Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ
Team Udayavani, Sep 22, 2024, 8:27 PM IST
ಹುಬ್ಬಳ್ಳಿ: ಕಾಂಗ್ರೆಸ್ ಅಧಿಕಾರವಿರುವೆಡೆ ಮತಾಂಧ ಶಕ್ತಿಗಳು ಹಾಗೂ ದೇಶದ್ರೋಹಿಗಳಿಗೆ ವಿಶೇಷ ಶಕ್ತಿ ಬರುತ್ತದೆ. ಇದಕ್ಕೆ ತುಷ್ಟೀಕರಣ ನೀತಿಯೇ ಕಾರಣ. ಕರ್ನಾಟಕದಲ್ಲಿ ಇದು ಪರಾಕಾಷ್ಠೆ ತಲುಪಿದೆ. ನಾಗಮಂಗಲದಂತಹ ಘಟನೆಯನ್ನು ಪೊಲೀಸರು ಸರಿಯಾಗಿ ನಿರ್ವಹಿಸಿಲ್ಲ. ಅವರು ಒತ್ತಡಕ್ಕೊಳಗಾಗಿ ಕೆಲಸ ಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆ ವಿಷಯದಲ್ಲಿ ಮುಖ್ಯಮಂತ್ರಿಗಳು ಎಚ್ಚರಿಕೆಯಿಂದ ಮಾತನಾಡಬೇಕು.
ನಾಗಮಂಗಲ ಗಲಾಟೆಯಲ್ಲಿ ಪಿಎಫ್‌ಐ ಸಂಘಟನೆಗಳು ಪೂರ್ವ ತಯಾರಿ ಮಾಡಿಕೊಂಡಿರುವುದು ಈಗ ಬೆಳಕಿಗೆ ಬಂದಿದೆ. ಹಿಂದೂಗಳ ಅಂಗಡಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಒಂದೇ ದಿನಕ್ಕೆ ಈ ರೀತಿ ದಾಳಿ ಮಾಡಲು ಆಗುತ್ತದೆಯೇ ಎಂದರು.
ಲೋಕಾಯುಕ್ತ ಸಮನ್ಸ್ ಹಿಂದೆ ರಾಜಕೀಯ ಷಡ್ಯಂತ್ರ: ಜೋಶಿ
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ರಾಜಕೀಯ ದ್ವೇಷದಿಂದ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಸಮನ್ಸ್ ಕೊಡುವಂತಹ ಕ್ರಮಕ್ಕೆ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಯಾವಾಗ ಬೇಕಾದರೂ ಪತನವಾಗುವ ಆತಂಕ ಎದುರಾಗಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತದೆಂಬ ಭಯದಿಂದಾಗಿ ಯಡಿಯೂರಪ್ಪ ಅವರಂತಹ ಹಿರಿಯರಿಗೆ ಸಮನ್ಸ್ ಜಾರಿ ಮಾಡುವುದು ಲೋಕಾಯುಕ್ತಕ್ಕೆ ತರವಲ್ಲ. ಈ ಸಮನ್ಸ್ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದರು.
ರಾಜ್ಯಪಾಲರ ಪತ್ರ ಸಮರ ವಿಚಾರವಾಗಿ ಪ್ರತಿಕ್ರಿಯಿಸಿ, ಲೋಕಾಯುಕ್ತ ಕೊಟ್ಟ ದೂರುಗಳ ಬಗ್ಗೆ ಲೀಕ್ ಮಾಡುವ ಕೆಲಸ ನಡೆದಿದೆ. ಪೊಲೀಸ್ ಅಧಿಕಾರಿಗಳ ದುರ್ಬಳಕೆ ನಡೆದಿದೆ ಎಂದರು.
ಬೆಂಗಳೂರು ಮಾತ್ರವಲ್ಲ ದೇಶಾದ್ಯಂತ ಕಡಿಮೆ ಬೆಲೆಗೆ ಈರುಳ್ಳಿ ಕೈಗೆಟುಕುವಂತೆ ಕೇಂದ್ರವು ಕ್ರಮ ಕೈಗೊಂಡಿದೆ. ದೇಶಾದ್ಯಂತ 570 ಕಡೆ ಬೆಲೆ ಮಾನಿಟರಿಂಗ್ ಕೇಂದ್ರಗಳಿವೆ. ಎಲ್ಲ ಕಡೆಯೂ ಬೆಲೆ ನಿಯಂತ್ರಿಸಿ ಕಡಿಮೆ ಬೆಲೆಗೆ ಕೇಂದ್ರವೇ ಪೂರೈಸುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.