ಗೀತೋಪದೇಶ ಸಾರ್ವತ್ರಿಕ ಸತ್ಯ: ಮೈಗೂರ


Team Udayavani, Aug 15, 2017, 11:57 AM IST

hub1.jpg

ಧಾರವಾಡ: ಶ್ರೀಕೃಷ್ಣನ ಸಂದೇಶಗಳು ಜೀವನ ಸುಧಾರಣೆಯ ಉಪದೇಶಗಳಾಗಿದ್ದು, ಸಾರ್ವತ್ರಿಕ ಸತ್ಯವಾದ ಗೀತೋಪದೇಶಗಳು ವಿಶ್ವದಲ್ಲಿಯೇ ತತ್ವಜ್ಞಾನ ಭರಿತವಾಗಿವೆ ಎಂದು ಅಪರ ಜಿಲ್ಲಾ ಧಿಕಾರಿ ಇಬ್ರಾಹಿಂ ಮೈಗೂರ ಹೇಳಿದರು. ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಲೂರ ವೆಂಕಟರಾವ್‌ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಇರುವ ಸಮಸ್ಯೆಗಳನ್ನು ನಿವಾರಿಸಲು ಇದರಲ್ಲಿ ಮಾರ್ಗದರ್ಶನಗಳಿವೆ. ಅಂತಹ ಭಗವದ್ಗೀತೆ ಗ್ರಂಥ ಸಾರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಡಾ| ಭೀಮಸೇನಾವಾಚಾರ್ಯ ಮಳಗಿ ಉಪನ್ಯಾಸ ನೀಡಿ, ಕೃಷ್ಣ ಪರಮಾತ್ಮನಾಗಿದ್ದಾನೆ. ಶ್ರೀಕೃಷ್ಣ ಸಾûಾತ್‌ ಭಗವಂತ.

ಅವನು ಎಷ್ಟೇ ದೊಡ್ಡವನಾಗಿದ್ದರೂ ಎಲ್ಲರನ್ನೂ ಸಮಾನವಾಗಿ ಕಂಡನು. ಸಮಾಜದಲ್ಲಿನ ತಳ ವರ್ಗದವರೊಂದಿಗೆ ಒಡನಾಟ ಹೊಂದಿದ್ದ ಶ್ರೀಕೃಷ್ಣನು ಗೋಪಾಲ, ಗೋಪಿಕೆಯರನ್ನು ಬಿಟ್ಟು ಇರುತ್ತಿರಲಿಲ್ಲ. ಮಾನವೀಯ ಮೌಲ್ಯಗಳನ್ನು ಒಳಗೊಂಡ ಶ್ರೀಕೃಷ್ಣ, ದ್ವಾಪರಯುಗದಲ್ಲಿಯೂ ಮಹಿಳೆಯರಿಗೆ ಗೌರಯುತ ಸ್ಥಾನ ಮಾನ ಕಲ್ಪಿಸಿದ್ದನು.

ಅಂತಹ ಶ್ರೇಷ್ಠ ಸಂಸ್ಕೃತಿ ನಮ್ಮ ದೇಶದ್ದಾಗಿದೆ. ಮಾನವೀಯ ಮೌಲ್ಯಗಳನ್ನೊಳಗೊಂಡ ಶ್ರೀಭಗವದ್ಗೀತೆ ಗ್ರಂಥದ ತತ್ವಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಧಾರವಾಡ ಇಸ್ಕಾನ್‌ ಸಂಸ್ಥೆ ಉಪಾಧ್ಯಕ್ಷ ರಘು ಸ್ವಾಮಿ ಪ್ರಭು ಮಾತನಾಡಿ, ಕಲಿಯುಗದಲ್ಲಿ ಕಲಿಯುವುದು ಬಹಳ ಇದೆ.

ಕಲಿಯುವುದು ಕಷ್ಟದ ಕೆಲಸವಾಗಿದ್ದು, ಭಗವದ್ಗೀತೆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಪಂ| ಸೋಮಶೇಖರ ಮರಡಿಮಠ ಹಾಗೂ ಭಾರ್ಗವಿ ವೆಂಕಟೇಶ ಕುಲಕರ್ಣಿ ಅವರಿಂದ ಗಾಯನ ಜರುಗಿತು. ಕೋಟೂರ ಕ್ಷೇತ್ರ ತಾಪಂ ಸದಸ್ಯ ಮಹದೇವ ಪಂಡಿತ ಅಧ್ಯಕ್ಷತೆ ವಹಿಸಿದ್ದರು.

ಉಪವಿಭಾಗಾ ಧಿಕಾರಿ ಮಹೇಶ ಕರ್ಜಗಿ ಸ್ವಾಗತಿಸಿದರು. ಸಮಾಜದ ಮುಖಂಡ ರಂಗಸ್ವಾಮಿ ಪ್ರಭು, ಎಪಿಎಂಸಿ ಸದಸ್ಯರಾದ ಪಾರ್ವತಿ ಪಂಡಿತ ಇದ್ದರು. ತಹಶೀಲ್ದಾರ ಪ್ರಕಾಶ ಕುದರಿ ವಂದಿಸಿದರು. ಇದಕ್ಕೂ  ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ವಿವಿಧ ಜನಪದ ಕಲಾತಂಡಗಳೊಂದಿಗೆ ಶ್ರೀಕೃಷ್ಣ ಭಾವಚಿತ್ರದ ಮೆರವಣಿಗೆ ನಡೆಯಿತು.  

ಟಾಪ್ ನ್ಯೂಸ್

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.