಿ, ಪ್ರಕರಣ ದಾಖಲಿಸಿದ್ದಾರೆ. ಸ
ಧಾರವಾಡ ಸೈಬರ್, ಆರ್ಥಿಕ ಮತ್ತು ಮಾದಕ ವಸ್ತು ಅಪರಾಧ ಠಾಣೆ ಸಿಪಿಐ ವಿಜಯ ಬಿರಾದಾರ ನೇತೃತ್ವದಲ್ಲಿ ಸಿಬ್ಬಂದಿ ತನಿಖೆ ಕೈಗೊಂಡು ಜ.31ರಂದು ಹಾಸನ ತಾಲೂಕಿನ ದೊಡ್ಡಗಿಣಿಗೇರೆ ಗ್ರಾಮದಲ್ಲಿ ಆರೋಪಿ ಪ್ರತಾಪ ಡಿ.ಎಂ.ನನ್ನು ಬಂಧಿಸಿದ್ದಾರೆ. ಮೋಸ ಮಾಡಿ ಪಡೆದ ಹಣದಲ್ಲಿನ 1.25 ಲಕ್ಷ ರೂ. ವಶಪಡಿಸಿ ಕೊಂಡಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ 66 ಡಿ ಮತ್ತು ಐಪಿಸಿ 420 ರ ಕಲಂ ಅಡಿ ಆರೋಪಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಏನಿದು ಪ್ರಕರಣ?: ಹಾಸನ ತಾಲೂಕಿನ ದೊಡ್ಡಗಿಣಿಗೇರೆ ಗ್ರಾಮದ ಡಿ.ಎಂ.ಪ್ರತಾಪ್ (29) ಎಂಬಾತ ಸುಷ್ಮಾ ಸುಸು ಎಂಬ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಹುಬ್ಬಳ್ಳಿ ತಾಲೂಕಿನ ಗಂಗಿವಾಳ ಗ್ರಾಮದ ರುದ್ರಗೌಡ ಮಲ್ಲನಗೌಡ ಪಾಟೀಲ ಎಂಬ ಗುತ್ತಿಗೆದಾರನಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಪರಿಚಯ ಮಾಡಿಕೊಂಡಿದ್ದ. 2017ರಲ್ಲಿ ವಾಟ್ಸ್‌ಆ್ಯಪ್ ನಂಬರ್ ಪಡೆದು ಮೂರು ವರ್ಷಗಳಿಂದ ರುದ್ರಗೌಡ ಪಾಟೀಲಗೆ ಚಾಟಿಂಗ್ ಮಾಡಿದ್ದಾನೆ.
ಇದನ್ನೂ ಓದಿ :ಮೂರು ದಿನಗಳೊಳಗೆ ಕೊರೊನಾ ಲಸಿಕೆ ಗುರಿ ಸಾಧಿಸಿ
ಈ ಚಾಟಿಂಗ್ ಸಮಯದಲ್ಲಿ ಆರೋಪಿ ಪ್ರತಾಪ, ರುದ್ರಗೌಡನಿಗೆ ತಾನು ಮೂಕಿ, ಕಿವುಡಿ ಎಂದು ಮೆಸೇಜ್ ಮಾಡುತ್ತ ನಾನು ನಿಮ್ಮನ್ನು ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆಂದು ನಂಬಿಸಿದ್ದಾನೆ. ರುದ್ರಗೌಡನು ಆರೋಪಿ ಪ್ರತಾಪ ತನಗೆ ಹಾಗೂ ತನ್ನ ಪರಿಚಯಸ್ಥ 8-10 ಜನರ ಬ್ಯಾಂಕ್ ಖಾತೆಗಳಿಗೆ 14ರಿಂದ 15 ಲಕ್ಷ ರೂ. ಹಾಕಿಸಿ ಕೊಂಡು ಮೋಸ ಮಾಡಿದ್ದಾನೆ ಎಂದು 2019, ಡಿ.9ರಂದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: “ವಕ್ಫ್ ‘ ಸಮಸ್ಯೆ ಶೀರ್ಘ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ
Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ
Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.