ಪ್ರಶ್ನೆಗೆ ನಿಖರ ಉತ್ತರ ಪಡೆಯುವುದೇ ವಿಜ್ಞಾನ


Team Udayavani, Jan 9, 2017, 12:40 PM IST

hub1.jpg

ಧಾರವಾಡ: ವಿಜ್ಞಾನವೆಂದರೆ ಕೇವಲ ಮಾಹಿತಿ ಮತ್ತು ವಿಷಯಗಳನ್ನು ತಲೆಗೆ ತುಂಬುವುದಲ್ಲ. ಆತ್ಮದಲ್ಲಿ ಕುತೂಹಲವನ್ನು ಜಾಗೃತಗೊಳಿಸಿ ಪ್ರತಿಯೊಂದನ್ನು ಏನು? ಏಕೆ? ಹೇಗೆ? ಎಂಬ ವಿಶ್ಲೇಷಣೆಯೊಂದಿಗೆ ಎಲ್ಲ ಪ್ರಶ್ನೆ-ಪ್ರಮೇಯಗಳಿಗೆ ನಿಖರ ಉತ್ತರ ಪಡೆಯುವುದೇ ವಿಜ್ಞಾನವಾಗಿದೆ ಎಂದು ಬೆಂಗಳೂರಿನ ಡ್ರೀಮ್ಸ್‌ ಅಲೈವ್‌ ಫೌಂಡೇಶನ್‌ ನ ಸ್ಥಾಪಕ ಸಂಜಯ್‌ ಬನ್ಸಲ್‌ ಹೇಳಿದರು. 

ಇಲ್ಲಿಯ ಲೀಲಾವತಿ ಆರ್‌. ಚರಂತಿಮಠ ಪಬ್ಲಿಕ್‌ ಶಾಲೆಯಲ್ಲಿ ಹು-ಧಾ ಮಹಾನಗರಗಳ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಸಂಘಟಿಸಿದ್ದ “ಸಾಯಿನ್ಸ್‌ ಕಾರ್ನಿವಲ್‌’ನ ಅಂಗವಾಗಿ ರವಿವಾರ ಹಮ್ಮಿಕೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ಸಮಾವೇಶದಲ್ಲಿ ವಿದ್ಯಾರ್ಥಿಗಳೇ ಸಿದ್ಧಪಡಿಸಿದ್ದ ವಿಜ್ಞಾನ ಉಪಕರಣಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. 

ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಅವರ ಆಸಕ್ತಿ ವಿಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಕ್ರಿಯಾಶೀಲರಾಗುವಂತೆ ಮಾಡಲು ವಿಜ್ಞಾನದ ಚಟುವಟಿಕೆಗಳ ಸಾಯಿನ್ಸ್‌ ಕಾರ್ನಿವಲ್‌ನ ಮುಂದುವರಿದ ಭಾಗವಾಗಿ ನಡೆದ ಈ ಸಮಾವೇಶದಲ್ಲಿ ಅನೇಕ ವಿದ್ಯಾರ್ಥಿಗಳು ತಾವೇ ಆಸಕ್ತಿಯಿಂದ ಸಿದ್ಧಪಡಿಸಿದ ವಿಜ್ಞಾನ  ಮಾದರಿಗಳನ್ನು ಪ್ರದರ್ಶಿಸಿದ್ದನ್ನು ನೋಡಿದಾಗ ಈ ಭಾಗದಲ್ಲಿ ವೈಜ್ಞಾನಿಕ ಕ್ರಾಂತಿಯಾಗುವುದರಲ್ಲಿ ಸಂಶಯವಿಲ್ಲ. 

ಪಾಲಕರು ತಮ್ಮ ಮಕ್ಕಳಲ್ಲಿರುವ ವಿಜ್ಞಾನದ ಆಸಕ್ತಿಯನ್ನು ಬೆಳೆಸಿ ಪೋಷಿಸಬೇಕು ಎಂದರು. ಎ.ಆರ್‌.ಸಿ. ಪ್ರತಿಷ್ಠಾನ ಅಧ್ಯಕ್ಷ ಅರುಣ ಚರಂತಿಮಠ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಅನ್ವೇಷಣೆ ಹಾಗೂ ಚಿಂತನೆಯಲ್ಲಿ ವಿಶೇಷ ಆಸಕ್ತಿ ಹುಟ್ಟಿಸಲು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯೊಂದಿಗೆ ಲೀಲಾವತಿ ಚರಂತಿಮಠ ಪಬ್ಲಿಕ್‌ ಶಾಲೆ ಒಡಂಬಡಿಕೆ ಮಾಡಿಕೊಂಡ ಮೊದಲ ಶಾಲೆಯಾಗಿ ಹೊರ ಹೊಮ್ಮಲಿದೆ.

ಜೊತೆಗೆ ಬರುವ ಶೈಕ್ಷಣಿಕ ವರ್ಷದಿಂದ ಶಾಲೆಯು ಇಂಟರ್‌ ಷನಲ್‌ ಜನರಲ್‌ ಸರ್ಟಿμಕೇಟ್‌ ಆಫ್‌ ಸೆಕೆಂಡಟರಿ ಎಜ್ಯುಕೇಷನ್‌ (ಐಜಿಸಿಎಸ್‌ಇ) ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲಿರುವ ಹುಬ್ಬಳ್ಳಿ -ಧಾರವಾಡದ ಮೊದಲ ಶಾಲೆಯಾಗಲಿದೆ ಎಂದರು. ಈ ವಿಜ್ಞಾನ ಪ್ರದರ್ಶನದಲ್ಲಿ ಪ್ರದರ್ಶಿಸಿದ ಮಾದರಿ ಪ್ರಾತ್ಯಕ್ಷಿಕೆಗಳನ್ನು ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ಭೌತಶಾಸ್ತ್ರ ಪ್ರಾಧ್ಯಾಪಕ ಡಾ|ಭಜಂತ್ರಿ, 

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜೀವಕುಮಾರ ಭೂಶೆಟ್ಟಿ, ಕವಿವಿ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯುರೇಟರ್‌ ಸಂದೀಪ ಅವರು ಮೌಲ್ಯಮಾಪಕರಾಗಿ ಮಾದರಿಗಳನ್ನು ಪರಿಶೀಲಿಸಿ ಅಂಕಗಳನ್ನು ದಾಖಲಿಸಿದರು. ಶಾಲೆಯ ಪ್ರಾಂಶುಪಾಲ ಅಶ್ವನಿಕುಮಾರ, ವೀಣಾ ಮಣಿ, ಅನುಷಾ ಚರಂತಿಮಠ, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.  

ಟಾಪ್ ನ್ಯೂಸ್

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.