ಅಳ್ನಾವರದಿಂದ 11 ಹಳ್ಳಿಗಳು ಧಾರವಾಡ ಗ್ರಾಮೀಣ ಠಾಣೆಗೆ
Team Udayavani, Aug 27, 2019, 10:07 AM IST
ಧಾರವಾಡ: ವಿನಯ್ ಕುಲಕರ್ಣಿಗೆ ಗ್ರಾಮಸ್ಥರು ಅಭಿನಂದಿಸಿದರು.
ಧಾರವಾಡ: ನಗರಕ್ಕೆ ಹತ್ತಿರವಿದ್ದ ಅಳ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ್ದ 11 ಗ್ರಾಮಗಳು ಇದೀಗ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿಕೊಂಡಿದ್ದು, ಕೊನೆಗೂ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.
ಧಾರವಾಡ ತಾಲೂಕಿನ ಪಶ್ಚಿಮ ಭಾಗಕ್ಕಿರುವ ನಿಗದಿ, ಬೆನಕಟ್ಟಿ, ದೇವರಹುಬ್ಬಳ್ಳಿ, ಲಾಳಗಟ್ಟಿ, ದೇವಗಿರಿ, ಹಳ್ಳಿಗೇರಿ, ಹೊಲ್ತಿಕೋಟಿ, ಅಂಬ್ಲಿಕೊಪ್ಪ, ಮುರಕಟ್ಟಿ, ಬಣದೂರು, ಮಾವಿನಕೊಪ್ಪ ಗ್ರಾಮಗಳು ಇದೀಗ ಅಳ್ನಾವರ ಠಾಣೆಯಿಂದ ಧಾರವಾಡ ಗ್ರಾಮಾಂತರ ಠಾಣೆ ವ್ಯಾಪ್ತಿಗೆ ಸೇರಿದಂತಾಗಿದೆ.
ಧಾರವಾಡ ಗ್ರಾಮೀಣ ಠಾಣೆಗೆ ತಮ್ಮನ್ನು ಸೇರ್ಪಡೆ ಮಾಡುವಂತೆ ಹಳ್ಳಿಯ ಮುಖಂಡರು ಮಾಡಿಕೊಂಡ ಮನವಿಗೆ ಸರ್ಕಾರ ಸ್ಪಂದಿಸಿ ಗೃಹ ಇಲಾಖೆ ಈ ನಿರ್ಧಾರ ಕೈಗೊಂಡಿದೆ.
ಕುಲಕರ್ಣಿಗೆ ಅಭಿನಂದನೆ: ಮಾಜಿ ಸಚಿವ ವಿನಯ್ ಕುಲಕರ್ಣಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ಕ್ರಮವಹಿಸಲು ಶಿಫಾರಸು ಮಾಡಿದ್ದರು. ಈ ಹಳ್ಳಿಗಳನ್ನು ಅಳ್ನಾವರ ತಾಲೂಕಿಗೆ ಸೇರ್ಪಡೆಗೊಳಿಸಿದಾಗಲೂ ಮರಳಿ ಧಾರವಾಡ ತಾಲೂಕಿನಲ್ಲಿಯೇ ಇರುವಂತೆ ನೋಡಿಕೊಳ್ಳಲು ಶಿಫಾರಸು ಮಾಡಿದ್ದರು. ಹೀಗಾಗಿ ಈ ಹಳ್ಳಿಗಳ ಮುಖಂಡರು ವಿನಯ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಮಲ್ಲನಗೌಡ ಪಾಟೀಲ, ದ್ಯಾಮಪ್ಪ ನವನಕ್ಕಿ, ಮಹಾದೇವಪ್ಪ ನೀರಲಗಿ, ವೀರಭದ್ರ ರೇಶ್ಮಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.