ಪ್ರಯಾಣಿಕರಿಂದ ನಿನ್ನೆಯೂ ಉತ್ತಮ ಪ್ರತಿಕ್ರಿಯೆ

Team Udayavani, May 21, 2020, 7:19 AM IST

ಪ್ರಯಾಣಿಕರಿಂದ ನಿನ್ನೆಯೂ ಉತ್ತಮ ಪ್ರತಿಕ್ರಿಯೆ

ಹುಬ್ಬಳ್ಳಿ: ಎರಡನೇ ದಿನ ಬಸ್‌ ಸಂಚಾರಕ್ಕೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ಸಾರಿಗೆ ವಿಭಾಗಗಳಿಂದ ಬುಧವಾರ 156 ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗಿದೆ.

ರಾಜ್ಯ ಸರಕಾರ ಬಸ್‌ ಸಂಚಾರಕ್ಕೆ ಅನುಮತಿ ನೀಡಿದ ಮೊದಲ ದಿನ ಎರಡು ವಿಭಾಗಗಳಿಂದ 125 ಬಸ್‌ ಗಳನ್ನು ಕಾರ್ಯಾಚರಣೆ ಮಾಡಲಾಗಿತ್ತು. ಎರಡನೇ ದಿನ 156 ಬಸ್‌ಗಳು ಸಂಚಾರ ಮಾಡಿದ್ದು, ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಾಗಿದೆ. ದೂರುದ ಊರುಗಳಿಗೆ ಬೆಳಗಿನ ಸಮಯದಲ್ಲೇ ಬಸ್‌ಗಳು ಹೊರಡುವ ಕಾರಣದಿಂದ ಪ್ರಯಾಣಿಕರು ಕೂಡ ಬೆಳಗ್ಗೆ ಬಂದು ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ ದೂರದ ಊರುಗಳಿಗೆ ಪ್ರಯಾಣ ಬೆಳೆಸಿದರು. ಇನ್ನೂ ಮಹಾನಗರ ವ್ಯಾಪ್ತಿಯಲ್ಲೂ ಕೂಡ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಾಗಿದ್ದು, ದಿನ ಕಳೆದಂತೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

ಬೆಂಗಳೂರಿಗೆ ಹೆಚ್ಚಿನ ಪ್ರಯಾಣಿಕರು ಸಂಚರಿಸಬಹುದು ಎನ್ನುವ ಹಿನ್ನೆಲೆಯಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಹೀಗಾಗಿ ನಗರದಿಂದ ಒಟ್ಟು 18 ಬಸ್‌ಗಳು ಬೆಂಗಳೂರಿಗೆ ಸಂಚರಿಸಿವೆ. ಉಳಿದಂತೆ ಬೆಳಗಾವಿ-7, ಹಾವೇರಿ-9, ಬೆಳಗಾವಿ-7 ವಿಜಯಪುರ-6, ಬಾಗಲಕೋಟೆ-2 ಹಾಗೂ ಗದಗ-17 ಸೇರಿದಂತೆ ಅಂತರ ಜಿಲ್ಲೆಗಳಿಗೆ ಪ್ರಯಾಣಿಕರು ತೆರಳಿದ್ದಾರೆ. ಇನ್ನೂ ಹೊರ ವಿಭಾಗದಿಂದ ಆಗಮಿಸಿದ ಬಸ್‌ಗಳ ಮೂಲಕವು ಪ್ರಯಾಣಿಕರು ತೆರಳಿದ್ದಾರೆ. ಇನ್ನೂ ರಾತ್ರಿಯೂ ಕೂಡ ಒಂದು ನಾನ್‌ ಎಸಿ ಸ್ಲೀಪರ್‌ ಬಸ್ಸನ್ನು ಬೆಂಗಳೂರಿಗೆ ಕಳುಹಿಸಲಾಯಿತು.

