ಗಾಂಧಾರಿ ಸ್ವಗತ ಕೃತಿಗೆ ಡಾ| ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ
Team Udayavani, Nov 10, 2017, 12:07 PM IST
ಹುಬ್ಬಳ್ಳಿ: ಕಾಗವಾಡದ ಡಾ| ಎಂ.ಬಿ. ಹೂಗಾರ ಅವರ ಗಾಂಧಾರಿ ಸ್ವಗತ ಕೃತಿಗೆ 2017ನೇ ಸಾಲಿನ ಡಾ| ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ ಲಭಿಸಿದೆ. ಸ್ಥಳೀಯ ಡಾ| ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆಯ ವತಿಯಿಂದ ಪ್ರತಿವರ್ಷ ಕೊಡಮಾಡುವ ಪ್ರಶಸ್ತಿಯು 10 ಸಾವಿರ ರೂ. ನಗದು, ಸ್ಮರಣಿಕೆ, ಗೌರವಾರ್ಪಣೆ ಒಳಗೊಂಡಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ನಗರದಲ್ಲಿ ನವೆಂಬರ್ ತಿಂಗಳಲ್ಲಿ ನಡೆಯಲಿದೆ. ಪ್ರಶಸ್ತಿ ಆಯ್ಕೆಗಾಗಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಅಂದಾಜು 120 ಕವನ ಸಂಕಲನಗಳಲ್ಲಿ ಹೂಗಾರ ಅವರ ಗಾಂಧಾರಿ ಸ್ವಗತ ಕೃತಿ ಆಯ್ಕೆಯಾಗಿದೆ ಎಂದು ವೇದಿಕೆಯ ಕಾರ್ಯದರ್ಶಿ ಎಂ.ಎ. ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಿರುಪರಿಚಯ: ಮೂಲತಃ ಜಮಖಂಡಿ ತಾಲೂಕು ಹುನ್ನೂರ ಗ್ರಾಮದವರಾದ ಡಾ| ಎಂ.ಬಿ. ಹೂಗಾರ ಅವರು ಬೆಳಗಾವಿ ಜಿಲ್ಲೆ ಕಾಗವಾಡ ಗ್ರಾಮದ ಶಿವಾನಂದ ಕಾಲೇಜಿನ ವಿಶ್ರಾಂತ ಕನ್ನಡ ಅಧ್ಯಾಪಕರಾಗಿದ್ದಾರೆ. 1975ರಲ್ಲಿ ಶರಣರ ಆಂದೋಲನ ಹಾಗೂ ಹೊಸ ಸಮಾಜದ ಪರಿಕಲ್ಪನೆ ವಿಷಯದಲ್ಲಿ ಪಿಎಚ್‌ಡಿ ಪಡೆದರು.
ಧಾರವಾಡದ ಕರ್ನಾಟಕ ವಿವಿ ಹಾಗೂ ಕೊಲ್ಲಾಪುರದ ಶಿವಾಜಿ ವಿವಿಯಲ್ಲಿ ಸಂಶೋಧನಾ ಮಾರ್ಗದರ್ಶಕರಾಗಿ ಅನುಭವ ಹೊಂದಿದ್ದಾರೆ. ವ್ಯಾಕರಣ, ಶರಣ ಸಾಹಿತ್ಯ, ಸಂಶೋಧನೆ, ಕಾವ್ಯಮೀಮಾಂಸೆ, ಕಾವ್ಯ, ಅನುವಾದ ಮುಂತಾದ ವಿಷಯಗಳ 21 ಕೃತಿಗಳನ್ನು ರಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Mangaluru: ಎಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.