ನೂತನ ತಾಲೂಕುಗಳತ್ತ ಸರ್ಕಾರದ ನಿರ್ಲಕ್ಷ್ಯ

•ತಾಲೂಕು ಮಟ್ಟದ ಕಚೇರಿಗಳೇ ಇಲ್ಲದೆ ಜನರಿಗೆ ಸೌಲಭ್ಯ ತಲುಪುವುದು ಹೇಗೆ?: ನಿಂಬಣ್ಣವರ

Team Udayavani, Jun 26, 2019, 2:03 PM IST

hubali-tdy-3..

ಅಳ್ನಾವರ: ಪಟ್ಟಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಶಾಸಕ ಸಿ.ಎಂ. ನಿಂಬಣ್ಣವರ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಅಳ್ನಾವರ: ನೂತನ ತಾಲೂಕುಗಳ ರಚನೆ ಕಾಟಾಚಾರಕ್ಕೆ ಎಂಬಂತಾಗದೆ ಅವುಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವತ್ತ ಸರ್ಕಾರ ಗಮನ ಹರಿಸಬೇಕು. ಜನರಿಗೆ ಸರ್ಕಾರಿ ಸೇವೆ ಸಮರ್ಪಕವಾಗಿ ದೊರೆಯುವಂತೆ ಮಾಡಬೇಕೆಂದು ಕಲಘಟಗಿ ಶಾಸಕ ಸಿ.ಎಮ್‌. ನಿಂಬಣ್ಣವರ ಒತ್ತಾಯಿಸಿದರು.

ಪಟ್ಟಣದಲ್ಲಿ ಮಂಗಳವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನೂತನ ಅಳ್ನಾವರ ತಾಲೂಕು ಕೇಂದ್ರದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರ್‌ ಕಚೇರಿ ಹೊರತುಪಡಿಸಿ ಬೇರೆ ಇನ್ನಾವುದೇ ಕಚೇರಿಗಳನ್ನು ಪ್ರಾರಂಭಿಸುವ ಕಡೆಗೆ ಸರ್ಕಾರ ಗಮನ ಹರಿಸಿಲ್ಲ ಎಂದು ಆರೋಪಿಸಿದರು.

ತಾಲೂಕು ಮಟ್ಟದ ಕಚೇರಿಗಳು ಇಲ್ಲದೆ ಸರ್ಕಾರದ ಯೋಜನೆಗಳು ಜನರಿಗೆ ತಲುಪುವುದಾದರೂ ಹೇಗೆ? ಅತಿ ಮುಖ್ಯವಾಗಿ ರೈತರಿಗೆ ಸಕಾಲದಲ್ಲಿ ಪಹಣಿ ಪತ್ರಿಕೆಗಳು ದೊರೆಯುತ್ತಿಲ್ಲ. ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳು ಸಿಗುತ್ತಿಲ್ಲ. ಸಿಬ್ಬಂದಿ ಕೊರತೆ ಎಲ್ಲ ಇಲಾಖೆಗಳಲ್ಲಿ ಕಂಡು ಬರುತ್ತಿದೆ. ದಿನವಿಡೀ ಸರದಿಯಲ್ಲಿ ನಿಂತರೂ ಉತಾರಗಳು ದೊರೆಯದೆ ರೈತರು ಪರದಾಡುತ್ತಿದ್ದಾರೆ. ಇದರತ್ತ ಜಿಲ್ಲಾಧಿಕಾರಿ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಅಳ್ನಾವರ ತಾಲೂಕು ಕೇಂದ್ರದಲ್ಲಿ ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಜಾಗೆ ಗುರುತಿಸಿ ಕೂಡಲೆ ಕೆಲಸ ಪ್ರಾರಂಭಿಸಬೇಕು. ಇದಕ್ಕಾಗಿ ವಿಶೇಷ ಪ್ಯಾಕೇಜ್‌ ಬಿಡುಗಡೆ ಮಾಡಬೇಕು. ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಮೀತಿ ಮೀರಿದೆ. 2017ರಲ್ಲಿ ಕಾಳಿ ನದಿ ಯೋಜನೆ ಮಂಜೂರಾಗಿದ್ದರೂ ಇನ್ನುವರೆಗೂ ಕಾಮಗಾರಿ ವಿದ್ಯುಕ್ತವಾಗಿ ಕಾರ್ಯಾರಂಭವಾಗಿಲ್ಲ. ಆಮೆ ಗತಿಯಲ್ಲಿ ಕೆಲಸಗಳು ನಡೆಯುತ್ತಿವೆ. ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದರು.

ಬೆಳೆ ವಿಮೆ: ಮಳೆಗಾಲ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ರೈತರು ಬೆಳೆಗಳಿಗೆ ವಿಮೆ ಮಾಡಿಸಲು ಬ್ಯಾಂಕ್‌ಗಳಿಗೆ ಅಲೆಯುತ್ತಿದ್ದರೂ ವಿಮೆ ಕಂತು ತುಂಬಲು ಬ್ಯಾಂಕ್‌ ಸಿಬ್ಬಂದಿ ನಿರಾಕರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಲೀಡ್‌ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಶಾಸಕರು ತಿಳಿಸಿದರು.

ಪಟ್ಟಣದ ಕುಡಿಯುವ ನೀರಿನ ಯೋಜನೆಯನ್ನು ನಿಗದಿತ ಕಾಲಾವಧಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗುತ್ತಿಗೆದಾರರ ಮೇಲೆ ನಿಗಾ ವಹಿಸಿ ಗುಣಮಟ್ಟದ ಕಾಮಗಾರಿ ಮಾಡಿಸಲು ಜಲಮಂಡಳಿ ಮತ್ತು ಪಪಂ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

ಶಂಕರ ಬಸವರೆಡ್ಡಿ, ಲಿಂಗರಾಜ ಮೂಲಿಮನಿ, ಶಿವಾಜಿ ಡೊಳ್ಳಿನ, ಅನಂತ ರವಳಪ್ಪನವರ, ಪ್ರವೀಣ ಪವಾರ, ಅಶೋಕ ಬಸಣ್ಣವರ ಮುಂತಾದವರಿದ್ದರು.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.