ಪ್ರಯಾಣಿಕರಲ್ಲಿ ಗೊಂದಲ: ಮೊದಲ ದಿನ ಬಸ್‌ಗಳ ವೇಳಾಪಟ್ಟಿಯ ಕುರಿತು ಪ್ರಯಾಣಿಕರಿಗೆ ಮಾಹಿತಿ ಇಲ್ಲದ ಪರಿಣಾಮ ದೂರದ ಊರುಗಳಿಗೆ ತೆರಳುವವರು ಮಧ್ಯಾಹ್ನ ಬಂದು ಬಸ್‌ ಇಲ್ಲದೆ ವಾಪಸ್‌ ತೆರಳಿದ್ದು, ಆದರೆ ಎರಡನೇ ದಿನ ದೂರುದ ಊರುಗಳಿಗೆ ಪ್ರಯಾಣಿಸುವವರರು ಬೆಳಿಗ್ಗೆಯೇ ನಿಲ್ದಾಣಕ್ಕೆ ಬಂದಿದ್ದರು. ಇನ್ನೂ ಬೇರೆ ಬೇರೆ ನಗರಗಳಿಂದ ಸಂಜೆ ವೇಳೆ ನಗರಕ್ಕೆ ಆಗಮಿಸಿದ ಕೆಲ ಪ್ರಯಾಣಿಕರು ತಾಲೂಕು ಕೇಂದ್ರಗಳಿಗೆ ತೆರಳಲು ಬಸ್‌ಗಳಿಲ್ಲದೆ ಇಡೀ ರಾತ್ರಿ ನಿಲ್ದಾಣದಲ್ಲಿ ಕಳೆಯುವಂತಾಗಿತ್ತು.

ಹುಬ್ಬಳ್ಳಿ ಗ್ರಾಮಾಂತರ ಸಾರಿಗೆ ವಿಭಾಗ :  ಗೋಕುಲ ರಸ್ತೆ ಹೊಸ ಬಸ್‌ ನಿಲ್ದಾಣ, ಹಳೇ ಬಸ್‌ ನಿಲ್ದಾಣ, ಹೊಸೂರು ಟರ್ಮಿನಲ್‌ ನಿಲ್ದಾಣಗಳ ಮೂಲಕ ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ 91 ಬಸ್‌ಗಳನ್ನುಕಾರ್ಯಾಚರಣೆಗೊಳಿಸಲಾಗಿದೆ. ಮೊದಲ ದಿನ 1.46 ಲಕ್ಷ ಆದಾಯವಿದ್ದರೆ ಎರಡನೇ ದಿನ 4.08 ಲಕ್ಷ ರೂ. ಆದಾಯ ಬಂದಿದೆ. ಇನ್ನೂ ಮೊದಲ ದಿನ 2932 ಪ್ರಯಾಣಿಕರು ಸಂಚಾರ ಮಾಡಿದರೆ ಎರಡನೇ ದಿನ 3915 ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಮೂರನೇ ದಿನಪ್ರಯಾಣಿಕ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎನ್ನುವ ನಿರೀಕ್ಷೆ ಅಧಿಕಾರಿಗಳಲ್ಲಿದೆ.

ಹುಬ್ಬಳ್ಳಿ ನಗರ ಸಾರಿಗೆ ವಿಭಾಗ :  ಮಹಾನಗರ ಸಾರಿಗೆ ವ್ಯಾಪ್ತಿಯಲ್ಲೂ ಎರಡನೇ ದಿನ ಪ್ರಯಾಣಿಕರ ಸಂಖ್ಯೆ ಹಚ್ಚಾಗಿದೆ. ಮೊದಲ ದಿನ 63 ಬಸ್‌ಗಳನ್ನು ಸಂಚರಿಸಲಾಗಿತ್ತು. ಎರಡನೇ ದಿನ 65 ಬಸ್‌ಗಳು ರಸ್ತೆಗಿಳಿದವು. ಉನಗರ ಸಾರಿಗೆಗೆ ಅಷ್ಟೊಂದು ಬೇಡಿಕೆಯಿಲ್ಲದ ಪರಿಣಾಮ ಬಸ್‌ಗಳ ಸಂಖ್ಯೆ ಕಡಿಮೆ ಮಾಡಿದ ಹುಬ್ಬಳ್ಳಿ-ಧಾರವಾಡ ನಡುವಿನ ಸಂಚಾರಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು. ನಗರ 18, ಉಪನಗರ-11 ಹಾಗೂ ಹು-ಧಾ ಅವಳಿ ನಗರ ನಡುವೆ-36 ಬಸ್‌ಗಳು ಸಂಚಾರ ಮಾಡಿವೆ.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

siddaramaiah

Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ

siddaramaiah

Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್‌ ಹೋರಾಟ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.