ಹುಬ್ಬಳ್ಳಿ-ಬೆಂಗಳೂರಲ್ಲಿ ಜಿಯೋ ಕೌಶಲ ಕೇಂದ್ರ
Team Udayavani, Mar 7, 2017, 1:09 PM IST
ಹುಬ್ಬಳ್ಳಿ: ಮೊಬೈಲ್ ಹಾಗೂ ಅಂತರ್ಜಾಲ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಮುಂದಾಗಿರುವ ರಿಲಾಯನ್ಸ್ ಜಿಯೋ ಇದೀಗ ದೇಶಾದ್ಯಂತ ಕೌಶಲ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆಗೆ ಮುಂದಾಗಿದೆ. ಇದರ ಭಾಗವಾಗಿ ರಾಜ್ಯದ ಬೆಂಗಳೂರು ಹಾಗೂಹುಬ್ಬಳ್ಳಿಯಲ್ಲಿ ಎರಡು ಕೌಶಲ ಅಭಿವೃದ್ಧಿ ಕೇಂದ್ರಗಳು ಶೀಘ್ರದಲ್ಲೇ ಆರಂಭಗೊಳ್ಳಲಿವೆ.
ಕೇಂದ್ರ ಸರಕಾರದ ಡಿಜಿಟಲ್ ಇಂಡಿಯಾಕ್ಕೆ ಪೂರಕವಾಗಿ ದೇಶಾದ್ಯಂತ ಎಲ್ಲ ಕಾಲೇಜುಗಳನ್ನು ಬಹುತೇಕ ಡಿಜಿಟಲ್ ವ್ಯವಸ್ಥೆಗೆ ತರುವ ಮಹತ್ವದ ಕಾರ್ಯಕ್ಕೆ ಹೆಜ್ಜೆ ಇರಿಸಿರುವ ರಿಲಾಯನ್ಸ್ ಜಿಯೋ,ಕೌಶಲಯುತ ಮಾನವ ಸಂಪನ್ಮೂಲ ಸೃಷ್ಟಿಗೆ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಕೌಶಲ ಅಭಿವೃದ್ದಿ ಕೇಂದ್ರ ಪ್ರಾರಂಭಿಸಲು ಮುಂದಾಗಿದೆ.
ಕೌಶಲ ಅಭಿವೃದ್ಧಿ ಕೇಂದ್ರಗಳಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳನ್ನು ದೇಶಾದ್ಯಂತ ಆರಂಭಿಸಲಿರುವ 1071 ಜಿಯೋ ಕಚೇರಿಗಳಲ್ಲಿ ಸಿಬ್ಬಂದಿಯಾಗಿಸುವ ಚಿಂತನೆ ಹೊಂದಿದೆ. ಕೌಶಲ ಕೇಂದ್ರಗಳಲ್ಲಿ ತಾಂತ್ರಿಕ ಹಾಗೂ ತಾಂತ್ರಿಕೇತರ ಹೀಗೆಎರಡು ರೀತಿಯಲ್ಲಿ ತರಬೇತಿಗೆ ಯೋಜಿಸಲಾಗಿದೆ.
ರಿಲಾಯನ್ಸ್ ಜಿಯೋ ಯೋಜನೆಗಳ ಅಳವಡಿಕೆ, ಕಾರ್ಯಾಚರಣೆ ಹಾಗೂ ನಿರ್ವಹಣೆಗೆ ಕೌಶಲಯುತ ಮಾನವ ಸಂಪನ್ಮೂಲದ ಅವಶ್ಯಕತೆ ಇದೆ. ಎಲೆಕ್ಟ್ರಿಶನ್, ಟೆಕ್ನಿಶನ್, ಟೆಲಿ ಕಮ್ಯುನಿಕೇಶನ್, ಕಂಪ್ಯೂಟರ್, ಮಾರುಕಟ್ಟೆ, ಮಾನವ ಸಂಪನ್ಮೂಲ ವಿಭಾಗಗಳಿಗೆ ಪೂರಕವಾಗಿ ತರಬೇತಿ ನೀಡಲಾಗುತ್ತದೆ.
ಎರಡು ಕೇಂದ್ರ: ದೇಶದ ಎಲ್ಲ ಕಡೆಗೂ ಕೌಶಲ ಅಭಿವೃದ್ಧಿ ಕೇಂದ್ರಗಳ ಆರಂಭಕ್ಕೆ ರಿಲಾಯನ್ಸ್‌ಜಿಯೋ ಮುಂದಾಗಿದ್ದು, ಸದ್ಯಕ್ಕೆ ರಾಜ್ಯದಲ್ಲಿ 2-3 ಕೇಂದ್ರಗಳನ್ನು ಆರಂಭಿಸಲು, ಮಂದೆ ಇದನ್ನು ವಿಸ್ತರಿಸಲು ನಿರ್ಧರಿಸಿದೆ. ಪ್ರಸ್ತುತ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಕೇಂದ್ರ ಆರಂಭಿಸಲಾಗುತ್ತಿದೆ.
