![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 9, 2024, 5:56 PM IST
ಕುಂದಗೋಳ: ಪಟ್ಟಣದ ಸಾದಗೇರಿ ಓಣಿಯಲ್ಲಿನ ಮನೆಯೊಂದು ಕುಸಿದ ಪರಿಣಾಮ ಆಟವಾಡಲು ತೆರಳಿದ್ದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಶುಕ್ರವಾರ(ಆ.9) ಮಧ್ಯಾಹ್ನ ಸಂಭವಿಸಿದೆ.
ಅಮೃತಾ ಗದಿಗೆಪ್ಪ ಮೆಣಸಗೊಂಡ (5) ಮೃತಪಟ್ಟ ಬಾಲಕಿಯಾಗಿದ್ದಾಳೆ. ನಾಗರ ಪಂಚಮಿಯಂದು ಆಟವಾಡುವ ಸಲುವಾಗಿ ಬಾಲಕಿಯು ಪಕ್ಕದ ರಾಮಣ್ಣ ಕಾಳಪ್ಪ ಅರ್ಕಸಾಲಿ ಎಂಬುವವರ ಮನೆಗೆ ತೆರಳಿದ್ದಳು. ಇದೇ ಸಮಯ ಮಣ್ಣಿನ ಮೇಲ್ಚಾವಣಿ ಕುಸಿದ ಪರಿಣಾಮ ಬಾಲಕಿ ಅವಶೇಷಗಳಡಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಈ ವೇಳೆ ಮಣ್ಣು ತೆಗೆದು ರಕ್ಷಿಸುವಷ್ಟರಲ್ಲಿ ಬಾಲಕಿಯ ಪ್ರಾಣಪಕ್ಷಿ ಹಾರಿ ಹೋಗಿದೆ. ಜೊತೆಗಿದ್ದ ನಿಹಾರಿಕಾ ಕಮ್ಮಾರ (2) ಬಾಲಕಿಗೆ ಸಣ್ಣ,ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಘಟನೆಯ ಕುರಿತು ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೇಟಿ ನೀಡಿದ ಕಂದಾಯ ನಿರೀಕ್ಷಕ ಅಶೋಕ ಮಲ್ಲೂರ ಪರಿಶೀಲಿಸಿ ತಕ್ಷಣ ಜಿಲ್ಲಾಡಳಿತಕ್ಕೆ ವರದಿ ನೀಡುವುದಾಗಿ ತಿಳಿಸಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.