ಧಾರಾನಗರಿಯಲ್ಲಿ ಗಣೇಶನ ಅನೇಕಾವತಾರ

Team Udayavani, Sep 4, 2019, 9:10 AM IST

huballi-tdy-1

ಧಾರವಾಡ: ಭಾದ್ರಪದ ಶುಕ್ಲ ಚೌತಿಯಾದ ಸೋಮವಾರ ಸಾಂಸ್ಕೃತಿಕ ನಗರಿಯ ಎಲ್ಲರ ಮನೆ-ಮನೆಗಳಲ್ಲಿ ಗಜವದನ ಪ್ರತಿಷ್ಠಾಪನೆಗೊಂಡಿದ್ದಾನೆ.

ನಗರದಲ್ಲಿ 287ಕ್ಕೂ ಹೆಚ್ಚು ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆಗೊಂಡಿದ್ದು, ಡಿಜೆ ಸಂಗೀತ, ಮೆರವಣಿಗೆ ಮೂಲಕ ಗಣೇಶನನ್ನು ಬರಮಾಡಿಕೊಳ್ಳಲಾಗಿದೆ. ಅದರಲ್ಲೂ ಈ ಸಲ ಬಹುತೇಕ ವನಸ್ಪತಿ, ಚೂರ್ಣಗಳಿಂದ ತಯಾರಿಸಲ್ಪಟ್ಟ ಬಣ್ಣ ಲೇಪಿತ ನೈಸರ್ಗಿಕ ಪರಿಸರ ಸ್ನೇಹಿ ಗಣೇಶ ವಿಗ್ರಹಗಳು ಸಾರ್ವಜನಿಕ ಸ್ಥಳ ಹಾಗೂ ಮನೆಗಳಲ್ಲೂ ಪ್ರತಿಷ್ಠಾಪನೆಗೊಂಡಿವೆ. ಈ ಸಲ ಕಟ್ಟುನಿಟ್ಟಾಗಿ ಜಿಲ್ಲಾಡಳಿತ ಪಿಒಪಿ ಗಣಪ ಪ್ರತಿಷ್ಠಾಪನೆ ನಿಷೇಧ ಮಾಡಿದ ಪರಿಣಾಮ ಬಹುತೇಕ ಕಡೆ ಪರಿಸರ ಸ್ನೇಹಿ ಮಣ್ಣಿನ ಗಣಪನೇ ಪ್ರತಿಷ್ಠಾಪನೆ ಆಗಿದ್ದಾನೆ.

ನಾನಾರೂಪ ಗಣಪ: ಪ್ರತಿ ಸಲದಂತೆ ಸುಭಾಷ ರೋಡ್‌, ಹೆಬ್ಬಳ್ಳಿ ಅಗಸಿ, ಸಂಗಮ ಸರ್ಕಲ್ ವೃತ್ತದ ಸಾರ್ವಜನಿಕ ಗಣಪ ಗಮನ ಸೆಳೆದಿದ್ದು, ರಾಘವೇಂದ್ರ ಸ್ವಾಮೀಜಿ, ಶಿವಾಜಿ, ಹನುಮ, ಕೃಷ್ಣ, ಬಾಲ ಗಣಪ ಸೇರಿದಂತೆ ವಿವಿಧ ರೂಪ ಆಕಾರಗಳಲ್ಲಿ ಗಣಪ ಅನಾವರಣಗೊಂಡಿದ್ದಾನೆ. ಗುಲಗಂಜಿಕೊಪ್ಪದಲ್ಲಿ ಸೈಕಲ್ ಮೇಲೆ ಕನ್ನಡ ಶಾಲೆಗೆ ಹೊರಟಿರುವ ಗಣಪ ಗಮನ ಸೆಳೆಯುತ್ತಿದ್ದಾನೆ. ನಗರದ ಬೂಸಪ್ಪ ಚೌಕ, ಹೊಸಯಲ್ಲಾಪುರ, ಮದಿಹಾಳ, ಗಾಂಧಿಚೌಕ, ಲೈನ್‌ ಬಜಾರ್‌, ಟಿಕಾರೆ ರಸ್ತೆ ಈ ಎಲ್ಲಾ ಭಾಗಗಳಲ್ಲಿ ನಾನಾ ರೀತಿಯ ಗಣೇಶ ಮೂರ್ತಿಗಳು ಸ್ಥಾಪಿಸಲಾಗಿದ್ದು, ಸಾರ್ವಜನಿಕರ ಆಕರ್ಷಣೆಯ ಕೇಂದ್ರಗಳಾಗಿ ಮಾರ್ಪಟ್ಟಿವೆ.

ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ತಯಾರಿಸಿದ 100 ಸಾರ್ವಜನಿಕ ಗಣಪತಿಗಳ ಪೈಕಿ 65 ಗಣಪ ಧಾರವಾಡ ನಗರದಲ್ಲೇ ಪ್ರತಿಷ್ಠಾಪಿಸಲಾಗಿದೆ. ಈ ಪೈಕಿ ಸುಭಾಸ ರೋಡಕಾ ರಾಜಾ ಗಣಪತಿ 10 ಪೂಟ್ ಇದ್ದು, ವಿಶೇಷವಾಗಿದೆ. ಇನ್ನು ಕೆಸಿಡಿ ಸರ್ಕಲ್ನಲ್ಲಿ ಸಂಪೂರ್ಣ ಅಷ್ಟಗಂಧ ಗಣಪ, ಗರಗದಲ್ಲಿ ಸಿದ್ಧಗಂಗಾ ಶ್ರೀಗಳ ರೂಪಿ ಗಣಪ, ಅಮ್ಮಿನಬಾವಿಯಲ್ಲಿ ಬಸವಣ್ಣ ರೂಪಿಯ 5 ರಿಂದ 6 ಪೂಟ್ ಎತ್ತರದ ಗಣಪ ಪ್ರತಿಷ್ಠಾಪನೆಗೊಂಡಿದ್ದಾನೆ.

ಡಿಜೆ, ಅಲಂಕಾರ ಅಬ್ಬರ ಕಡಿಮೆ: ಕಳೆದ ಬಾರಿ ಹೋಲಿಸಿದರೆ ಈ ಸಲ ಗಣೇಶನ ಸ್ವಾಗತ ಮೆರವಣಿಗೆಯಲ್ಲಿ ಡಿಜೆ ಅಬ್ಬರ ಕಡಿಮೆ ಆಗಿತ್ತು. ಕೆಲವೊಂದಿಷ್ಟು ಕಡೆ ಡಿಜೆ ಅಬ್ಬರದಲ್ಲಿಯೇ ಗಣೇಶನ್ನು ಕರೆ ತಂದರೂ ಯುವಕರ ಪಡೆಯಲ್ಲಿ ಜೋಶ್‌ನ ಕಳೆ ಕಡಿಮೆ ಇತ್ತು. ಇದಲ್ಲದೇ ನೆರೆ ಪ್ರವಾಹ ಹಿನ್ನೆಲೆಯಲ್ಲಿ ನಗರದ ಬಹುತೇಕ ಕಡೆ ಅಲಂಕಾರಕ್ಕೆ ಆದ್ಯತೆ ಕಡಿಮೆ ನೀಡಲಾಗಿದ್ದು, ಕೆಲವೊಂದಿಷ್ಟು ಗಜಾನನ ಯುವಕ ಮಂಡಳಗಳು ಚಂದಾ ವಸೂಲಿ ಮಾಡದೇ ತಾವೇ ಹಣ ಹಾಕಿ ಗಣೇಶನ ಪ್ರತಿಷ್ಠಾಪನೆ ಮಾಡಿವೆ. ಇನ್ನು ಸೋಮವಾರ ಸಂಜೆ ವೇಳೆ ಶುರುವಾದ ಜಿಟಿ ಜಿಟಿ ಮಳೆ ಗಣೇಶನ ಸಂಭ್ರಮಕ್ಕೆ ಸ್ವಲ್ಪ ಅಡಚಣೆ ಮಾಡಿತ್ತು. ಗ್ರಾಮೀಣ ಭಾಗದಲ್ಲಿ ಸಡಗರದಿಂದ ಗಣೇಶನ ಮೂರ್ತಿ ಅಭೂತ ಮೆರವಣಿಗೆ ಮೂಲಕ ತಂದು ಪ್ರತಿಷ್ಠಾಪನೆ ಮಾಡಲಾಗಿದೆ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.