ಹೋಂ ಕ್ವಾರಂಟೈನ್ ಮೀರಿದ ಐವರಿಗೆ ಸರ್ಕಾರಿ ಕ್ವಾರಂಟೈನ್
Team Udayavani, May 20, 2020, 8:10 AM IST
ಸಾಂದರ್ಭಿಕ ಚಿತ್ರ
ಧಾರವಾಡ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಹೊರಗಡೆ ತಿರುಗಾಟ ನಡೆಸಿದ್ದ ಐವರನ್ನು ಮಂಗಳವಾರ ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.
ಕೋವಿಡ್ ಸೋಂಕಿತರೊಂದಿಗೆ ಎರಡನೇ ಹಂತದ (ಸೆಕೆಂಡರಿ) ಸಂಪರ್ಕ ಹೊಂದಿದ್ದ ಜನರನ್ನು ಗುರುತಿಸಿ ಜಿಲ್ಲಾದ್ಯಂತ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಜಿಯೋ ಫೆನ್ಸಿಂಗ್ ಅಳವಡಿಸಿ ಇವರೆಲ್ಲರ ಮೇಲೆ ನಿಗಾ ವಹಿಸಲಾಗಿದೆ. ಜಿಯೊ ಫೆನ್ಸಿಂಗ್ ವಲಯದಿಂದ ಹೊರಬಂದ ಕೂಡಲೇ ಕಂಟ್ರೋಲ್ ರೂಮ್‌ಗೆ ಮಾಹಿತಿ ಲಭ್ಯವಾಗುತ್ತಿದೆ. ಈ ಮಾಹಿತಿ ಆಧರಿಸಿ ನವಲೂರ ಪ್ರದೇಶದಲ್ಲಿ ಹೋಂ ಕ್ವಾರಂಟೈನ್‌ನಲ್ಲಿರುವವರ ಮನೆಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ನಿಯಮ ಉಲ್ಲಂಘಿಸದಿರಲು ಎಚ್ಚರಿಕೆ ನೀಡಿದರು.
ಹಲವು ಎಚ್ಚರಿಕೆಗಳ ನಂತರವೂ ನಿರಂತರವಾಗಿ ಹೊರಗಡೆ ಸಂಚಾರ ನಡೆಸಿದ್ದ ಐವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಸುಜಾತಾ ಹಸವಿಮಠ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅಯ್ಯನಗೌಡ ಪಾಟೀಲ ಅವರ ನೇತೃತ್ವದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರ ತಂಡ ವಶಕ್ಕೆ ಪಡೆದು ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.