Hubballi: ಕ್ಷುಲ್ಲಕ ಕಾರಣಕ್ಕೆ ತಲ್ವಾರ್‌ನಿಂದ ಹೊಡೆದಾಡಿಕೊಂಡ ಸ್ನೇಹಿತರು; ಓರ್ವ ಗಂಭೀರ
Team Udayavani, Sep 8, 2024, 2:12 PM IST
ಹುಬ್ಬಳ್ಳಿ: ಕ್ಷುಲ್ಲಕ ವಿಷಯವಾಗಿ ಸ್ನೇಹಿತರಿಬ್ಬರು ಪರಸ್ಪರ ತಲ್ವಾರ್‌ನಿಂದ ಹೊಡೆದಾಡಿಕೊಂಡ ಘಟನೆ ಶನಿವಾರ ಸಂಜೆ ತಾಲೂಕಿನ ವರೂರ ಬಳಿ ನಡೆದಿದ್ದು, ಈ ವೇಳೆ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಘಟನೆಯಲ್ಲಿ ತಾಲೂಕಿನ ಬಿ. ಅರಳಿಕಟ್ಟಿ ಗ್ರಾಮದವರಾದ ಜುಬೇರ ಮಲ್ಲಂಗಣ್ಣವರ ಹಾಗೂ ಬಿಡನಾಳ ಮೂಲದ ಫಕ್ರುದ್ದೀನ ಮುಲ್ಲಾನವರ ಗಾಯಗೊಂಡಿದ್ದಾರೆ.
ಹಣಕಾಸಿನ ವಿಷಯವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದೆ. ಅಲ್ಲದೆ ನನ್ನ ಹೆಂಡತಿ ನನ್ನಿಂದ ದೂರವಾಗಲು ನೀನೆ ಕಾರಣವೆಂದು ಫಕ್ರುದ್ದೀನನು ಜುಬೇರ ಜೊತೆ ಜಗಳ ಮಾಡಿಕೊಂಡಿದ್ದಾನೆ. ಈ ವೇಳೆ ಅದು ವಿಕೋಪಕ್ಕೆ ಹೋದಾಗ ತಲ್ವಾರ್ ತೆಗೆದುಕೊಂಡು ಬಂದಿದ್ದ ಫಕ್ರುದ್ದೀನನು ಜುಬೇರ ಮೇಲೆ ಕೈಗೆ ಹಲ್ಲೆ ಮಾಡಿದ್ದಾನೆ. ಆಗ ಜುಬೇರನು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಅದೇ ತಲ್ವಾರ್‌ನಿಂದ ಫಕ್ರುದ್ದೀನಗೆ ತಲೆ ಮತ್ತು ಮುಖಕ್ಕೆ ಹೊಡೆದು ಗಾಯಗೊಳಿಸಿದ್ದಾನೆ.
ಜುಬೇರನನ್ನು ಎಸ್‌ಡಿಎಂ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದು, ತೀವ್ರ ಗಾಯಗೊಂಡಿರುವ ಫಕ್ರುದ್ದೀನ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.