ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ: ಬೊಮ್ಮಾಯಿ

Team Udayavani, Jun 19, 2023, 5:06 AM IST

ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ: ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷವು ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗಳ ಬಗ್ಗೆ ಈಗ ನಡೆದುಕೊಳ್ಳುತ್ತಿರುವುದನ್ನು ನೋಡಿದರೆ ಈ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲೂಕಿನ ಛಬ್ಬಿ ಗ್ರಾಮದಲ್ಲಿ ರವಿವಾರ ನೂತನ ಪ್ರೌಢಶಾಲೆ ಕಟ್ಟಡದ ಭೂಮಿಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯವಾಗಿ ಕಾಂಗ್ರೆಸ್‌ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್‌ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಈಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ಏನೇಯಾದರೂ ಬಡ ಜನರಿಗೆ ಒಳ್ಳೆಯದಾದರೆ ಸಾಕು. ಅಕ್ಕಿ ಎಲ್ಲಿಂದ ಹಾಗೂ ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕುಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಜು.1ರಿಂದ ಅಕ್ಕಿ ಕೊಡದೆ ಹೋದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ ಮಾಡಬಾರದು
ಶಿಗ್ಗಾವಿ
: ಉಚಿತ ಕೊಡುಗೆಗಳ ಭರದಲ್ಲಿ ಸರ್ಕಾರ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ ಮಾಡಬಾರದು. ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಅನುದಾನ ಕಡಿತವಾಗುವ ಸಾಧ್ಯತೆ ಇದೆ. ಸರ್ಕಾರ ಅದು ಆಗದಂತೆ ನೋಡಿಕೊಳ್ಳಬೇಕೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲೂಕಿನ ಮಡ್ಲಿ ಗ್ರಾಮದಲ್ಲಿ ಭಾನುವಾರ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಾಜಿ ಸಿಎಂ ಎರಡು ಶಾಲಾ ಕೊಠಡಿಗಳ ಉದ್ಘಾಟನೆಗೆ ಬಂದಿದ್ದಾರೆ ಎಂದು ನಿಮಗೆ ಆಶ್ಚರ್ಯ ಆಗಬಹುದು. ನಾನು ರಾಜ್ಯದ ಭವಿಷ್ಯ ಬರೆಯುವ ದೇಗುಲಗಳ ಉದ್ಘಾಟನೆ ಮಾಡಿದ್ದೇನೆ. ಒಂದು ಗ್ರಾಮಕ್ಕೆ ಕುಡಿಯುವ ನೀರು, ಆರೋಗ್ಯದ ಜತೆಗೆ ಶಾಲಾ ಕೊಠಡಿಗಳು ಸಹ ಮುಖ್ಯ. ಅದಕ್ಕಾಗಿ ನಾನು ಶಾಲಾ ಕೊಠಡಿ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ. ವಿವೇಕ ಯೋಜನೆಯಡಿ ಸುಮಾರು 9235 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶ ಮಾಡಿದ್ದೇವೆ ಎಂದರು.

ವಿದ್ಯುತ್‌ ನೀಡದಿದ್ದರೆ ಕುಡಿವ ನೀರಿಗೆ ಹಾಹಾಕಾರ
ರಾಜ್ಯ ಸರ್ಕಾರ ನಿರಂತರವಾಗಿ ವಿದ್ಯುತ್‌ ಸರಬರಾಜು ಮಾಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ವಿದ್ಯುತ್‌ ದರ ಹೆಚ್ಚಿಗೆ ಮಾಡಿರುವುದರಿಂದ ಜನರು ಬಿಲ್‌ ಕಟ್ಟಲು ನಿರಾಕರಿಸುತ್ತಿದ್ದಾರೆ. ಬಿಲ್‌ ಕಟ್ಟಲಿಲ್ಲ ಎಂದರೆ ಕರೆಂಟ್‌ ಸಪ್ಲೆ„ ಆಗುವುದಿಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬರ ಆಗಿದೆ. ರೈತರಿಗೆ ಹಾಗೂ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ. ಜನಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ವಿದ್ಯುತ್‌ ಬೇಕು. ಬೋರ್‌ವೆಲ್‌ಗ‌ಳಿಂದ ಹಾಗೂ ಅನೇಕ ಕೆಲಸಗಳಿಗೆ ವಿದ್ಯುತ್‌ ಬೇಕೇಬೇಕು. ಸರ್ಕಾರ ವಿದ್ಯುತ್‌ ನೀಡದಿದ್ದರೆ ಕಷ್ಟವಾಗುತ್ತದೆ. ಹೈಡ್ರೊ ಎಲೆಕ್ಟ್ರಿಕ್‌ ಪವರ್‌ ಕೊರತೆ ಇದೆ. ಹೀಗಾಗಿ ವಿದ್ಯುತ್‌ ಇಲಾಖೆಯ ಎಲ್ಲಾ ನಿಗಮಗಳಿಗೆ ಹಣ ಬಿಡುಗಡೆ ಮಾಡಬೇಕು. ಇವರು ಸರಿಯಾದ ಕ್ರಮ ತೆಗೆದಕೊಳ್ಳದಿದ್ದರೆ ವಿದ್ಯುತ್ಛಕ್ತಿಯ ûಾಮ ಎದುರಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.