ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ: ನಾಯ್ಕ


Team Udayavani, Jul 30, 2018, 5:07 PM IST

30-july-19.jpg

ಬೆಳಗಾವಿ: ನಗರದಲ್ಲಿ ಡೆಂಘೀ, ಚಿಕೂನ್‌ ಗುನ್ಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಗುರು ವಿವೇಕಾನಂದ ಸೇವಾ ಟ್ರಸ್ಟ್‌ ಅಧ್ಯಕ್ಷ ನಾರಾಯಣ ನಾಯ್ಕ ಹೇಳಿದರು.

ನಗರದ ಖಡಕ್‌ ಗಲ್ಲಿಯಲ್ಲಿ ಗುರು ವಿವೇಕಾನಂದ ಸೇವಾ ಟ್ರಸ್ಟ್‌ ವತಿಯಿಂದ ರವಿವಾರ ನಡೆದ ಉಚಿತ ಡೆಂಘೀ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪರಿಸರ ಸ್ವಚ್ಛವಾಗಿದ್ದರೆ ಆರೋಗ್ಯ ಸದೃಢವಾಗಿರುತ್ತದೆ. ಈ ಬಗ್ಗೆ ಎಲ್ಲರು ಮುತುವರ್ಜಿ ವಹಿಸಬೇಕು ಎಂದು ಹೇಳಿದರು.

ಮಾಂಸ ಖಂಡಗಳು ಗಟ್ಟಿಯಾದಾಗ ಮಾತ್ರ ಹೋರಾಡಲು ಸಾಧ್ಯ ಎಂದು ಸ್ವಾತಂತ್ರ್ಯ ಪೂರ್ವದಲ್ಲಿ ವಿವೇಕಾನಂದರು ಹೇಳುತ್ತಿದ್ದರು. ಆರೋಗ್ಯ ಚೆನ್ನಾಗಿರಬೇಕಾದರೆ ರೋಗಗಳನ್ನು ತಡೆಗಟ್ಟಬೇಕಾಗುತ್ತದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲರೂ ಕಾಳಜಿ ವಹಿಸಬೇಕು. ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಡೆಂಘೀ, ಚಿಕೂನ್‌ಗುನ್ಯಾ ಕುರಿತು ನಾಗರಿಕಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಗುರು ವಿವೇಕಾನಂದರ ಆಶಯದಂತೆ ಟ್ರಸ್ಟ್‌ ಈಗಾಗಲೇ ಸಮಾಜಮುಖೀ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಅದರಲ್ಲೂ ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 200 ಬಡ ಪ್ರತಿಭಾಂತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸಹ ನೀಡಿದೆ. ಆ ವಿದ್ಯಾರ್ಥಿಗಳು ಈಗ ಉತ್ತಮ ಶಿಕ್ಷಣ ಪಡೆಯುತ್ತಿದ್ದಾರೆ. ಇದೇ ರೀತಿ ಆರೋಗ್ಯ ಕ್ಷೇತ್ರಕ್ಕೂ ಅನೇಕ ಕೊಡುಗೆ ನೀಡಲಾಗಿದೆ ಎಂದರು. ಖಡಕ ಗಲ್ಲಿಯ ಹಿರಿಯರಾದ ವೈಜು ಜಾಧವ ಮಾತನಾಡಿ, ಜಿಲ್ಲಾದ್ಯಂತ ರೋಗಗಳು ಹರಡುತ್ತಿವೆ. ಅದಕ್ಕಾಗಿ ಸಾರ್ವಜನಿಕರು ತಮ್ಮ ಮಕ್ಕಳ ಬಗ್ಗೆ ಗಮನ ಹರಿಸಿ ಎಲ್ಲ ಕಡೆಗೂ ಸ್ವಚ್ಛತೆ ಕಾಪಾಡಿಕೊಂಡು ಹೋಗಬೇಕು. ಮುಂಬರುವ ದಿನಗಳಲ್ಲಿ ರೋಗಗಳು ಹರಡದಂತೆ ಜಾಗೃತರಾಗಬೇಕು ಎಂದರು.

ಪದಾಧಿಕಾರಿಗಳಾದ ಡಾ| ವೈ.ಬಿ. ಘಸಾರಿ, ಭಾರತಿ ಶೆಟ್ಟಿಗಾರ, ಮುನಿರಾಜು ಜೈನ್‌, ಮಹಾವೀರ ಜೈನ್‌, ರಾಜೇಶ ಗೌಡ, ವಿಶಾಲ ಪಾಟೀಲ, ಆನಂದ ಶೆಟ್ಟಿ, ಅಂಜನಕುಮಾರ ಗಂಡಗುದ್ರಿ ಹಾಗೂ ಸಿಬ್ಬಂದಿ ಸೇರಿದಂತೆ ಖಡಕ್‌ ಗಲ್ಲಿಯ ಹಿರಿಯರು ಇದ್ದರು. 

ಟಾಪ್ ನ್ಯೂಸ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.