ಕ್ಷಯ ರೋಗಿಗಳನ್ನು ಪ್ರೀತಿಯಿಂದ ಕಾಣಿ: ಡಾ| ಉಷಾ
Team Udayavani, Jul 13, 2018, 5:25 PM IST
ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕ್ಷಯರೋಗ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೇಂದ್ರ ಕಾರಾಗೃಹ ಆಶ್ರಯದಲ್ಲಿ ನಡೆಯಿತು. ಬೆಳಗಾವಿ ಜೆಎನ್‌ಎಂಸಿ ವೈದ್ಯಾಧಿಕಾರಿ ಡಾ| ಉಷಾ ವಾಸನಕರ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ಶೈಲಜಾ ತಮ್ಮಣ್ಣವರ, ಜಿಲ್ಲಾ ಆಸ್ಪತ್ರೆ ವೈದ್ಯಾ ಧಿಕಾರಿ ಡಾ| ನಾಗಲೇಕರ, ಡಾ| ಜಲಜಾಕ್ಷಿ ಹಾಗೂ ಡಾ| ಮೊಬಿನಾ ಕಾರಾಗೃಹವಾಸಿಗಳಿಗೆ ಕ್ಷಯರೋಗ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ| ಉಷಾವಾಸನಕರ, ಕ್ಷಯರೋಗ ಒಂದು ಗುಣಪಡಿಸಬಹುದಾದ ರೋಗವಾಗಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆದರೆ ಸಂಪೂರ್ಣವಾಗಿ ಗುಣಮುಖರಾಗಬಹುದು. ಕ್ಷಯರೋಗಿಗಳನ್ನು ಪ್ರೀತಿಯಿಂದ ಕಾಣಬೇಕು. ಕ್ಷಯರೋಗಿಗಳ ಸರ್ಕಾರ ವತಿಯಿಂದ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ತಾವೆಲ್ಲ ಬಿಡುಗಡೆ ಹೊಂದಿದ ನಂತರ ಸಮಾಜದಲ್ಲಿ ಹಾಗೂ ತಮ್ಮ ಕುಟುಂಬ ವರ್ಗದವರಿಗೆ ರೋಗದ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸಹಾಯಕ ಅಧೀಕ್ಷಕ ಬಸವರಾಜ ಮೂಲಿಮನಿ ಮಾತನಾಡಿ, ಯಾವುದೇ ದುಶ್ಚಟಗಳಿಗೆ ಒಳಗಾಗದೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಹಿಂದಿನ ಕಾಲದಲ್ಲಿ ಕ್ಷಯರೋಗ ಒಂದು ಭಯಾನಕ ರೋಗವಾಗಿತ್ತು. ಆದರೆ ಇಂದು ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದಾದ ರೋಗವಾಗಿದೆ. ರೋಗ ಬರದಂತೆ ಮನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕಾರಾಗೃಹದಲ್ಲಿ ತಾವು ಧ್ಯಾನ, ಯೋಗ, ಪ್ರಾರ್ಥನೆ ಓದುವುದು ಮುಂತಾದ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.