ಬೆಂಗಳೂರಿನ ಎಂ.ಎಸ್. ರಾಮಯ್ಯ ಕಾಲೇಜಿನಲ್ಲಿ ಹಾಗೂ ಹುಬ್ಬಳ್ಳಿಯಲ್ಲಿ ಕೆಎಲ್‌ಇ ಸಂಸ್ಥೆಯ ಸಿ.ಎಸ್. ಮುನವಳ್ಳಿ ಪಾಲಿಟೆಕ್ನಿಕ್‌ನಲ್ಲಿ ಕೇಂದ್ರಗಳು ಆರಂಭಗೊಳ್ಳಲಿವೆ. ಎಂ.ಎಸ್. ರಾಮಯ್ಯ ಕಾಲೇಜಿನಲ್ಲಿ ಕೇಂದ್ರ ಆರಂಭಕ್ಕೆ ಬೇಕಾದ ಸೌಲಭ್ಯಗಳ ಸೃಷ್ಟಿಯ ಕೆಲಸ ಆರಂಭವಾಗಿದೆ. ಹುಬ್ಬಳ್ಳಿಯಲ್ಲಿ ಕೇಂದ್ರ ಆರಂಭ ನಿಟ್ಟಿನಲ್ಲಿ ಕೆಎಲ್‌ಇ ಸಂಸ್ಥೆ ಹಾಗೂ ರಿಲಾಯನ್ಸ್ ಜಿಯೋ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿವೆ.
ಸರ್ಟಿಫಿಕೇಟ್ ಕೋರ್ಸ್: ಕೌಶಲ ಅಭಿವೃದ್ಧಿ ತರಬೇತಿ ಅಲ್ಪಾವಧಿಯ ಸರ್ಟಿಫಿಕೇಟ್ ಕೋರ್ಸ್ ಆಗಿದೆ. ಕೌಶಲ ಅಭಿವೃದ್ಧಿ ಕೇಂದ್ರಕ್ಕಾಗಿ ರಿಲಾಯನ್ಸ್ ಜಿಯೋದೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಶಿಕ್ಷಣ ಸಂಸ್ಥೆ ಪ್ರಯೋಗಾಲಯ ಹಾಗೂ ಬೋಧನಾ ಕೋಣೆ, ವಿದ್ಯುತ್ ಸೇರಿದಂತೆ ಕೆಲ ಮೂಲಭೂತ ಸೌಕರ್ಯಗಳನ್ನು ಒದಗಿಸಲಿದೆ.
ರಿಲಾಯನ್ಸ್ ಜಿಯೋದಿಂದ ಪ್ರಯೋಗಾಲಯ ಸ್ಥಾಪಿಸಲಾಗುತ್ತದೆ. ಕೌಶಲಅಭಿವೃದ್ಧಿ ತರಬೇತಿ ಬೋಧಕರಿಗೆ ತರಬೇತಿ ನೀಡಲಾಗುತ್ತದೆ. ಕೋರ್ಸ್ 2ರಿಂದ 3 ತಿಂಗಳ ಅವಧಿಯದ್ದಾಗಿದೆ. ಕೌಶಲ ಅಭಿವೃದ್ಧಿ ಕೇಂದ್ರ ಆರಂಭಕ್ಕೆ ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯಸಿ.ಐ.ಮುನವಳ್ಳಿ ಪಾಲಿಟೆಕ್ನಿಕ್ ಸಜ್ಜಾಗುತ್ತಿದೆ.
ಸಿ.ಐ.ಮುನವಳ್ಳಿ ಪಾಲಿಟೆಕ್ನಿಕ್‌ನಲ್ಲಿ ಈಗಾಗಲೇ ಪ್ರಯೋಗಾಲಯ ಹಾಗೂ ಬೋಧನಕ್ಕಾಗಿ ಎರಡುಕೋಣೆಗಳನ್ನು ಗುರುತಿಸಲಾಗಿದೆ. ಆರಂಭದಲ್ಲಿ ತಾಂತ್ರಿಕ ಕೋರ್ಸ್‌ಗೆ 30 ಹಾಗೂ ತಾಂತ್ರಿಕೇತರ ಕೋರ್ಸ್‌ಗೆ 30 ವಿದ್ಯಾರ್ಥಿಗಳನ್ನು ತೆಗೆದುಕೊಳ್ಳಲು ಯೋಜಿಸಲಾಗಿದ್ದು, ಅಗತ್ಯ ಸಿದ್ಧತೆ ನಡೆಯುತ್ತಿದೆ.
* ಅಮರೇಗೌಡ ಗೋನವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.