ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಮುಂದಾಗಿ
Team Udayavani, Nov 8, 2019, 11:19 AM IST
ಹುಬ್ಬಳ್ಳಿ: ಭಾರತೀಯ ಕಿಸಾನ್ ಸಂಘದ ಕಟ್ಟಡ ನಿರ್ಮಾಣದ ಭೂಮಿಪೂಜೆ ಇಲ್ಲಿನ ಕುಮಾರವ್ಯಾಸ ನಗರದಲ್ಲಿ ನಡೆಯಿತು.
ಶಂಕುಸ್ಥಾಪನೆ ನೆರವೇರಿಸಿದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ಲಾಸ್ಟಿಕ್ ಬಳಕೆ ದೇಶಕ್ಕೆ ಮಾರಿಯಾಗಿದೆ. ಇದರಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಜೀವ ಸಂಕುಲದ ಮೇಲೆ ಪರಿಣಾಮ ಬೀರುತ್ತಿದೆ. ಇಂದಿನಿಂದಲೇ ಪ್ರತಿಯೊಬ್ಬರು ಪ್ಲಾಸ್ಟಿಕ್ ಬಳಕೆ ವಿರುದ್ಧ ಪಣ ತೊಡಬೇಕು ಎಂದರು. ನರಗುಂದ ಸಿದ್ಧೇಶ್ವರ ಪಂಚಗೃಹ ಗುಡ್ಡದ ಹಿರೇಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರೈತರು ಆರ್ಥಿಕ ನಷ್ಟದಿಂದ ಹೊರಬರಲು ಹೊಸ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಶೇ.33 ತೋಟಗಾರಿಕೆ, ಶೇ. 33 ಅರಣ್ಯ, ಶೇ.33 ಧವಸ-ಧಾನ್ಯಗಳನ್ನು ಬೆಳೆಯಬೇಕು. ಉಳಿದ ಶೇ.1ರಲ್ಲಿ ದೇಶಿ ಗೋವುಗಳನ್ನು ಸಾಕಬೇಕು ಎಂದು ಹೇಳಿದರು. ಕಿಸಾನ್ ಸಂಘದ ವಿಜಯಪುರ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಬಿ.ಎಂ. ಕೋಕರೆ ಅಧ್ಯಕ್ಷತೆ ವಹಿಸಿದ್ದರು.
ಸಂಘದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿಗೌಡ, ಗುರುನಾಥ ಎಸ್. ಬಗಲಿ, ಐ.ಎನ್. ಬಸವೇಗೌಡರು, ದಿನೇಶ ಕುಲಕರ್ಣಿ, ಅರವಿಂದರಾವ್ ದೇಶಪಾಂಡೆ, ಯಳಂದೂರ ರಂಗನಾಥ, ಡಾ| ವಿ.ಎಸ್.ವಿ. ಪ್ರಸಾದ, ವೆಂಕಟರಮಣ ಚಿಟ್ಟಾ, ರಮೇಶ ಕೊರವಿ, ಡಿ.ಸಿ. ರಂಗರಡ್ಡಿ, ವಿವೇಕ ಮೋರೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.