ಪ್ರಿಯತಮ ಕರೆ ಸ್ವೀಕರಿಸಲಿಲ್ಲ ಎಂದು ಯುವತಿ ಆತ್ಮಹತ್ಯೆ: ಮನನೊಂದ ಯುವಕನು ನೇಣಿಗೆ ಶರಣು
Team Udayavani, Nov 28, 2019, 2:48 PM IST
ಹುಬ್ಬಳ್ಳಿ: ಮದುವೆ ಆಗುವ ಹುಡುಗ ಫೋನ್ ಕರೆ ಸ್ವೀಕರಿಸಿಲಿಲ್ಲಾ ಎಂಬ ಕಾರಣಕ್ಕೆ ಯುವತಿ ವಿಷ ಸೇವಿಸಿ ಆತ್ಮಹತ್ಯಗೆ ಶರಣಾದರೆ, ಇತ್ತ ಪ್ರೇಯಸಿ ಸಾವಿನ ನೋವಿನಿಂದ ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ.
ರೇಖಾ (19) ವಿಷ ಸೇವಿಸಿದ ಯುವತಿಯಾಗಿದ್ದು, ವಿಷ್ಣು ಪಗಲಾಪುರ (20 ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಬುಧವಾರ ಸಂಜೆ ವೇಳೆ ರೇಖಾ ವಿಷ ಸೇವಿಸಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಪ್ರೇಯಸಿಯ ಸಾವು ಕಂಡ ವಿಷ್ಣು ಮನೆಗಡ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಕರ್ಕಿ ಬಸವೇಶ್ವರ ನಗರದ ನಿವಾಸಿಗಳಾಗಿದ್ದಾರೆ.
ಆತ್ಮಹತ್ಯೆಗೆ ಶರಣಾಗಿರುವ ಇಬ್ಬರು ಕಳೆದ ಐದಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಇವರ ಪ್ರೀತಿಗೆ ಮನೆಯವರ ವಿರೋಧವಿತ್ತು. ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಹಿರಿಯರು ಎರಡು ಮನೆಯವರನ್ನು ತಿಳಿ ಹೇಳಿ ನಿಶ್ಚಿತಾರ್ಥ ಮಾಡಿಸಿದ್ದಾರು. ನಿಶ್ಚಿತಾರ್ಥ ಅಗಿ ಐದಾರು ತಿಂಗಳು ಮಾತ್ರ ಕಳೆದಿವೆ. ಇನ್ನೇನು ಜನವರಿಯಲ್ಲಿ ಮದುವೆ ಮಾಡಬೇಕು ಎನ್ನುವ ತಯಾರಿ ಕೂಡ ನಡೆದಿತ್ತು. ಅದರೆ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಇಹಲೋಕ ತ್ಯೆಜಿಸಿದ್ದಾರೆ.
ಕರೆ ಸ್ವೀಕರಿಸಲಿಲ್ಲ!
ಆದ್ರೆ ನಿನ್ನೆ ರೇಖಾ, ವಿಷ್ಣುಗೆ ದಿನವೀಡಿ ಫೋನ್ ಕರೆ ಮಾಡಿದ್ದಾಳೆ. ಆದ್ರೆ ವಿಷ್ಣು ಫೋನ್ ಕರೆ ಸ್ವೀಕರಿಸಿಲ್ಲ. ಇದರಿಂದ ಮನನೊಂದ ಯುವತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿಯುತ್ತಿದಂತೆ ತನ್ನ ಅಜ್ಜಿಯ ಮನೆಗೆ ತೆರಳಿದ ವಿಷ್ಣು ನೇಣಿಗೆ ಕೊರಳೊಡಿದ್ದಾನೆ. ಬಾಳಿ ಬದುಕಬೇಕಾದ ಇಬ್ನರ ಅಗಲಿಕೆಯಿಂದ ಎರಡು ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.