7ನೇ ದಿನ ಗಣೇಶನಿಗೆ ಅದ್ಧೂರಿ ವಿದಾಯ..
Team Udayavani, Sep 1, 2017, 12:36 PM IST
ಧಾರವಾಡ: ಪಟಾಕಿ ಅಬ್ಬರ, ಡಿಜೆ ಸಂಗೀತ, ಯುವಕರ ನೃತ್ಯದ ಸಂಭ್ರಮದಲ್ಲಿ ನೂರಕ್ಕೂ ಹೆಚ್ಚು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನಿಗೆ 7ನೇ ದಿನವಾದ ಗುರುವಾರ ಸಂಭ್ರಮದಿಂದ ವಿದಾಯ ಹೇಳಲಾಯಿತು. ಉಪನಗರ ಪೊಲೀಸ್ ಠಾಣೆ, ವಿದ್ಯಾಗಿರಿ ಪೊಲೀಸ್ ಠಾಣೆ ಹಾಗೂ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ 125 ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಅದ್ಧೂರಿಯಾಗಿ ನೆರವೇರಿಸಲಾಯಿತು.
ಆ ಪೈಕಿ ಮದಾರಮಡ್ಡಿ, ಮಾಳಮಡ್ಡಿ, ಎಮ್ಮಿಕೇರಿ, ನೆಹರು ನಗರ, ಸುಭಾಷ ರಸ್ತೆ, ದುರ್ಗಾದೇವಿ ಗುಡಿ, ಜೋಶಿ ಗಲ್ಲಿ, ಹಾವೇರಿಪೇಟ ಸೇರಿದಂತೆ ಅನೇಕ ಕಡೆಗಳಲ್ಲಿ ಗಜಾನನ ಮಂಡಳಿಗಳು ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿಗಳನ್ನು ಯುವಕರು ಡಿಜೆ ಸಂಗೀತದೊಂದಿಗೆ ಕುಣಿಯುತ್ತ ನಗರದ ಪ್ರಮುಖ ರಸ್ತೆ ಮತ್ತು ಬೀದಿಗಳಲ್ಲಿ ಮೆರವಣಿಗೆ ಮಾಡಿ, ಹೊಸಯಲ್ಲಾಪುರದ ನುಚ್ಚಂಬಲಿ ಬಾವಿಯಲ್ಲಿ ವಿಸರ್ಜಿಸಿದರು.
ಇದಲ್ಲದೇ ಕೆಲ ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನನ್ನೂ 7 ದಿನದಂದು ವಿಸರ್ಜನೆ ಮಾಡಲಾಯಿತು. ಉಳಿದಂತೆ ಹು-ಧಾ ಹೊರತು ಪಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯಾಲಯ ವ್ಯಾಪ್ತಿಯ ಧಾರವಾಡ ಗ್ರಾಮೀಣ ಪ್ರದೇಶದಲ್ಲಿ ಒಟ್ಟು 215 ಸಾರ್ವಜನಿಕ ಗಣಪತಿ ವಿಸರ್ಜನೆ ಕಾರ್ಯ ತಡರಾತ್ರಿವರೆಗೂ ಜರುಗಿತು.
ಕರಗಿದ ಮಣ್ಣಿನ ಗಣಪ: ಧಾರವಾಡ ನಗರದ ಸುಭಾಷ ರೋಡ್‌ನಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಸುಭಾಷ ರೋಡ್ ಕಾ ರಾಜಾ ಗಣಪತಿಯ ವಿಸರ್ಜನೆ ಪರಿಸರ ಸ್ನೇಹಿಯಾಗಿ ಮಾಡಲಾಯಿತು. ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನೇ ಪ್ರತಿಷ್ಠಾಪಿಸಿದ್ದ ವಿನಾಯಕ ಉತ್ಸವ ಸಮಿತಿಯು, ಈ ಸಲವೂ ಪೆಂಡಾಲ್ ಎದುರಿನಲ್ಲಿಯೇ ಕೃತಕ ಹೊಂಡ ನಿರ್ಮಿಸಿ ಪರಿಸರ ಸ್ನೇಹಿ ಗಣೇಶನಿಗೆ ಪರಿಸರ ಸ್ನೇಹಿ ವಿಸರ್ಜನೆ ಮಾಡುವ ಮೂಲಕ ವಿದಾಯ ಹೇಳಿ ಗಮನ ಸೆಳೆಯಿತು.
ಕೃತಕ ಹೊಂಡದಲ್ಲಿ ಕುಳಿತ ಗಣಪನಿಗೆ ನೀರಿನಿಂದ ಅಭಿಷೇಕ ಮಾಡಲಾಯಿತು. ಬರೋಬ್ಬರಿ 17 ನಿಮಿಷದಲ್ಲಿ ನೀರಿನ ಅಭಿಷೇಕದಲ್ಲಿ ಮಣ್ಣಿನ ಗಣಪ ಕರಗಿದ್ದು ವಿಶೇಷವಾಗಿತ್ತು. ಇದಕ್ಕೂ ಮುನ್ನ ಗಣೇಶ ಮೂರ್ತಿ ಮೆರವಣಿಗೆ ದೇಸಿ ಶೈಲಿಯಲ್ಲಿ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.