ಸಮಯಕ್ಕೆ ಮಹತ್ವ ನೀಡಿ: ಶಿರೂರ
Team Udayavani, Apr 18, 2018, 4:54 PM IST
ಇಳಕಲ್ಲ: ವಿದ್ಯಾರ್ಥಿ ಜೀವನದಲ್ಲಿ ಮರಳಿ ಬರಲಾರದು ಸಮಯವೊಂದೆ ಅದಕ್ಕಾಗಿ ಮೊದಲು ಸಮಯಕ್ಕೆ ಮಹತ್ವ ನೀಡಬೇಕು. ಅಂದರೆ ಮಾತ್ರ ನೀವು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಜಮಖಂಡಿ ತಾಲೂಕಿನ ಹುನೂರ ಸರಕಾರಿ ಪ್ರಥಮ
ದರ್ಜೆ ಕಾಲೇಜಿನ ಪ್ರಾಚಾರ್ಯೆ ಸುನಂದಾ ಶಿರೂರ ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2017-18ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ಪದವಿ ತರಗತಿಗಳ ಅಂತಿಮ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನಾವು ಯಾವುದೇ ಪರಿಸರಕ್ಕೆ ಹೊಂದಿಕೊಂಡಾಗ ಅದನ್ನು ಬಿಡಬೇಕಾದರೆ ಬಹಳ ಕಷ್ಟವೆನಿಸುವುದು. ಅಂತಹ ಒಂದು ಭಾವನಾತ್ಮಕ ಸಂಬಂಧ ಬೆಳೆಯುವುದು. ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಮಹಾವಿದ್ಯಾಲಯಗಳಲ್ಲಿ ಸಾಕಷ್ಟು ಅವಕಾಶಗಳಿವೆ. ಯಾರದೋ ಒತ್ತಡಕ್ಕೊಳಗಾಗಿ ನಿಮ್ಮ ಜೀವನದ ಗುರಿಯನ್ನು ಬದಲಿಸಿಕೊಳ್ಳದೆ, ನಿಮ್ಮ ಮುಂದಿನ ಜೀವನವನ್ನು ನೀವೇ ರೂಪಿಸಿಕೊಳ್ಳುವಂತ ಸ್ವತಂತ್ರ ವಿಚಾರ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು.
ಪ್ರಾಚಾರ್ಯ ನಾಗರಾಜ ಮುದಗಲ್ಲ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಹೊಂದಿರುವ ಸಮಾನ ಮನಸ್ಕ ಗುಣಗಳನ್ನು ಹೊಂದಿರುವಂತವರ ಗೆಳೆತನ ಮಾಡಿ ಸಮಾಜದಲ್ಲಿ ಗೌರವಯುತ ಸ್ಥಾನದಲ್ಲಿ ಗುರುತಿಸುವಂತವರಾಗಿರಿ ಎಂದರು. ಇದೇ ಸಂದರ್ಭದಲ್ಲಿ 2017-18ನೇ ಸಾಲಿನ ಕಬಡ್ಡಿ ಹಾಗೂ ಖೋಖೋ ಪಂದ್ಯಗಳಲ್ಲಿ ಯುನಿವರ್ಸಿಟಿ ಬ್ಲೂಗಳಾದ ವಿದ್ಯಾರ್ಥಿಗಳನ್ನು
ಸನ್ಮಾನಿಸಲಾಯಿತು. ನಾಗರತ್ನ, ಸಂಗಮೇಶ, ವಿದ್ಯಾಶ್ರೀ ಹಾಗೂ ನಜೀದಾಬೇಗಂ ಅನಿಸಿಕೆ ವ್ಯಕ್ತಪಡಿಸಿದರು. ಕೃಷ್ಣ ಹೊನ್ನಳ್ಳಿ, ನಜೀದಾಬೇಗಂ ಉಪಸ್ಥಿತರಿದ್ದರು.
ದೈಹಿಕ ಸಂಯೋಜಕ ನೀಲಪ್ಪ ಕುರಿ ಸ್ವಾಗತಿಸಿದರು. ಡಾ.ಲಿಂಗಪ್ಪ ಗಗ್ಗರಿ ವರದಿ ವಾಚನ ಓದಿದರು. ಐಕ್ಯುಎಸಿ ಸಂಯೋಜಕಿ ವಿದ್ಯಾವತಿ ಗೋಟೂರ ವಂದಿಸಿದರು. ಎಂ.ಬಿ. ಒಂಟಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.